ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು (Bengaluru) ಸಮೀಪ ಮತ್ತೊಂದು ವಿಮಾನ ನಿಲ್ದಾಣ ಅತ್ಯಗತ್ಯವಾಗಿದೆ. ಇದನ್ನು ಎಲ್ಲಿ ನಿರ್ಮಿಸಬೇಕು ಎನ್ನುವ ಬಗ್ಗೆ ಮತ್ತೊಂದು ಸುತ್ತಿನ ಚರ್ಚೆ ಮತ್ತು ಮುಖ್ಯಮಂತ್ರಿಗಳ ಜೊತೆ ವಿಚಾರ ವಿನಿಮಯ ನಡೆಸಿ, ತೀರ್ಮಾನಿಸಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ (M.B.Patil) ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎರಡನೇ ಏರ್ಪೋರ್ಟ್ ಅಭಿವೃದ್ಧಿ ಕುರಿತು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯಲ್ಲಿ ಒಂದು ಸಭೆ ನಡೆದಿದೆ. ಸದ್ಯಕ್ಕೆ ಬಿಐಎಎಲ್ ಜೊತೆ ಚಾಲ್ತಿಯಲ್ಲಿರುವ ಒಪ್ಪಂದದಲ್ಲಿ 2033ರವರೆಗೂ 150 ಕಿ.ಮೀ. ಅಂತರದಲ್ಲಿ ಇನ್ನೊಂದು ವಿಮಾನ ನಿಲ್ದಾಣ ನಿರ್ಮಿಸಬಾರದು ಎಂಬ ಷರತ್ತಿದೆ. ನಾವು ಈಗಿನಿಂದಲೇ ಕಾರ್ಯ ಪ್ರವೃತ್ತರಾದರೆ ಇನ್ನು ಎಂಟು ವರ್ಷಗಳಲ್ಲಿ ಪ್ರಗತಿ ಸಾಧಿಸಬಹುದು ಎಂದರು. ಇದನ್ನೂ ಓದಿ: ಕಾರ್ಯಕರ್ತರ ಜೊತೆ ಸಭೆ ನಡೆಸಿ ಅಭ್ಯರ್ಥಿ ಆಯ್ಕೆ ಬಗ್ಗೆ ರಹಸ್ಯ ಕಾಯ್ದುಕೊಂಡ ಹೆಚ್ಡಿಕೆ
Advertisement
Advertisement
ಪ್ರಯಾಣಿಕರ ಒತ್ತಡ ನೋಡಿದರೆ ಬೆಂಗಳೂರಿನ ದಕ್ಷಿಣ ಭಾಗ, ಕನಕಪುರ ಇತ್ಯಾದಿ ಭಾಗಗಳಿವೆ. ಈಗಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲೇ ನೂತನ ವಿಮಾನ ನಿಲ್ದಾಣವು ಬರಬೇಕು ಎಂದಾದರೆ ಡಾಬಸ್ಪೇಟೆ, ತುಮಕೂರು ಇತ್ಯಾದಿಗಳು ಬರುತ್ತವೆ. ಇವೆಲ್ಲವನ್ನೂ ಪರಿಗಣಿಸಿ ಸ್ಥಳ ನಿಗದಿ, ಭೂ ಸ್ವಾಧೀನ, ಪರಿಹಾರ ಹಂಚಿಕೆ ಇತ್ಯಾದಿಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.
Advertisement
Advertisement
ಮುಂಬಯಿ ನಗರದಲ್ಲಿ ಎರಡು ವಿಮಾನ ನಿಲ್ದಾಣಗಳ ನಡುವೆ ಕೇವಲ 36 ಕಿ.ಮೀ. ಅಂತರವಿದೆ. ನ್ಯೂಯಾರ್ಕ್ ಮತ್ತು ಲಂಡನ್ ನಗರಗಳಲ್ಲಿ ಕೂಡ ಹೆಚ್ಚು ದೂರವಿಲ್ಲ. ಜೊತೆಗೆ, ಬಿಐಎಎಲ್ ಹೊಂದಿರುವ ಷರತ್ತು ತಮಿಳುನಾಡಿಗೂ ಅನ್ವಯಿಸುತ್ತದೋ ಇಲ್ಲವೋ ಪರಿಶೀಲಿಸಬೇಕು. ನಾವು ಎರಡನೇ ವಿಮಾನ ನಿಲ್ದಾಣದ ಬಗ್ಗೆ ಮಾತನಾಡಿದ ಮೇಲೆ ತಮಿಳುನಾಡು ಸರ್ಕಾರವು ಹೊಸೂರಿನಲ್ಲಿ ಏರ್ಪೋರ್ಟ್ ಕಟ್ಟುವುದಾಗಿ ಹೇಳುತ್ತಿದೆ. ಇದರ ಸಾಧಕ-ಬಾಧಕಗಳನ್ನು ಅಧ್ಯಯನ ಮಾಡಲಾಗುವುದು ಎಂದರು. ಇದನ್ನೂ ಓದಿ: ನಾನು ಉಸ್ತುವಾರಿ ಸಚಿವನಿದ್ದಾಗಲೇ ಮುಡಾದಲ್ಲಿ ಅವ್ಯವಹಾರ ನಡೆದಿತ್ತು – ಎಸ್ಟಿಎಸ್ ಬಾಂಬ್