ಹಾವೇರಿ: ಕಾನೂನು ತೊಡಕಿನ ಮಧ್ಯೆಯೂ ಶಾಂತಿ ಕದಡುವ ಕೆಲಸಕ್ಕೆ ಇತಿಶ್ರೀ ಹಾಡುವ ಕೆಲಸ ಮಾಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
Advertisement
ನಂಜನಗೂಡು ಘಟನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಂಜನಗೂಡು ಘಟನೆ ನಡೆದ ಬಳಿಕ ಅನೇಕರ ಬಳಿ ಈ ಕುರಿತು ಚರ್ಚೆ ಮಾಡಿದ್ದೇನೆ. ಕಾನೂನು ತೊಡಕಿನ ಮಧ್ಯೆಯೂ ಶಾಂತಿ ಕದಡುವ ಕೆಲಸಕ್ಕೆ ಇತಿಶ್ರೀ ಹಾಡುವ ಕೆಲಸ ಮಾಡಿದ್ದೇನೆ. ಅಲ್ಲಿನ ಭಕ್ತರಿಗೆ ಘಾಸಿಯಾಗಿದೆ. ಅದನ್ನು ಸರಿದೂಗಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಭೇಟಿ ನೀಡಬಹುದು – ಜಿಲ್ಲಾಡಳಿತದಿಂದ ನಿರ್ಬಂಧ ತೆರವು
Advertisement
Advertisement
ಪಕ್ಷದ ಮಾರ್ಗದರ್ಶನ ಪಡೆದು ಆ ಭಾಗದ ಜನರ ಭಾವನೆಗೆ ಸ್ಪಂದನೆ ಮಾಡುವ ಕೆಲಸ ಮಾಡುತ್ತೇನೆ. ಎಲ್ಲರಿಗೂ ಒಪ್ಪಿಗೆ ಆಗುವಂತಹ ನಿರ್ಣಯ ತೆಗೆದುಕೊಳ್ತೇವೆ. ಈ ಸರ್ಕಾರ ನಮ್ಮ ಕಾರ್ಯಕರ್ತರದ್ದು, ಕಾರ್ಯಕರ್ತರ ಭಾವನೆ ನಮಗೆ ಅರ್ಥವಾಗುತ್ತೆ. ಅವರ ಭಾವನೆಗೆ ಬೆಲೆ ಕೊಡುವಂತಹ ನಿರ್ಣಯಗಳನ್ನು ತೆಗೆದುಕೊಳ್ತೇವೆ ಎಂದು ವಿಶ್ವಾಸದ ಮಾತುಗಳನ್ನಾಡಿದರು.
Advertisement
ಮಂದಿರದ ತೆರವು ಬಗ್ಗೆ ಪರಿಣಾಮಗಳನ್ನು ಯೋಚನೆ ಮಾಡದೆ ಶಾಂತಿ ಕದಡುವ ಪ್ರಯತ್ನಗಳು ನಡೆದಿವೆ. ಗುಜರಾತ್ ಸೇರಿದಂತೆ ಬೇರೆ ಬೇರೆ ರಾಜ್ಯದಲ್ಲಿಯೂ ಇದು ನಡೆದಿದೆ. ದೇಶವನ್ನು ಅಭದ್ರ ಮಾಡುವ ಕೆಲ ಸಂಗತಿಗಳು ನಡೆಯುತ್ತಿವೆ. ಇದಕ್ಕೆ ಕೆಲ ಅಧಿಕಾರಿಗಳು ಕೈ ಜೋಡಿಸಿದ್ದಾರೆ ಎಂದು ಅನುಮಾನವನ್ನು ವ್ಯಕ್ತಪಡಿಸಿದರು. ಮಂದಿರದ ವಿಚಾರದಲ್ಲಿ ಹಲವಾರು ನಾಯಕರು ಸಂಘಟನೆ, ಕಾನೂನು ಪಂಡಿತರೊಡನೆ ಚರ್ಚೆ ಮಾಡಿದ್ದೇನೆ ಎಂದು ಆತ್ಮವಿಶ್ವಾಸದಿಂದ ಹೇಳಿದರು. ಇದನ್ನೂ ಓದಿ: ರಾಜ್ಯದಲ್ಲೂ ಗುಜರಾತ್ ಮಾದರಿ ಸಂಪುಟ ರಚನೆಯಾದರೆ ಒಳ್ಳೆಯದು: ವಿಜಯೇಂದ್ರ
ಕಾನೂನು ಮತ್ತು ಆಡಳಿತಾತ್ಮಕ ಸಮಸ್ಯೆಗೆ ಪರಿಹಾರ ಕ್ರಮ ಕೈಗೊಳ್ಳುತ್ತೇನೆ. ಮಂದಿರದ ವಿಚಾರದಲ್ಲಿ ಕೆಲ ಭಕ್ತರಿಗೆ ನೋವಾಗಿದೆ. ಅಲ್ಲಿನ ಭಕ್ತರ ಮನಸ್ಸಿಗೆ ನೋವಾಗದಂತೆ ಸರಿಪಡಿಸುವ ಕೆಲಸ ಮಾಡುತ್ತೇವೆ. ನಮ್ಮ ಮಿತ್ರರಿಗೆ ಕರೆ ಕೊಡುತ್ತೇನೆ. ನಿಮ್ಮ ಭಾವನೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತೇವೆ. ಕಾನೂನಿನ ಚೌಕಟ್ಟಿನಲ್ಲಿ ಎಲ್ಲ ಸರಿದೂಗಿಸುವ ಕೆಲಸ ಮಾಡುತ್ತೇವೆ. ನಿಮ್ಮದೇ ಹಿತಚಿಂತನೆಯ ಸರ್ಕಾರ ಎಂದರು. ಇದನ್ನೂ ಓದಿ: ನೈಸ್ ರಸ್ತೆಯಲ್ಲಿ ಕಾರು ಪಲ್ಟಿ – ಪಾರ್ಟಿಯಿಂದ ಬರುವಾಗ ಅಪಘಾತ?