ಮಂಡ್ಯ: ನಟಿ ಸುಮಲತಾ ಅವರು ಮಂಡ್ಯ ಗೌಡ್ತಿ ಅಲ್ಲ ಎಂದು ಎಂಎಲ್‍ಸಿ ಕೆಟಿ.ಶ್ರೀಕಂಠೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೆ ಈ ಬಾರಿಯ ಮಂಡ್ಯ ಲೋಕಸಭಾ ಚುನಾವಣೆ ಸ್ಟಾರ್ ವಾರ್ ಗೆ ವೇದಿಕೆಯಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿದೆ.
ಈಗಾಗಲೇ ಸುಮಲತಾ ಅವರ ಜೊತೆ ಮಾತನಾಡಿರುವ ಕನ್ನಡ, ತೆಲುಗು, ತಮಿಳು ಚಿತ್ರರಂಗ ಸೇರಿದಂತೆ ಭಾರತೀಯ ಚಿತ್ರರಂಗದ ಅಂಬರೀಶ್ ಸ್ನೇಹಿತರು ಮತ್ತು ಹಿತೈಷಿಗಳು, ನೀವು ಚುನಾವಣೆಗೆ ನಿಂತರೆ ನಾವು ನಿಮ್ಮೊಂದಿಗೆ ಇರುತ್ತೇವೆ ಅಂತಿದ್ದಾರಂತೆ. ಮಂಡ್ಯದ ಅಂಬರೀಶ್ ಅಭಿಮಾನಿಗಳೂ ಕೂಡ ಕನ್ನಡ ಚಿತ್ರರಂಗದವರನ್ನು ಭೇಟಿ ಮಾಡಲು ತಯಾರಿ ನಡೆಸಿದ್ದಾರೆ.
ಇತ್ತ ಜೆಡಿಎಸ್‍ನಿಂದ ನಟ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಖಚಿತ ಎಂದು ಆಪ್ತ ಮೂಲಗಳು ಹೇಳುತ್ತಿವೆ. ಒಂದು ವೇಳೆ ಇಬ್ಬರೂ ಅಭ್ಯರ್ಥಿಯಾದ್ರೆ ಮಂಡ್ಯ ಲೋಕಸಭಾ ಕ್ಷೇತ್ರ ರಾಜಕೀಯವಾಗಿ ಅಷ್ಟೇ ಅಲ್ಲದೇ ಸ್ಟಾರ್ ವಾರ್ ಗೂ ವೇದಿಕೆ ಕಲ್ಪಿಸಿಕೊಡಲಿದೆ. ಇದನ್ನೂ ಓದಿ: ಮಂಡ್ಯದ ನಿಜವಾದ ಮನೆಮಗಳು ಯಾರು? – ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ
ಶ್ರೀಕಂಠೇಗೌಡ ಹೇಳಿದ್ದೇನು..?
ಸುಮಲತಾ ಎಂದೂ ಕೂಡ ಮಂಡ್ಯದ ಗೌಡ್ತಿ ಅಲ್ಲ. ಮೂಲತಃ ಆಂಧ್ರದವರಾದ ಅವರು ಮಂಡ್ಯದಿಂದ ಹೇಗೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯ ಎಂದು ಸುಮಲತಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಬೆನ್ನಲ್ಲೆ ಎಂಎಲ್‍ಸಿ ಕೆಟಿ.ಶ್ರೀಕಂಠೇಗೌಡ ಪರೋಕ್ಷವಾಗಿ ಟೀಕಿಸಿದ್ದರು. ಈ ವಿಚಾರ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೀಡಾಗಿತ್ತು. ಇದನ್ನೂ ಓದಿ: ಮಂಡ್ಯ ರಾಜಕಾರಣಕ್ಕೆ ಮತ್ತೊಬ್ಬ ಗೌಡ್ತಿ ಎಂಟ್ರಿ?
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv