ನವದೆಹಲಿ: ಸಮಸ್ಯೆ ಬಗೆಹರಿದರೆ ಮಾತ್ರ ಏಷ್ಯನ್ ಗೇಮ್ಸ್‌ನಲ್ಲಿ (Asian Games) ಭಾಗವಹಿಸುತ್ತೇನೆ ಎಂದು ಲೈಂಗಿಕ ಪ್ರಕರಣದ ಆರೋಪ ಹೊತ್ತಿರುವ ಬಿಜೆಪಿ (BJP) ಸಂಸದ ಬ್ರಿಜ್ ಭೂಷಣ್ ಸಿಂಗ್ (Brij Bhushan Sharan Singh) ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಲ್ಲಿ (Wrestlers) ಒಬ್ಬರಾದ ಸಾಕ್ಷಿ ಮಲಿಕ್ (Sakshi Malik) ಸ್ಪಷ್ಟಪಡಿಸಿದ್ದಾರೆ.
ಪ್ರಕರಣದಲ್ಲಿ ಪ್ರತಿದಿನ ಆಗುತ್ತಿರುವ ಬೆಳವಣಿಗೆಯಿಂದ ಮಾನಸಿಕವಾಗಿ ಅನುಭವಿಸುತ್ತಿರುವ ಹಿಂಸೆಯನ್ನು ಯಾರೂ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಪೊಲೀಸರೊಂದಿಗೆ ಪ್ರತಿದಿನ ಈ ವಿಚಾರದ ಬಗ್ಗೆ ಮಾತನಾಡುತ್ತಿದ್ದೇವೆ. ಈ ವಿಚಾರ ಬಗೆಹರಿಯುವ ವರೆಗೂ ಏಷ್ಯನ್ ಗೇಮ್ಸ್‌ನಲ್ಲಿ ಯಾವ ತಯಾರಿಯನ್ನೂ ನಡೆಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ದೇಶದ ಕೋಟ್ಯಂತರ ಜನ ಗಡ್ಡ ಬಿಟ್ಟಿದ್ದಾರೆ, ಅವರೆಲ್ಲ ಲಾಡೆನ್ ಆಗುತ್ತಾರಾ? – ಬಿಜೆಪಿಗೆ ಮನೋಜ್ ಝಾ ಪ್ರಶ್ನೆ
Advertisement
Advertisement
ಕುಸ್ತಿಪಟು ಸಂಗೀತಾ ಫೋಗಟ್ ಅವರನ್ನು ಘಟನೆಯ ಮರುಸೃಷ್ಟಿಗಾಗಿ ಪೊಲೀಸರು ಶುಕ್ರವಾರ ಬ್ರಿಜ್ ಭೂಷಣ್ ನಿವಾಸಕ್ಕೂ ಕರೆದೊಯ್ದಿದ್ದರು. ಈ ವೇಳೆ ಲೈಂಗಿಕ ದೌರ್ಜನ್ಯ ನಡೆದ ಘಟನೆಯನ್ನು ನೆನಪಿಸಿಕೊಳ್ಳುವಂತೆ ಪೊಲೀಸರು ತಿಳಿಸಿದ್ದರು. ಅಲ್ಲದೇ ಅರ್ಧ ಗಂಟೆಗಳ ಕಾಲ ಕಿರುಕುಳ ಕುರಿತಾದ ಘಟನೆಯ ಮರುಸೃಷ್ಟಿ ಮಾಡಿ ವಾಪಾಸ್ ಆಗಿದ್ದರು. ಇದನ್ನೂ ಓದಿ: ಬೆಂಗ್ಳೂರಲ್ಲೂ ದೆಹಲಿ ಮಾದರಿಯ ಮರ್ಡರ್ – ಮಹಿಳೆಯನ್ನ ಕೊಂದು, ದೇಹ ಪೀಸ್ ಪೀಸ್ ಮಾಡಿದ ಹಂತಕರು
Advertisement