ಬೆಂಗಳೂರು: ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷನಾಗಿ ಮೊಹಮ್ಮದ್ ನಲಪಾಡ್ ಅಧಿಕಾರ ಸ್ವೀಕರಿಸಿದ್ದು, ಈ ವೇಳೆ ಅವರು ಪಬ್ಲಿಕ್ ಟಿವಿಯೊಂದಿಗೆ ಮಾತನಾಡುವಾಗ ‘ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡುವುದು ನಮ್ಮ ಗುರಿ’ ಎಂದಿದ್ದರು. ಈ ಹೇಳಿಕೆಗೆ ವ್ಯಂಗ್ಯವಾಗಿ ಬಿಜೆಪಿ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿದೆ.
ಪಬ್ಲಿಕ್ ಟಿವಿಗೆ ನಲಪಾಡ್ ಕೊಟ್ಟ ಹೇಳಿಕೆಯನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ ಬಿಜೆಪಿ, ಅತ್ತು ಕರೆದು ಔತಣ ಮಾಡಿಸಿಕೊಂಡು ಎಂಥ ಮಾತಾಡಿಬಿಟ್ಟಿರಿ ಮಿಸ್ಟರ್ ನಲಪಾಡ್. ಮೊದಲು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡೋಕೆ ಸಿದ್ದರಾಮಯ್ಯ ಅವರು ಬಿಡುತ್ತಾರೆಯೇ ಎಂಬುದರ ಬಗ್ಗೆ ಮೊದಲು ತಿಳಿದುಕೊಳ್ಳಿ. ಆಮೇಲೆ ರಾಷ್ಟ್ರ ರಾಜಕಾರಣದ ಬಗ್ಗೆ ಮಾತನಾಡಿ ಎಂದು ಟೀಕಿಸಿದೆ. ಇದನ್ನೂ ಓದಿ: ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡುವುದು ನಮ್ಮ ಗುರಿ: ನಲಪಾಡ್ ಅಧಿಕಾರ ಸ್ವೀಕಾರ
Advertisement
ಅತ್ತು ಕರೆದು ಔತಣ ಮಾಡಿಸಿಕೊಂಡು ಎಂಥ ಮಾತಾಡಿಬಿಟ್ಟಿರಿ ಮಿಸ್ಟರ್ ನಲಪಾಡ್.
ಮೊದಲು ಡಿಕೆಶಿ ಅವರನ್ನು ಸಿಎಂ ಮಾಡೋಕೆ ಸಿದ್ದರಾಮಯ್ಯ ಅವರು ಬಿಡುತ್ತಾರೆಯೇ ಎಂಬುದರ ಬಗ್ಗೆ ಮೊದಲು ತಿಳಿದುಕೊಳ್ಳಿ.
ಆಮೇಲೆ ರಾಷ್ಟ್ರ ರಾಜಕಾರಣದ ಬಗ್ಗೆ ಮಾತನಾಡಿ.#ಕಾಂಗ್ರೆಸ್‌ಕಲಹ pic.twitter.com/Rg9o9JYtVx
— BJP Karnataka (@BJP4Karnataka) January 31, 2022
Advertisement
ಅಧಿಕಾರ ಸ್ವೀಕಾರ ಮಾಡಿದ ದಿನವಾದರೂ ಸ್ವಲ್ಪ ಒಳ್ಳೆಯ ಯೋಚನೆ ಮಾಡಿ. ನೀವು ಪ್ರಸ್ತಾಪ ಮಾಡಿದ ವಿಚಾರ ಕೈ ಗೂಡುವುದಿಲ್ಲ ಎಂದು ಅರ್ಥವಾಗಿ ಎಂತೆಂತವರೋ ಮೂಲೆಗುಂಪಾಗಿದ್ದಾರೆ. ರಾಹುಲ್ ಗಾಂಧಿಯನ್ನು ಪ್ರಧಾನಿಯಾಗಿಸುವುದು ಮರಳುಗಾಡಿನಲ್ಲಿ ಮರಿಚೀಕೆಯನ್ನು ಹಿಡಿದಂತೆ. ಎಂದಿಗೂ ಕೈಗೂಡದು ಎಂದು ಬರೆದು ಟ್ವೀಟ್ ಮಾಡಿದೆ.
Advertisement
ಅಧಿಕಾರ ಸ್ವೀಕಾರ ಮಾಡಿದ ದಿನವಾದರೂ ಸ್ವಲ್ಪ ಒಳ್ಳೆಯ ಯೋಚನೆ ಮಾಡಿ.
ನೀವು ಪ್ರಸ್ತಾಪ ಮಾಡಿದ ವಿಚಾರ ಕೈ ಗೂಡುವುದಿಲ್ಲ ಎಂದು ಅರ್ಥವಾಗಿ ಎಂತೆಂತವರೋ ಮೂಲೆಗುಂಪಾಗಿದ್ದಾರೆ.
ರಾಹುಲ್ ಗಾಂಧಿಯನ್ನು ಪ್ರಧಾನಿಯಾಗಿಸುವುದು ಮರಳುಗಾಡಿನಲ್ಲಿ ಮರಿಚೀಕೆಯನ್ನು ಹಿಡಿದಂತೆ.
ಎಂದಿಗೂ ಕೈಗೂಡದು.#ಕಾಂಗ್ರೆಸ್‌ಕಲಹ
— BJP Karnataka (@BJP4Karnataka) January 31, 2022
Advertisement
ನಲಪಾಡ್ ಇಂದು ಅಧಿಕಾರ ಸ್ವೀಕರಿಸಿ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಸಮುದಾಯದ ಗುರುಗಳು ವಿಶೇಷ ಪ್ರಾರ್ಥನೆ ಸಲ್ಲಿಸಿ ಕಚೇರಿ ಪೂಜೆ ನೆರವೇರಿಸಿದರು. ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಫೆಬ್ರವರಿ 10 ರಂದು ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡುತ್ತೇನೆ. ಎಲ್ಲ ಯುವಕರನ್ನು ಒಟ್ಟಾಗಿ ಕರೆದುಕೊಂಡು ಹೋಗುವ ಕೆಲಸ ಮಾಡುತ್ತೇನೆ. 2018ರಲ್ಲಿ ಆದ ತಪ್ಪು ಮತ್ತೆ ಆಗುವುದಿಲ್ಲ. ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡುವುದು ನಮ್ಮ ಗುರಿ ಎಂದು ಹೇಳಿದ್ದರು. ಇದನ್ನೂ ಓದಿ: ನಾನು ಹಿಂದೂತ್ವವಾದಿ, ನನ್ನ ಏಳಿಗೆ ಸಹಿಸದೇ ಕೆಲವರು ಈ ರೀತಿ ಮಾಡಿದ್ದಾರೆ: ಶಾಸಕ ಬೆಲ್ಲದ