ಕೋವಿಡ್-19 ಲಸಿಕಾಕರಣದ ಬಳಿಕ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ: ಅಮಿತ್ ಶಾ

Public TV
2 Min Read
AMITSHAH 1

ನವದೆಹಲಿ: ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ಮುಸ್ಲಿಮೇತರ ಅಲ್ಪಸಂಖ್ಯಾತರಿಗೆ ಭಾರತೀಯ ಪೌರತ್ವವನ್ನು ನೀಡಲು ಅನುಕೂಲವಾಗುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು(ಸಿಎಎ) ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಇಂದು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿ ವೇಳೆ ಅಮಿತ್ ಶಾ ಸಿಎಎ ಜಾರಿಗೆ ತರುವ ಬಗ್ಗೆ ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.

Amit Shah Suvendu Adhikary

ಸರ್ಕಾರ ಏಪ್ರಿಲ್ ತಿಂಗಳಿನಲ್ಲಿ ಜನರಿಗೆ ಬೂಸ್ಟರ್ ಡೋಸ್ ನೀಡಲು ಪ್ರಾರಂಭಿಸಿದೆ. ಇದು 9 ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಈ ಕಾರ್ಯ ಮುಗಿದ ಬಳಿಕ ಸಿಎಎ ಯೋಜನೆಯನ್ನು ಅನುಷ್ಠಾನಕ್ಕೆ ತರಲು ಕೇಂದ್ರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸುವೆಂದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಸಂತೋಷವಾಗಿದೆ. ನಾವು ಸಂಸತ್ತಿನ ಕಚೇರಿಯಲ್ಲಿ ಸುಮಾರು 45 ನಿಮಿಷಗಳ ಕಾಲ ಮಾತುಕತೆ ನಡೆಸಿ, ಶಿಕ್ಷಕರ ನೇಮಕಾತಿ ಹಗರಣದಂತಹ ಭ್ರಷ್ಟ ಚಟುವಟಿಕೆಗಳಲ್ಲಿ ಬಂಗಾಳ ಸರ್ಕಾರ ಹೇಗೆ ಸಂಪೂರ್ಣವಾಗಿ ಮುಳುಗಿದೆ ಎಂಬುದನ್ನು ನಾನು ಅವರಿಗೆ ವಿವರಿಸಿದ್ದೇನೆ. ಇದೇ ವೇಳೆ ಅವರು ಆದಷ್ಟು ಬೇಗ ಸಿಎಎ ಯನ್ನು ಜಾರಿಗೆ ತರುವಂತೆ ಮನವಿ ಮಾಡಿದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮನೆಯಲ್ಲಿ ಸಿಕ್ಕಿದ ಹಣ ನನಗೆ ಸೇರಿದ್ದಲ್ಲ, ಯಾರೋ ಅಲ್ಲಿ ಇಟ್ಟಿದ್ದಾರೆ: ಅರ್ಪಿತಾ ಮುಖರ್ಜಿ

ಏನಿದು ಸಿಎಎ?
ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಾದ ಹಿಂದೂ, ಸಿಖ್, ಜೈನ್, ಬೌದ್ಧ, ಪಾರ್ಸಿ ಹಾಗೂ ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವ ನೀಡುವುದು ಸಿಎಎ ಯ ಉದ್ದೇಶವಾಗಿದೆ. ಇದರ ಪ್ರಕಾರ ಧಾರ್ಮಿಕ ಕಿರುಕುಳವನ್ನು ಅನುಭವಿಸಿ 2014ರ ಡಿಸೆಂಬರ್ 31ರ ವರೆಗೆ ಭಾರತಕ್ಕೆ ಬಂದಿರುವ ಈ ಸಮುದಾಯದ ಜನರನ್ನು ಅಕ್ರಮ ವಲಸಿಗರು ಎಂದು ಪರಿಗಣಿಸದೇ, ಬದಲಿಗೆ ಅವರಿಗೆ ಭಾರತದ ಪೌರತ್ವವನ್ನು ನೀಡಲಾಗುತ್ತದೆ.

2019ರ ಡಿಸೆಂಬರ್‌ನಲ್ಲಿ ಸಂಸತ್ತು ಸಿಎಎ ಯನ್ನು ಅಂಗೀಕರಿಸಿತ್ತು. ಆದರೆ ಈ ಕಾಯ್ದೆಯ ವಿರುದ್ಧ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆದಿತ್ತು. ಮುಸ್ಲಿಂ ಸಮುದಾಯದವರ ತಾರತಮ್ಯ ಮಾಡುವ ಉದ್ದೇಶ ಈ ಯೋಜನೆಯಲ್ಲಿದೆ ಎಂದು ಆರೋಪಿಸಲಾಗಿತ್ತು. ಇದನ್ನೂ ಓದಿ: ಮಾಜಿ ಸಚಿವ ಪಾರ್ಥ ಚಟರ್ಜಿ ಮೇಲೆ ಚಪ್ಪಲಿ ಎಸೆದ ಮಹಿಳೆ

AMITSHAH

ಈ ಪ್ರತಿಭಟನೆಗಳ ನಡುವೆಯೂ ಗೃಹ ಸಚಿವ ಅಮಿತ್ ಶಾ ಈ ಆರೋಪಗಳನ್ನು ತಳ್ಳಿ ಹಾಕಿ, ಸಿಎಎ ವಿರುದ್ಧದ ಪ್ರತಿಭಟನೆ ರಾಜಕೀಯ ಪ್ರೇರಿತ ಎಂದು ಬಣ್ಣಿಸಿದ್ದರು. ಈ ಕಾಯ್ದೆಯಿಂದ ಯಾವುದೇ ಭಾರತೀಯರು ಪೌರತ್ವವನ್ನು ಕಳೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *