ಕೋರ್ಟ್ ಆವರಣದಲ್ಲಿ ಪ್ರತಿಭಟನೆ ಗಂಡಾಂತರ ಆಹ್ವಾನಿಸಿದಂತೆ: ಆಪ್‌ಗೆ ದೆಹಲಿ ಹೈಕೋರ್ಟ್ ಎಚ್ಚರಿಕೆ

Public TV
1 Min Read
Arvind Kejriwal 1

ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಖಂಡಿಸಿ ನ್ಯಾಯಲಯಗಳಲ್ಲಿ ಪ್ರತಿಭಟನೆಗೆ ಕರೆ ನೀಡಿರುವ ಆಪ್ (AAP) ಕಾನೂನು ಘಟಕಕ್ಕೆ ದೆಹಲಿ ಹೈಕೋರ್ಟ್ ಎಚ್ಚರಿಕೆ ನೀಡಿದೆ. ನ್ಯಾಯಲಯ ಆವರಣದಲ್ಲಿ ಪ್ರತಿಭಟನೆ ನಡೆಸುವುದು ಗಂಡಾಂತರ ಆಹ್ವಾನ‌ ಮಾಡಿದಂತೆ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.

ಕೇಜ್ರಿವಾಲ್ ಬಂಧನ ಖಂಡಿಸಿ ರಾಷ್ಟ್ರ ರಾಜಧಾನಿಯ ಎಲ್ಲಾ ಜಿಲ್ಲಾ ನ್ಯಾಯಾಲಯಗಳಲ್ಲಿ ಬುಧವಾರ ಪ್ರತಿಭಟನೆಗೆ ಎಎಪಿ ಕಾನೂನು ಘಟಕ ಕರೆ ನೀಡಿದ ಹಿನ್ನೆಲೆ ಈ ವಿಚಾರವನ್ನು ಹೈಕೋರ್ಟ್‌ನಲ್ಲಿ ಪ್ರಸ್ತಾಪಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಧೀಶರು ನಾಳೆ ಈ ಬಗ್ಗೆ ವಿಸ್ತೃತ ವಿಚಾರಣೆ ನಡೆಸುವುದಾಗಿ ಹೇಳಿದರು. ಇದನ್ನೂ ಓದಿ: ಅರವಿಂದ್‌ ಕೇಜ್ರಿವಾಲ್‌ 7 ದಿನಗಳ ಕಾಲ ಇ.ಡಿ ಕಸ್ಟಡಿಗೆ

arvind kejriwal 1

ಪ್ರತಿಭಟನೆ ಬಗ್ಗೆ ಚಿಂತಿಸಬೇಡಿ, ನ್ಯಾಯಾಲಯವನ್ನು ಯಾರು ತಡೆಹಿಡಿಯಲಾಗುವುದಿಲ್ಲ ಅಥವಾ ನಿಲ್ಲಿಸಲಾಗುವುದಿಲ್ಲ. ನ್ಯಾಯಾಲಯವನ್ನು ಸಂಪರ್ಕಿಸುವ ಜನರ ಮೂಲಭೂತ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಆ ರೀತಿ ಯಾರಾದರೂ ಅದನ್ನು ಮಾಡಿದರೆ ಅವರು ಗಂಡಾಂತರ ಆಹ್ವಾನ ಮಾಡಿದಂತೆ. ಅಗತ್ಯವಿದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದು ನ್ಯಾಯಾಲಯ ಹೇಳಿತು.

ಹೊಸ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಇ.ಡಿ ಬಂಧಿಸಿತ್ತು. ಮಾ.28 ರ ವರೆಗೆ ಕೇಜ್ರಿವಾಲ್‌ ಅವರನ್ನು ಇ.ಡಿ ಕಸ್ಟಡಿಗೆ ವಹಿಸಿ ಕೋರ್ಟ್‌ ಆದೇಶ ಹೊರಡಿಸಿದೆ. ಇದನ್ನೂ ಓದಿ: ತೆಲಂಗಾಣ ಮಾಜಿ ಸಿಎಂ ಪುತ್ರಿ ಕವಿತಾಗೆ 14 ದಿನ ಜೈಲು

Share This Article