ಮುಂಬೈ: ಮಹಾ ವಿಕಾಸ್ ಅಘಾಡಿ(ಎಂವಿಎ) ಸರ್ಕಾರವು ಲಖಿಂಪುರ ಖೇರಿಯಲ್ಲಿ ಪ್ರಾಣ ಕಳೆದುಕೊಂಡ ರೈತರಿಗಾಗಿ ಶನಿವಾರ ‘ಅಸ್ತಿ ಕಲಶ ರ‍್ಯಾಲಿ’ ಆಯೋಜಿಸಲಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ನವಾಬ್ ಮಲಿಕ್ ಹೇಳಿದರು.
Advertisement
ರ‍್ಯಾಲಿ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಖೀಂಪುರ ಖೇರಿ ಹಿಂಸಾಚಾರದಲ್ಲಿ ಪ್ರಾಣ ಕಳೆದುಕೊಂಡ ರೈತರಿಗಾಗಿ ನ.27ರಂದು ‘ಅಸ್ತಿ ಕಲಶ ರ‍್ಯಾಲಿ’ ಆಯೋಜಿಸಲಾಗುವುದು. ನ.28 ರಂದು ಮುಂಬೈನ ಆಜಾದ್ ಮೈದಾನದಲ್ಲಿ ರೈತರಿಗಾಗಿ ರ‍್ಯಾಲಿ ನಡೆಯುವುದಕ್ಕೆ ನಮ್ಮ ಬೆಂಬಲವಿರುತ್ತೆ. ಆದರೆ, ಯಾವುದೇ ರಾಜಕೀಯ ವ್ಯಕ್ತಿಗಳು ಆ ವೇದಿಕೆಯನ್ನು ಹಂಚಿಕೊಳ್ಳುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಭಯೋತ್ಪಾದಕರಿಗೆ ಹಣ ವರ್ಗವಣೆ – ಮಂಗ್ಳೂರಿನ ದಂಪತಿಗೆ 10 ವರ್ಷ ಕಠಿಣ ಶಿಕ್ಷೆ
Advertisement
Advertisement
ಕನಿಷ್ಠ ಬೆಂಬಲ ಬೆಲೆ(ಎಂಎಸ್‍ಪಿ) ಸೇರಿದಂತೆ ರೈತರ ವಿವಿಧ ಬೇಡಿಕೆಗಳು ಇನ್ನೂ ಬಾಕಿ ಉಳಿದಿವೆ. ಅದರಲ್ಲಿ ಪ್ರತಿಭಟನೆಯ ಸಂದರ್ಭದಲ್ಲಿ ತಮ್ಮ ಪ್ರಾಣ ತ್ಯಾಗ ಮಾಡಿದ ರೈತರ ಕುಟುಂಬಗಳಿಗೆ 1 ಕೋಟಿ ರೂ. ಪರಿಹಾರ ನೀಡುವುದು ಒಂದಾಗಿದ್ದು, ಅದಕ್ಕೆ ಎಲ್ಲರ ಬೆಂಬಲಬೇಕು ಎಂದು ಹೇಳಿದರು.
Advertisement
ಏನಿದು ಘಟನೆ?
2020ರಲ್ಲಿ ಕೇಂದ್ರವು ರೈತರಿಗಾಗಿ ಮೂರು ಕಾನೂನುಗಳನ್ನು ಜಾರಿಗೆ ತಂದಿತ್ತು. ಆದರೆ ರೈತರು ಈ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದರು. ಇದನ್ನೂ ಓದಿ: ಭ್ರಷ್ಟನಿಗೆ ಅಂಬಿ ಕಾಯಕ ಪ್ರಶಸ್ತಿ