ನವದೆಹಲಿ: ಭಾರತ ಮತ್ತು ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟ ಬೆನ್ನಲ್ಲೇ ಇದೀಗ ಐಪಿಎಲ್(IPL 2025) ರದ್ದಾಗುತ್ತಾ ಎಂಬ ಪ್ರಶ್ನೆ ಕಾಡುತ್ತಿದೆ.
ಕ್ರಿಕೆಟ್ ಪ್ರಿಯರ ಹಬ್ಬವಾಗಿದ್ದ ಐಪಿಎಲ್ ಭಾರತ- ಪಾಕ್(India-Pakistan) ನಡುವಿನ ಯುದ್ಧ ಛಾಯೆಯಿಂದ ರದ್ದಾಗುತ್ತಾ ಎಂಬ ಪ್ರಶ್ನೆ ಮೂಡಿದೆ. ಅಲ್ಲದೇ ಗುರುವಾರ ಧರ್ಮಶಾಲಾದಲ್ಲಿ ಪಂಜಾಬ್ ಕಿಂಗ್ಸ್(Panjab Kings) ಹಾಗೂ ಡೆಲ್ಲಿ ಕ್ಯಾಪಿಟಲ್ಸ್(Delhi Capitals) ನಡುವೆ ನಡೆಯುತ್ತಿದ್ದ ಪಂದ್ಯವನ್ನೂ ರದ್ದು ಮಾಡಲಾಗಿತ್ತು. ಇದನ್ನೂ ಓದಿ: ಜಮ್ಮುವಿನಲ್ಲಿ ಅಮಾಯಕರನ್ನ ಟಾರ್ಗೆಟ್ ಮಾಡಿದ ʻಪಾಪಿಸ್ತಾನʼ – 10,000 ಮಂದಿ ಸ್ಥಳಾಂತರ?
ಜಮ್ಮು ಮತ್ತು ಪಠಾಣ್‌ಕೋಟ್ ನಗರಗಳಲ್ಲಿ ದಾಳಿಯ ಎಚ್ಚರಿಕೆಗಳು ಬಂದಿದ್ದರಿಂದ ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಪಂದ್ಯವನ್ನು ರದ್ದುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ವಿಚಾರವಾಗಿ BCCI ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಖಾಸಗಿ ವಾಹಿನಿಯಲ್ಲಿ ಮಾತನಾಡಿದ್ದರು. ಐಪಿಎಲ್ 2025 ಸೀಸನ್‌ನ ಉಳಿದ ಪಂದ್ಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸಭೆ ಕರೆಯುಲಿದ್ದೇವೆ. ಸದ್ಯಕ್ಕೆ ಕೆಲವು ಪಂದ್ಯಗಳನ್ನು ರದ್ದು ಮಾಡಲಾಗಿದೆ. ಪರಿಸ್ಥಿತಿ ಅನುಗುಣವಾಗಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ- ಪಾಕ್ ನಡುವೆ ಹೆಚ್ಚಿದ ಉದ್ವಿಗ್ನತೆ – ಬಿಎಸ್‌ಎಫ್ ಮುಖ್ಯಸ್ಥರೊಂದಿಗೆ ಅಮಿತ್ ಶಾ ಚರ್ಚೆ
ಆಟಗಾರರನ್ನು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ರೈಲಿನ ವ್ಯವಸ್ಥೆ ಮಾಡಲಾಗಿದೆ. ರೈಲ್ವೆ ಸಚಿವರೊಂದಿಗೆ ಮಾತನಾಡಿದ್ದೇವೆ. ಆಟಗಾರರು ರೈಲಿನ ಮೂಲಕ ಡೆಲ್ಲಿಗೆ ತೆರಳುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನು ಧರ್ಮಶಾಲಾದಲ್ಲಿ ಮೇ 11ರಂದು ಮುಂಬಯಿ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಪಂದ್ಯ ನಡೆಯಬೇಕಿತ್ತು. ಆದರೆ ಆಪರೇಷನ್ ಸಿಂಧೂರ ಹಿನ್ನೆಲೆಯಲ್ಲಿ ಭದ್ರತಾ ಕಾರಣಗಳಿಗಾಗಿ ಧರ್ಮಶಾಲಾ ಏರ್ ಪೋರ್ಟ್‌ನಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದಾರೆ. ಹೀಗಾಗಿ ಈ ಪಂದ್ಯ ಅಹ್ಮದಾಬಾದ್‌ಗೆ ಸ್ಥಳಾಂತರಿಸಿದ್ದಾರೆ. ಇದನ್ನೂ ಓದಿ: ಕ್ವೆಟ್ಟಾದಿಂದ ಪಾಕ್ ಸೇನೆ ಪಲಾಯನ – ಸೇನಾ ಠಾಣೆಗಳನ್ನ ವಶಕ್ಕೆ ಪಡೆದ ಬಲೂಚ್ ಹೋರಾಟಗಾರರು
ಭಾರತದ ಹಾಗೂ ಪಾಕ್ ನಡುವಿನ ಸಂಘರ್ಷದ ಹಿನ್ನೆಲೆ ಐಪಿಎಲ್ ಲೀಗ್ ಮುಂದುವರಿಸಬೇಕೆ ಅಥವಾ ಬೇಡವೆ ಎಂದು ನಿರ್ಧರಿಸುವ ಮುನ್ನ ಸರ್ಕಾರದ ನಿರ್ದೇಶನಗಳಿಗೆ ಎದುರು ನೋಡುತ್ತಿದ್ದೇವೆ. ಶುಕ್ರವಾರ ಬೆಂಗಳೂರಿನಲ್ಲಿ ನಡೆಯುವ ಲಕ್ನೋ ಹಾಗೂ ಆರ್‌ಸಿಬಿ ನಡುವಿನ ಪಂದ್ಯದಲ್ಲಿ ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲ ಎಂದು ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಎಂದು ಮಾಹಿತಿ ನೀಡಿದ್ದಾರೆ.
ಅಲ್ಲದೇ ಪಾಕ್‌ನಲ್ಲಿ ನಡೆಯುತ್ತಿದ್ದ ಪಾಕಿಸ್ತಾನ್ ಸೂಪರ್ ಲೀಗ್‌ನ ಉಳಿದ ಎಲ್ಲಾ ಪಂದ್ಯಗಳನ್ನು ದುಬೈಗೆ ಸ್ಥಳಾಂತರಿಸಲು ಪಿಸಿಬಿ ನಿರ್ಧಾರ ಕೈಗೊಂಡಿದೆ. ಇದನ್ನೂ ಓದಿ: ಪಾಕ್ ಕ್ಷಿಪಣಿ ದಾಳಿ ಬೆನ್ನಲ್ಲೇ ಹೈಅಲರ್ಟ್ – ದೇಶಾದ್ಯಂತ 24 ಏರ್‌ಪೋರ್ಟ್‌ಗಳು ತಾತ್ಕಾಲಿಕ ಬಂದ್
ಏ. 22 ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಪಾಕ್ ಉಗ್ರರ 9 ಅಡಗುತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸುವ ಮೂಲಕ ತಕ್ಕ ಉತ್ತರ ನೀಡಿತ್ತು. ಗುರುವಾರ ತಡರಾತ್ರಿಯೂ ಭಾರತ ಪಾಕಿಸ್ತಾನದ ವಿವಿಧ ನಗರಗಳನ್ನು ಮೇಲೆ ದಾಳಿ ನಡೆಸಿದ್ದು, ಇದೀಗ ಎರಡೂ ರಾಷ್ಟ್ರಗಳ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಭಾರತ ಪಾಕ್ ನಡುವಿನ ಯುದ್ಧದ ಛಾಯೆಯು ಐಪಿಎಲ್ ಪಂದ್ಯಗಳ ಮೇಲೂ ಬಿಳಲಿದೆಯೇ ಎಂದು ಕಾದು ನೋಡಬೇಕಿದೆ.