ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ (Congress president polls) ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ತಿಳಿಸಿದ್ದಾರೆ.
ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾದ ನಂತರ ಗೆಹ್ಲೋಟ್ ಈ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: AICC ಅಧ್ಯಕ್ಷ ಸ್ಥಾನಕ್ಕೆ ದಿಗ್ವಿಜಯ್ ಸಿಂಗ್ ಸ್ಪರ್ಧೆ
Advertisement
Advertisement
ನಾನು ಕೊಚ್ಚಿಯಲ್ಲಿ ರಾಹುಲ್ ಗಾಂಧಿ (Rahul Gandhi) ಅವರನ್ನು ಭೇಟಿ ಮಾಡಿ (ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ) ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮನವಿ ಮಾಡಿದ್ದೇನೆ. ಅವರು ಒಪ್ಪಿಕೊಳ್ಳದಿದ್ದಾಗ ನಾನು ಸ್ಪರ್ಧಿಸುತ್ತೇನೆ ಎಂದು ಹೇಳಿದ್ದೆ. ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದ್ದರಿಂದ ನಾನು ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಎರಡು ದಿನಗಳ ಹಿಂದೆ ರಾಜಸ್ಥಾನದಲ್ಲಿ ನಡೆದ ಘಟನೆ ನಮ್ಮನ್ನು ಬೆಚ್ಚಿ ಬೀಳಿಸಿತ್ತು. ನಾನು ಸಿಎಂ ಆಗಬೇಕು ಎಂದುಕೊಂಡೇ ಇದೆಲ್ಲಾ ನಡೆದಿದೆ. ಘಟನೆ ಬಗ್ಗೆ ಸೋನಿಯಾ ಅವರಲ್ಲಿ ಕ್ಷಮೆಯಾಚಿಸಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ರೇಸ್‌ನಿಂದ ಗೆಹ್ಲೋಟ್ ಹೊರಕ್ಕೆ?
Advertisement
ರಾಜಸ್ಥಾನದಲ್ಲಿ (Rajasthan) ನಡೆದ ಘಟನೆಯ ನೈತಿಕ ಹೊಣೆ ಹೊತ್ತು, ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಈ ಬಗ್ಗೆ ಸೋನಿಯಾ ಗಾಂಧಿ ಅವರು ನಿರ್ಧರಿಸಲಿದ್ದಾರೆ ಎಂದು ಹೇಳಿದ್ದಾರೆ.