ಕೋಲ್ಕತ್ತಾ: 2024ರಲ್ಲಿ ಬಿಜೆಪಿಯನ್ನು ಬೇರು ಸಮೇತ ಕಿತ್ತೆಸೆಯಬೇಕಾದರೆ ಪ್ರತಿ ಮನೆಯಲ್ಲೂ ಕೋಟೆ ಕಟ್ಟಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
2024ರಲ್ಲಿ ಬಿಜೆಪಿಯನ್ನು ಬೇರು ಸಮೇತ ಕಿತ್ತೆಸೆಯಬೇಕಾದರೆ ಪ್ರತಿ ಮನೆಯಲ್ಲೂ ಕೋಟೆ ಕಟ್ಟಬೇಕು. ಉತ್ತರ ಪ್ರದೇಶ, ಬಿಹಾರ, ತ್ರಿಪುರಾ, ಅಸ್ಸಾಂ, ರಾಜಸ್ಥಾನ ಮತ್ತು ಹರಿಯಾಣ ಸೇರಿದಂತೆ ಇತರ ರಾಜ್ಯಗಳಲ್ಲಿಯೂ ಇಂತಹ ಕೋಟೆಗಳನ್ನು ನಿರ್ಮಿಸಬೇಕಾಗುತ್ತದೆ. ನೀವು ಸಕ್ರಿಯರಾಗಿರಬೇಕು. ಬೆಳಗ್ಗೆ ಒಂದು ಟ್ವೀಟ್ ಇದ್ದರೆ, ಮಧ್ಯಾಹ್ನ ಮತ್ತೊಂದು ವೈರಲ್ ಆಗಬಹುದು. ಹೀಗೆ ವ್ಯರ್ಥ ಮಾಡಲು ಸಮಯವಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಾರಣಾಸಿಯಲ್ಲಿ EVM ಕಳವು: ಅಖಿಲೇಶ್ ಯಾದವ್ ಗಂಭೀರ ಆರೋಪ
ಬಿಜೆಪಿ ವಿರುದ್ಧ ರಾಜಕೀಯ ಪಕ್ಷಗಳು ಒಗ್ಗೂಡಬೇಕು ಎಂದು ಮಮತಾ ಬ್ಯಾನರ್ಜಿ ಒತ್ತಿ ಹೇಳಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಪರ್ಯಾಯವಿಲ್ಲದ ಕಾರಣ ನೀವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದೀರಿ. ಪರ್ಯಾಯ ಶಕ್ತಿ ಬಂದ ಮೇಲೆ ನೀವು ಅಧಿಕಾರದಲ್ಲಿ ಉಳಿಯುವುದಿಲ್ಲ. ಪರ್ಯಾಯ ಶಕ್ತಿ ರೂಪಿಸಲು ರಾಜಕೀಯ ಪಕ್ಷಗಳು ಒಗ್ಗೂಡಬೇಕಿದೆ. ಕೇವಲ ಹೇಳಿಕೆಗಳನ್ನು ನೀಡುವುದರಿಂದ ಯಾವುದೇ ಉದ್ದೇಶವನ್ನು ಪೂರೈಸಲಾಗದು ಎಂದು ಪ್ರತಿಪಕ್ಷಗಳಿಗೆ ಸಲಹೆ ನೀಡಿದ್ದಾರೆ.
ಒಂದು ದಶಕದಿಂದ ಅಧಿಕಾರದಲ್ಲಿರುವ ಪಶ್ಚಿಮ ಬಂಗಾಳವನ್ನು ಮೀರಿ ತನ್ನ ಹೆಜ್ಜೆ ಗುರುತನ್ನು ವಿಸ್ತರಿಸಲು ತೃಣಮೂಲ ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಇಂತಹ ಸಂದರ್ಭದಲ್ಲಿ ವಿರೋಧ ಪಕ್ಷಗಳು ಒಂದಾಗುವ ಅಗತ್ಯವಿದೆ ಎಂದು ಆಶಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೈಲಾದಷ್ಟು ಹೋರಾಡಿದ್ದೇವೆ, ಫಲಿತಾಂಶವನ್ನು ಕಾದು ನೋಡುತ್ತೇವೆ: ಪ್ರಿಯಾಂಕಾ ಗಾಂಧಿ
ಮೂರು ತಿಂಗಳ ಅವಧಿಯಲ್ಲಿ ಟಿಎಂಸಿಯ ಚಿಹ್ನೆ ಹಲವು ಮನೆಗಳಿಗೆ ತಲುಪಿರುವುದು ನಮಗೆ ಸಂತಸ ತಂದಿದೆ. ನಾವು ಮೊದಲೇ ಇದನ್ನು ಪ್ರಾರಂಭಿಸಿದ್ದರೆ ಮತ್ತಷ್ಟು ಉತ್ತಮ ಫಲಿತಾಂಶ ಸಿಗುತ್ತಿತ್ತು ಎಂದು ತಿಳಿಸಿದ್ದಾರೆ.
2024ರಲ್ಲಿ ಸಂಸತ್ ಹಾಗೂ 2023ರಲ್ಲಿ ರಾಜ್ಯ ಪಂಚಾಯತ್ ಚುನಾವಣೆಗಳು ನಡೆಯಲಿವೆ. ಹೀಗಾಗಿ ಟಿಎಂಸಿ ವರಿಷ್ಠರು ಚುನಾವಣಾ ಪರೀಕ್ಷೆಗೆ ಹೇಗೆ ತಯಾರಿ ನಡೆಸಬೇಕು ಎಂಬುದರ ಕುರಿತು ಪಕ್ಷದ ನಾಯಕರೊಂದಿಗೆ ಸಭೆ ನಡೆಸಿದ್ದಾರೆ. ಇದನ್ನೂ ಓದಿ: ಮಹಿಳೆಯರು ತಮ್ಮ ಶಕ್ತಿಯಿಂದ ಸಮಾಜವನ್ನು ಪರಿವರ್ತಿಸಬಲ್ಲರು: ರಾಹುಲ್