ರಾಂಚಿ: ಮುಂಬರುವ ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ರಾಷ್ಟ್ರೀಯ ಪೌರತ್ವ ನೋಂದಣಿ (NRC) ಕಾಯ್ದೆ ಜಾರಿಗೆ ತರುವುದಾಗಿ ಕೇಂದ್ರ ಸಚಿವ ಹಾಗೂ ಬಿಜೆಪಿ ಉಸ್ತುವಾರಿ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಭರವಸೆ ನೀಡಿದ್ದಾರೆ.
ಮುಂಬರುವ ಜಾರ್ಖಂಡ್ ಚುನಾವಣೆ ಹಿನ್ನೆಲೆ ಕೇಂದ್ರ ಸಚಿವರು ಈ ಭರವಸೆ ನೀಡಿದ್ದಾರೆ. ಪ್ರಸ್ತುತ ಮುಖ್ಯಮಂತ್ರಿ ಹೇಮಂತ್ ಸೊರೆನ್ (Hemant Soren) ನೇತೃತ್ವದ ರಾಜ್ಯ ಸರ್ಕಾರ ನುಸುಳುಕೋರರಿಗೆ ಒಲವು ತೋರುತ್ತಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: 2026ರ ವೇಳೆಗೆ ಸಂಪೂರ್ಣ ನಕ್ಸಲಿಸಂ ಮಟ್ಟ ಹಾಕಿದ್ದೇವೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳಬೇಕು: ಅಮಿತ್ ಶಾ
ಮುಂಬರುವ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಲಿದೆ. ಈ ಚುನಾವಣೆಯು ಕೇವಲ ಅಧಿಕಾರಕ್ಕಾಗಿ ಅಲ್ಲ, ʻರೋಟಿ, ಮತಿ ಔರ್ ಭೇಟಿʼ ರಕ್ಷಣೆಗಾಗಿ ಎಂದು ಸಂಕಲ್ಪ ಮಾಡಿದ್ದೇವೆ. ಜನರು ತಿನ್ನುವ ಅನ್ನದ ಜೊತೆಗೆ, ಮನೆ ಮಕ್ಕಳನ್ನು ರಕ್ಷಿಸುವ ಕೆಲಸವಾಗಬೇಕು. ಜಾರ್ಖಂಡ್ ಉಳಿಸಬೇಕು ಅದಕ್ಕಾಗಿ ಎನ್‌ಆರ್‌ಸಿ ಜಾರಿಗೆ ತರಲಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ – ಯಾರಿಗೆ ಗದ್ದುಗೆ?
ಬಾಂಗ್ಲಾದೇಶ ನುಸುಳುಕೋರರಿಂದ, ಈ ಪ್ರದೇಶದ ಜನಸಂಖ್ಯಾಬಲವು ಈ ಹಿಂದಿಗಿಂತ 44 ಪ್ರತಿಶತದಷ್ಟು ಹೆಚ್ಚು ಜನಸಂಖ್ಯೆ ಹೊಂದಿದೆ. ಹಾಗಾಗಿ ಬೆಳವಣಿಗೆ ಮೇಲೆ ಪರಿಣಾಮ ಬೀರುತ್ತಿದೆ. ಇಲ್ಲಿನ ಮುಖ್ಯಮಂತ್ರಿ ಹೇಮಂತ್ ಸೋರೆನ್ ಸಹ ನುಸುಳುಕೋರರ ಪರವಾಗಿದ್ದಾರೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ನುಸುಳುಕೋರರ ಪರ ಒಲವು ತೋರಿದ್ದಾರೆ. ಆದ್ದರಿಂದ ಮುಂದಿನ ಬಾರಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಎನ್‌ಸಿಆರ್ ಅನ್ನು ಜಾರಿಗೊಳಿಸುತ್ತೇವೆ. ಈದರಲ್ಲಿ ಸ್ಥಳೀಯ ನಿವಾಸಿಗಳನ್ನು ನೋಂದಾಯಿಸಿ ನುಸುಳುಕೋರರನ್ನು ದೇಶದಿಂದ ಹೊರಹಾಕಲಾಗುವುದು ಎಂದು ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
ಈ ಹಿಂದೆ ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿಯ ಅಂತಿಮ ಪಟ್ಟಿ ಸಿದ್ಧಪಡಿಸಲಾಗಿತ್ತು. ಎನ್‌ಆರ್‌ಸಿ ಅಂತಿಮ ಪಟ್ಟಿಯಲ್ಲಿ 3.11 ಕೋಟಿ ಜನರ ಹೆಸರು ಸೇರ್ಪಡೆಗೊಂಡಿದ್ದು, ಅಸ್ಸಾಂನಲ್ಲಿರುವ 19.06 ಲಕ್ಷ ಮಂದಿಯ ಹೆಸರು ಪಟ್ಟಿಯಿಂದ ಹೊರಗುಳಿದಿತ್ತು. ಇದನ್ನೂ ಓದಿ: ದಲಿತರ ಮನೆಯಲ್ಲಿ ಅಡುಗೆ ಮಾಡಿ `ಪಾಕ ಪ್ರವೀಣ’ನಾದ ರಾಹುಲ್ ಗಾಂಧಿ