ನವದೆಹಲಿ: ದೆಹಲಿಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಿಂದ ಶಾಲಾ ಕಾಲೇಜುಗಳನ್ನು ಬಂದ್ ಮಾಡಿ, ಆನ್‌ಲೈನ್ ತರಗತಿಗಳನ್ನು ಪುನರಾರಂಭಿಸುವಂತೆ ತಜ್ಞರ ಸಮಿತಿ ಹೇಳಿದೆ ಎಂದು ವರದಿಯಾಗಿದೆ.
ರಾಷ್ಟ್ರ ರಾಜಧಾನಿಯಲ್ಲಿನ ಪ್ರಸ್ತುತ ಕೋವಿಡ್ ಪರಿಸ್ಥಿತಿ ಚರ್ಚಿಸಲು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ (DDMA) ನಿರ್ಣಾಯಕ ಸಭೆ ನಡೆಯಲಿ ಸಿದ್ಧತೆ ನಡೆಸಲಾಗುತ್ತಿದೆ. ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಇದನ್ನೂ ಓದಿ: ಉತ್ತರಪ್ರದೇಶದಲ್ಲಿ ಕೋವಿಡ್ ಉಲ್ಬಣ – ಜೂನ್ 10ರ ವರೆಗೆ ನಿಷೇಧಾಜ್ಞೆ ಜಾರಿ
Advertisement
Advertisement
ಶಾಲೆಗಳಲ್ಲಿ ಶಿಕ್ಷಕರು ಹಾಗೂ ಬಹುತೇಕ ವಿದ್ಯಾರ್ಥಿಗಳಿಗೂ ಕೋವಿಡ್ ವ್ಯಾಪಿಸುತ್ತಿದೆ. ಆದ್ದರಿಂದ ಪೋಷಕರೂ ಸಹ ಶಾಲೆಗಳನ್ನು ಸಂಪೂರ್ಣ ಬಂದ್ ಮಾಡುವಂತೆ ಮನವಿ ಮಾಡಿದ್ದಾರೆ. ತಜ್ಞರೂ ಸಹ ಆಫ್‌ಲೈನ್ ತರಗತಿಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
Advertisement
ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 632 ಹೊಸ ಪ್ರಕರಣಗಳು ವರದಿಯಾಗಿದ್ದು, ಸತತ 3ನೇ ದಿನ 500ಕ್ಕಿಂತಲೂ ಹೆಚ್ಚಿನ ಪ್ರಕರಣಗಳು ವರದಿಯಾಗಿರುವುದು ಕಂಡುಬಂದಿದೆ. ಪಾಸಿಟಿವಿಟಿ ದರ ಶೇ.4ಕ್ಕೆ ಏರಿಕೆಯಾಗಿದೆ. ಆದಾಗ್ಯೂ ಇಲ್ಲಿವರೆಗೆ ಯಾವುದೇ ಸಾವು-ನೋವುಗಳಾಗಿಲ್ಲ ಎನ್ನುವುದು ಸಮಾಧಾನ ಎಂದು ತಜ್ಞರ ಸಮಿತಿ ಹೇಳುತ್ತಿದೆ. ಇದನ್ನೂ ಓದಿ: ಐಪಿಎಲ್ 2022: ದೆಹಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಆಟಗಾರ ಮಿಚೆಲ್ ಮಾರ್ಷ್‍ಗೆ ಕೋವಿಡ್ ದೃಢ
Advertisement
ತಜ್ಞರ ಸಲಹೆ ಏನಿದೆ?: ಶಿಕ್ಷಣ ಹಾಗೂ ಆರೋಗ್ಯ ಇಲಾಖೆ ತಜ್ಞರ ಸಮಿತಿಯು, ದೆಹಲಿ ಶಾಲೆಗಳಿಗೆ ವಿದ್ಯಾರ್ಥಿಗಳು ಆನ್‌ಲೈನ್ ತರಗತಿಗಳ ಮೂಲಕ ಅಥವಾ ಆಫ್‌ಲೈನ್ ತರಗತಿಗಳ ಮೂಲಕ ತಮ್ಮ ಅಧ್ಯಯನ ಮುಂದುವರಿಸುವ ಆಯ್ಕೆ ಅನುಸರಿಸಬಹುದು. ಆದರೆ, ಆಫ್‌ಲೈನ್ ತರಗತಿಗಳನ್ನು ಅನುಸರಿಸಿದರೆ ಕ್ಯಾಂಪಸ್‌ನಲ್ಲಿ ಕೋವಿಡ್-19 ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಶಾಲಾ ಅಧಿಕಾರಿಗಳಿಗೆ ಅಥವಾ ಮೇಲ್ವಿಚಾರಕರಿಗೆ ನಿರ್ದೇಶನ ನೀಡಬೇಕಾಗುತ್ತದೆ. ಈ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಾಸ್ಕ್ ಕಡೆಗಣನೆ- ದಂಡ ವಿಧಿಸುವ ಚಿಂತನೆಯಿಲ್ಲ: ಸದ್ಯಕ್ಕೆ ದೆಹಲಿಯಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಚಿಂತನೆಯನ್ನು ಸರ್ಕಾರ ಮಾಡಿಲ್ಲ ಎಂದು ದೆಹಲಿ ಉಪಮುಖ್ಯಮಂತ್ರಿ ಮನಿಷ್ ಸಿಸೋಡಿಯ ಹೇಳಿದ್ದಾರೆ.