Connect with us

Latest

ಹೊಸ ವರ್ಷಕ್ಕೆ ಕಾಂಗ್ರೆಸ್ಸಿಗೆ ಶಾಕ್ ಕೊಟ್ಟ ಮಾಯಾವತಿ

Published

on

– ಕಾಂಗ್ರೆಸ್, ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು ಬಿಎಸ್‍ಪಿ ನಾಯಕಿ ವ್ಯಂಗ್ಯ

ಜೈಪುರ: ಬಹುಜನ ಸಮಾಜ ಪಾರ್ಟಿ (ಬಿಎಸ್‍ಪಿ) ನಾಯಕಿ ಮಾಯಾವತಿ ಅವರು ಹೊಸ ವರ್ಷದ ಆರಂಭದಲ್ಲೇ ಕಾಂಗ್ರೆಸ್‍ಗೆ ಶಾಕ್ ಕೊಟ್ಟು, ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.

ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್‍ಗೆ ಬೆಂಬಲ ನೀಡಿದ್ದ ಮಾಯಾವತಿ ಅವರು, 2018 ಎಪ್ರಿಲ್ 2 ರಂದು ನಡೆದ ಭಾರತ್ ಬಂದ್ ವೇಳೆ ಕೆಲವು ಮುಗ್ಧರ ಮೇಲೆ ಪ್ರಕರಣವನ್ನು ದಾಖಲಿಸಲಾಗಿದೆ. ಸದ್ಯ ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಪ್ರಕರಣಗಳನ್ನು ವಜಾ ಮಾಡಬೇಕು. ಬಿಜೆಪಿಯಂತೆ ಜನರ ಆಶ್ವಾಸನೆಗಳನ್ನು ಕೈಚೆಲ್ಲಿದರೆ ಬೆಂಬಲ ಹಿಂಪಡೆಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪಂಚರಾಜ್ಯ ಚುನಾವಣೆಯಲ್ಲಿ ಛತ್ತೀಸಗಢ, ರಾಜಸ್ಥಾನ ಹಾಗೂ ಮಧ್ಯಪ್ರದೇಶ ರಾಜ್ಯಗಳಲ್ಲಿ ಜಯಗಳಿಸಿರುವ ಕಾಂಗ್ರೆಸ್ ತನ್ನ ಚುನಾವಣೆ ಪ್ರಣಾಳಿಕೆ ಜಾರಿಗೆ ತರಬೇಕು. ಒಂದು ವೇಳೆ ಬಿಜೆಪಿ ಧೋರಣೆ ಅನುಸರಿಸಲು ಮುಂದಾದರೆ ಸರ್ಕಾರ ರಚನೆಗೆ ನೀಡಿರುವ ಬೆಂಬಲವನ್ನು ಹಿಂಪಡೆಯುವ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಈ ಎಚ್ಚರಿಕೆ ಕಾಂಗ್ರೆಸ್‍ಗೆ ಅನಿವಾರ್ಯವಾಗಿದ್ದು, ಇದನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ. ಚುನಾವಣಾ ಪ್ರಣಾಳಿಕೆಯನ್ನು ಜಾರಿಗೆ ತರುವಲ್ಲಿ ಕಾಂಗ್ರೆಸ್ ಮುಂದಾಗಬೇಕು. 2018ರ ತ್ರಿವಳಿ ತಲಾಖ್ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ ಒಪ್ಪಿಸುವ ನಿಟ್ಟಿನಲ್ಲಿ ಹೋರಾಟ ನಡೆಸಬೇಕು ಎಂದ ಅವರು, ಕಾಂಗ್ರೆಸ್ ಹಾಗೂ ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು ಎಂದು ಕುಟುಕಿದ್ದಾರೆ.

ಬಹುಜನ ಸಮಾಜ ಪಾರ್ಟಿ (ಬಿಎಸ್‍ಪಿ) ಮಧ್ಯಪ್ರದೇಶದಲ್ಲಿ 2 ಹಾಗೂ ರಾಜಸ್ಥಾನದಲ್ಲಿ 6 ಕ್ಷೇತ್ರಗಳಲ್ಲಿ ಜಯಗಳಿದೆ. ಈ ಮೂಲಕ ರಾಜಸ್ಥಾನದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್‍ಗೆ ಬಿಎಸ್‍ಪಿ ಬೆಂಬಲ ಅನಿವಾರ್ಯವಾಗಿತ್ತು. ಈ ಅನಿವಾರ್ಯವನ್ನು ಮುಂದಿಟ್ಟುಕೊಂಡ ಮಾಯಾವತಿ ಅವರು ಕಾಂಗ್ರೆಸ್ಸಿಗೆ ಎಚ್ಚರಿಕೆ ನೀಡಿ ಬೇಡಿಕೆ ಇಟ್ಟಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Click to comment

Leave a Reply

Your email address will not be published. Required fields are marked *