ನವದೆಹಲಿ: ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿಗೆ (Rahul Gandhi) ವಿಧಿಸಿರುವ 2 ವರ್ಷ ಜೈಲು ಶಿಕ್ಷೆಗೆ ಸುಪ್ರೀಂಕೋರ್ಟ್ (Supreme Court) ತಡೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಂಸದ ಸ್ಥಾನ ಅನರ್ಹತೆಯನ್ನು ತೆರವು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಇಂದು ಲೋಕಸಭೆ ಸ್ಪೀಕರ್ (Loksabha Speaker) ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ರಾಹುಲ್ ಗಾಂಧಿಗೆ ಸಂಸದ ಸ್ಥಾನ ಮರಳಿಸುವ ಕುರಿತು ಸ್ಪೀಕರ್ ಓಂ ಬಿರ್ಲಾ ಅವರು ಇಂದು ಅಧಿಕಾರಿಗಳೊಂದಿಗೆ ಸಮಾಲೋಚಿಸಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಮಾತ್ರವಲ್ಲದೇ ರಾಹುಲ್ ಗಾಂಧಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಇದ್ದ ತಡೆಯ ಆತಂಕ ಕೂಡ ನಿವಾರಣೆಯಾಗಿದೆ.
Advertisement
Advertisement
ಏನಿದು ಪ್ರಕರಣ..?: ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ನ ಸೂರತ್ ಮ್ಯಾಜಿಸ್ಟ್ರೇಟ್ ಕೋರ್ಟ್ (Surat Magistrate Court) ವಿಧಿಸಿರುವ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಆದೇಶದ ವಿರುದ್ಧ ಜು.15 ರಂದು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಪಿಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿತು. ಈ ವೇಳೆ ಸೂರತ್ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿದೆ. ಇದನ್ನೂ ಓದಿ: ಏನೇ ಬಂದರೂ ನನ್ನ ಕರ್ತವ್ಯ ಹಾಗೆಯೇ ಇರಲಿದೆ: ಸುಪ್ರೀಂ ತೀರ್ಪಿಗೆ ರಾಗಾ ಪ್ರತಿಕ್ರಿಯೆ
Advertisement
Advertisement
ರಾಹುಲ್ ಅವರು 2019ರ ಏಪ್ರಿಲ್ 13 ರಂದು ಕೋಲಾರದಲ್ಲಿ ನಡೆದ ಲೋಕಸಭಾ ಚುಣಾವಣಾ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ್ದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಗುಜರಾತ್ ಶಾಸಕ ಪೂರ್ಣೇಶ್ ಮೋದಿ ಅವರು, ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಪ್ರಕರಣದಲ್ಲಿ ರಾಹುಲ್ ಅವರು ಎರಡು ವರ್ಷ ಶಿಕ್ಷೆಗೆ ಗುರಿಯಾಗಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದಾರೆ.
Web Stories