ಬೆಂಗಳೂರು: ಜೆಡಿಎಸ್ (JDS) ಪಕ್ಷ ವಿಸರ್ಜನೆ ಮುಹೂರ್ತ ಯಾವಾಗ ಎಂದು ಟಾಂಗ್ ಕೊಟ್ಟಿದ್ದ ಕಾಂಗ್ರೆಸ್ (Congress) ವಿರುದ್ಧ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಹರಿಹಾಯ್ದಿದ್ದಾರೆ. ಪಕ್ಷ ವಿಸರ್ಜನೆ ಮಾಡಲ್ಲ ಎಂದು ತಿರುಗೇಟು ಕೊಟ್ಟಿದ್ದಾರೆ.
ಪಕ್ಷ ವಿಸರ್ಜನೆ, ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರಹೀನರಿಗೆ ಹೇಳುವುದು ಇಷ್ಟೇ. ನನಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ. ಇನ್ನೇನಾದರೂ ಅನುಮಾನ ಇದ್ದವರು ಬರಲಿ, ಅಂಥವರ ಅಜ್ಞಾನ ಹೋಗಲಾಡಿಸುತ್ತೇನೆ.6/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 31, 2023
Advertisement
ಈ ಸಂಬಂಧ ಟ್ವೀಟ್ ಮಾಡಿರುವ ಹೆಚ್‌ಡಿಕೆ, ಪಕ್ಷ ವಿಸರ್ಜನೆ, ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರಹೀನರಿಗೆ ಹೇಳುವುದು ಇಷ್ಟೇ. ನನಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ. ಇನ್ನೇನಾದರೂ ಅನುಮಾನ ಇದ್ದವರು ಬರಲಿ, ಅಂಥವರ ಅಜ್ಞಾನ ಹೋಗಲಾಡಿಸುತ್ತೇನೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳಿಗೆ ‘ಲೋಕಾ’ ಶಾಕ್ – ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ದಾಳಿ
Advertisement
ಚುನಾವಣೆ ಫಲಿತಾಂಶ ಬಂದಿದೆ, ನನಗೆ ಜನರು 123 ಕ್ಷೇತ್ರ ಕೊಡಲಿಲ್ಲ. ಈಗ ಪಂಚರತ್ನ ಜಾರಿ ಹಾಗೂ ಪಕ್ಷ ವಿಸರ್ಜನೆ ಪ್ರಶ್ನೆ ಎಲ್ಲಿ? ಸಾಮಾನ್ಯಜ್ಞಾನವೇ ಇಲ್ಲದ ಸಚಿವರಿಗೆ ಈ ಪರಿ ಅಜ್ಞಾನವಿದೆ ಎಂದು ನಾನಂತೂ ಎಣಿಸಿರಲಿಲ್ಲ. ಇಷ್ಟು ಅವಿವೇಕವುಳ್ಳ ಇವರ ಮುಂದಿನ ಆಡಳಿತದ ಈಗಲೇ ಆತಂಕವಾಗುತ್ತಿದೆ. 5/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 31, 2023
Advertisement
ಚುನಾವಣೆ ಫಲಿತಾಂಶ ಬಂದಿದೆ. ನನಗೆ ಜನರು 123 ಕ್ಷೇತ್ರ ಕೊಡಲಿಲ್ಲ. ಈಗ ಪಂಚರತ್ನ ಜಾರಿ ಹಾಗೂ ಪಕ್ಷ ವಿಸರ್ಜನೆ ಪ್ರಶ್ನೆ ಎಲ್ಲಿ? ಸಾಮಾನ್ಯ ಜ್ಞಾನವೇ ಇಲ್ಲದ ಸಚಿವರಿಗೆ ಈ ಪರಿ ಅಜ್ಞಾನವಿದೆ ಎಂದು ನಾನಂತೂ ಎಣಿಸಿರಲಿಲ್ಲ. ಇಷ್ಟು ಅವಿವೇಕವುಳ್ಳ ಇವರ ಮುಂದಿನ ಆಡಳಿತ ಈಗಲೇ ಆತಂಕವಾಗುತ್ತಿದೆ ಎಂದು ಚಾಟಿ ಬೀಸಿದ್ದಾರೆ.
Advertisement
ಕೆಲವರ ವಿವೇಕರಹಿತ ಹೇಳಿಕೆಗಳಿಗೆ ಉತ್ತರಿಸುವುದು ಬೇಡ ಭಾವಿಸಿದ್ದೆ. ನಾನು ಸೋತ ನೋವಿನಲ್ಲಿದ್ದೇನೆ. ಕಾಂಗ್ರೆಸ್ ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಅನ್ನುವ ಕನಿಷ್ಠ ಅರಿವು ಅವರಿಗೆ ಇದ್ದಂತೆ ಇಲ್ಲ. ಆ ಅರಿವು ಬರುವ ಕಾಲವೂ ದೂರವಿಲ್ಲ. ಕಾಯುವ ತಾಳ್ಮೆ ನನಗಿದೆ. 1/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 31, 2023
ಕೆಲವರ ವಿವೇಕರಹಿತ ಹೇಳಿಕೆಗಳಿಗೆ ಉತ್ತರಿಸುವುದು ಬೇಡ ಭಾವಿಸಿದ್ದೆ. ನಾನು ಸೋತ ನೋವಿನಲ್ಲಿದ್ದೇನೆ. ಕಾಂಗ್ರೆಸ್ ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಅನ್ನುವ ಕನಿಷ್ಠ ಅರಿವು ಅವರಿಗೆ ಇದ್ದಂತೆ ಇಲ್ಲ. ಆ ಅರಿವು ಬರುವ ಕಾಲವೂ ದೂರವಿಲ್ಲ. ಕಾಯುವ ತಾಳ್ಮೆ ನನಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಿಹಾರದಲ್ಲಿ ಮೋದಿ ದಾಳಿಗೆ ಸಂಚು ಪ್ರಕರಣ – ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್‌ಐಎ ದಾಳಿ
ರಾಜ್ಯದ ಜನತೆಗೆ ನೀಡಿದ್ದ 5 ಗ್ಯಾರಂಟಿಗಳ ಭರವಸೆ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗುಡುಗಿದ್ದರು. ಇದಕ್ಕೆ ಪ್ರತಿಯಾಗಿ ಹೆಚ್‌ಡಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿತ್ತು. ನೀವು ಜೆಡಿಎಸ್ ಪಕ್ಷ ವಿಸರ್ಜಿಸುವ ಮುಹೂರ್ತ ಯಾವಾಗ ಎಂದು ಟಾಂಗ್ ಕೊಟ್ಟಿತ್ತು.