ನವದೆಹಲಿ: ಭಾರತದ ಹೊಸ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಭಾನುವಾರ ಚೀನಾಗೆ ಕಟ್ಟುನಿಟ್ಟಿನ ಸಂದೇಶವನ್ನು ರವಾನಿಸಿದ್ದಾರೆ. ಭಾರತ-ಚೀನಾ ಗಡಿಯಲ್ಲಿರುವ ಯಾವುದೇ ಪ್ರದೇಶವನ್ನೂ ಕಳೆದುಕೊಳ್ಳಲು ನಾವು ಬಿಡುವುದಿಲ್ಲ ಎಂದಿದ್ದಾರೆ.
ಮನೋಜ್ ಪಾಂಡೆ ನೂತನ ಸೇನಾ ಮುಖ್ಯಸ್ಥರಾಗುತ್ತಿದ್ದಂತೆ ಸಂದರ್ಶನವೊಂದರಲ್ಲಿ ಮಾತನಾಡಿ, ಭಾರತ ಚೀನಾ ಗಡಿಯ ಭೂ ಪ್ರದೇಶ ಯಥಾಸ್ಥಿತಿಯಲ್ಲಿರುತ್ತದೆ. ಭಾರತದ ಭೂ ಪ್ರದೇಶದಲ್ಲಿ ಯಾವುದೇ ನಷ್ಟವಾಗಲು ನಾವು ಬಿಡುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಲು ಬಯಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಭಾರತೀಯ ಸೇನಾ ಮುಖ್ಯಸ್ಥರಾಗಿ ಜನರಲ್ ಮನೋಜ್ ಪಾಂಡೆ ಅಧಿಕಾರ ಸ್ವೀಕಾರ
Advertisement
Advertisement
ಪ್ರಸ್ತುತ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಎಸಿ) ಪರಿಸ್ಥಿತಿ ಸಾಮಾನ್ಯವಾಗಿದೆ. ನಮ್ಮ ಪಡೆಗಳು ಪ್ರಮುಖ ದೈಹಿಕ ಸ್ಥಾನಗಳನ್ನು ಹೊಂದಿದ್ದಾರೆ. ನಮ್ಮ ಎದುರಾಳಿಗಳು ನಡೆಸಿರುವ ಪ್ರಚೋದನಾಕಾರಿ ಕ್ರಮಗಳಿಗೆ ಸರಿಯಾದ ಪ್ರತಿಕ್ರಿಯೆ ನೀಡಲಾಗಿದೆ ಎಂದರು. ಇದನ್ನೂ ಓದಿ: ಭಾರತೀಯ ಸೇನೆಯ ಲೆಫ್ಟಿನೆಂಟ್ ಜನರಲ್ ಆಗಿ ಕಾಫಿನಾಡ ಬಿ.ಎಸ್.ರಾಜು ನೇಮಕ
Advertisement
Advertisement
ಭಾರತ-ಚೀನಾ ಗಡಿಯಲ್ಲಿ ಹೆಚ್ಚುವರಿ ಉಪಕರಣ ಹಾಗೂ ಪಡೆಗಳನ್ನು ಸೇರಿಸಿದ್ದೇವೆ. ಮೂಲಸೌಕರ್ಯಗಳ ಅಭಿವೃದ್ಧಿಯ ಮೇಲೆ ನಮ್ಮ ಗಮನವನ್ನು ಕೇಂದ್ರೀಕರಿಸಲಾಗಿದೆ. ಕಳೆದ 2 ವರ್ಷಗಳಿಂದ ಇರುವ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ಅಗತ್ಯ ಇದೆ ಎಂದು ತಿಳಿಸಿದರು.