ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಸ್ಪರ್ಧಿಸುವ ಸಾಧ್ಯತೆಗಳಿವೆ ಎಂದು ಪಕ್ಷದ ಹಿರಿಯ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಕ್ಷದ ಹಿತದೃಷ್ಟಿಯಿಂದ ಅಧ್ಯಕ್ಷರಾಗುವಂತೆ ಮನವೊಲಿಸುವ ಪ್ರಯತ್ನಗಳು ನಡೆದಿದ್ದು, ಅವರು ಒಪ್ಪಿಕೊಳ್ಳುವ ಸಾಧ್ಯತೆಗಳಿವೆ ಎಂದು ಕೆಲವು ನಾಯಕರು ಭರವಸೆ ವ್ಯಕ್ತಪಡಿಸಿದ್ದಾರೆ.
2019ರ ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ನಂತರ ರಾಹುಲ್ ಅವರು ಸ್ಥಾನವನ್ನು ತೊರೆದಿದ್ದರು. ಗಾಂಧಿ ಕುಟುಂಬದಿಂದ ಯಾರೂ ನಾಯಕತ್ವವನ್ನು ತೆಗೆದುಕೊಳ್ಳುವುದಿಲ್ಲ ಎಂದು ಪಕ್ಷಕ್ಕೆ ತಿಳಿಸಿದ್ದರು. ರಾಹುಲ್ ರಾಜೀನಾಮೆ ಬಳಿಕ ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷರಾಗಿ ಮುಂದುವರಿದಿದ್ದಾರೆ.
Advertisement
Advertisement
2024ರ ಚುನಾವಣೆ ದೃಷ್ಟಿಯಿಂದ ಈಗ ಅಕ್ಟೋಬರ್‌ನಲ್ಲಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ತಿರ್ಮಾನಿಸಿದ್ದು, ನೂತನ ಅಧ್ಯಕ್ಷ ಸ್ಥಾನಕ್ಕೆ ಪಕ್ಷದಲ್ಲಿ ಸಾಕಷ್ಟು ಗೊಂದಲಗಳು ಏರ್ಪಟ್ಟಿದೆ. ಹೀಗಾಗಿ ಚುನಾವಣೆಗೆ ಸ್ಪರ್ಧಿಸುವ ಹಿಂಜರಿಕೆಯನ್ನು ಕೈಬಿಟ್ಟು, ಸಂಘಟನೆಯ ಸಾರಥ್ಯವನ್ನು ಒಪ್ಪಿಕೊಳ್ಳುವಂತೆ ಹಲವು ನಾಯಕರು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ – ಕನ್ನಡದಲ್ಲೇ ಟ್ವೀಟ್ ಮಾಡಿದ ಮೋದಿ
Advertisement
ಭಾನುವಾರ ನಡೆಯಲಿರುವ ಭಾರತ್ ಜೋಡೊ ಕಾರ್ಯಕ್ರಮದ ಬಳಿಕ ಅಂತಿಮ ನಿರ್ಧಾರವನ್ನು ರಾಹುಲ್ ಗಾಂಧಿ ತೆಗೆದುಕೊಳ್ಳಬಹುದು ಎನ್ನಲಾಗಿದೆ. ಅವರು ಪಕ್ಷದ ಚುನಾವಣೆಗೆ ನಾಮಪತ್ರ ಸಲ್ಲಿಸುವ ವೇಳೆ, ಅದಕ್ಕಾಗಿ ಒಂದು ದಿನ ಬಿಡುವು ಮಾಡಿಕೊಳ್ಳುತ್ತೇನೆ ಎಂದು ಹೇಳುವ ಮೂಲಕ ಸ್ಪರ್ಧೆಯ ಸಾಧ್ಯತೆಯನ್ನು ಸೂಚಿಸಿದ್ದಾರೆ ಎಂದು ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
Advertisement
ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಮಲ್ಲಿಕಾರ್ಜುನ ಖರ್ಗೆ ಮತ್ತು ಸಲ್ಮಾನ್ ಖುರ್ಷಿದ್ ಅವರಂತಹ ಹಿರಿಯ ನಾಯಕರು ರಾಹುಲ್ ಮನವೊಲಿಸುವ ಪ್ರಯತ್ನ ಕೊನೆಯವರೆಗೂ ಮುಂದುವರಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ. ಎಐಸಿಸಿ ಕಾರ್ಯದರ್ಶಿ, ತೆಲಂಗಾಣದ ಪಿಸಿಸಿ ಸದಸ್ಯರಾಗಿರುವ ವಂಶಿ ಚಂದ್ ರೆಡ್ಡಿ, ರಾಹುಲ್ ಅವರ ನಾಮನಿರ್ದೇಶನ ಪತ್ರಕ್ಕೆ ಪ್ರಪೋಸರ್ ಆಗಿ ಸಹಿ ಹಾಕಲು ಆಶಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿ ಕುತೂಹಲ ಹೆಚ್ಚಿಸಿದ್ದಾರೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಪ್ರಕರಣ – ಮುರುಘಾ ಶ್ರೀಗೆ ಸೋಮವಾರದವರೆಗಿಲ್ಲ ಜಾಮೀನು