ಚಂಡೀಗಢ: ಪಂಜಾಬ್‌ನ ನೂತನ ಅಡ್ವೋಕೇಟ್ ಜನರಲ್ ಅನ್ಮೋಲ್ ರತ್ತನ್ ಸಿಧು ಸಂದರ್ಶನವೊಂದರಲ್ಲಿ, ನನ್ನ ಕೆಲಸಕ್ಕೆ ಕೇವಲ 1 ರೂ. ಸಂಬಳವನ್ನು ತೆಗೆದುಕೊಳ್ಳುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.
ಸರ್ಕಾರದೊಂದಿಗೆ ಒಟ್ಟಾಗಿ ಕೆಲಸ ಮಾಡುವಾಗ ಸಂಪೂರ್ಣ ಪಾರದರ್ಶಕತೆಯೊಂದಿಗೆ ಕೆಲಸವನ್ನು ನಿರ್ವಹಿಸುವುದರೊಂದಿಗೆ ರಾಜ್ಯದ ವೆಚ್ಚಗಳಿಗೆ ಹೊರೆಯಾಗುವುದಿಲ್ಲ. ಇದಕ್ಕಾಗಿ ಕಾನೂನು ವೇತನವಾಗಿ ಕೇವಲ 1 ರೂ. ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ರೈತ ಕುಟುಂಬದಲ್ಲಿ ಜನಿಸಿದ ಅನ್ಮೋಲ್ ರತ್ತನ್ ಸಿಧು ಹಳ್ಳಿಯ ಸರ್ಕಾರಿ ಶಾಲೆಗಳಲ್ಲಿ ಓದಿದವರು. ಬಳಿಕ ಚಂಡೀಗಢಕ್ಕೆ ಸ್ಥಳಾಂತರಗೊಂಡು ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಕಾನೂನು ವ್ಯಾಸಂಗ ಪೂರೈಸಿದರು. ಕಾಲೇಜು ಜೀವನದಲ್ಲಿ ಒಬ್ಬ ಕ್ರಿಯಾಶೀಲ, ಸಾಮಾಜಿಕ, ರಾಜಕೀಯ ವಿದ್ಯಾರ್ಥಿಯಾಗಿ ಉಳಿದಿದ್ದ ಸಿಧು ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಹುದ್ದೆಯನ್ನು ಅಲಂಕರಿಸಿದ್ದರು. ಇದನ್ನೂ ಓದಿ: ಕುಶಾಲನಗರ-ಸಂಪಾಜೆ ಚತುಷ್ಪಥ ರಸ್ತೆ ನಿರ್ಮಾಣ ಇಲ್ಲ: ಪ್ರತಾಪ್ ಸಿಂಹ ಸ್ಪಷ್ಟನೆ
1985ರಲ್ಲಿ ವಕೀಲ ವೃತ್ತಿಯನ್ನು ಪ್ರವೇಶಿಸಿ, 1993ರಲ್ಲಿ ಪಂಜಾಬ್‌ನ ಡೆಪ್ಯುಟಿ ಅಡ್ವೊಕೇಟ್ ಜನರಲ್ ಆಗಿ ಸೇರಿಕೊಂಡರು. 2007ರಲ್ಲಿ ಹಿರಿಯ ವಕೀಲರಾಗಿ ನೇಮಕಗೊಂಡ ಸಿಧು ಬಳಿಕ 2014ರ ವರೆಗೆ ಭಾರತದ ಸಹಾಯಕ ಸಾಲಿಸಿಟರ್ ಜನರಲ್ ಆಗಿ ಸೇವೆ ಸಲ್ಲಿಸಿದರು. ಇದನ್ನೂ ಓದಿ: ಪಠ್ಯಪುಸ್ತಕದಲ್ಲಿ ಪುನೀತ್ ಜೀವನ ಕಥನ
ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನಲ್ಲಿ ಸಿಬಿಐಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿಯೂ ಇದ್ದ ಸಿಧು, ಎಂಟು ಬಾರಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಬಾರ್ ಅಸೋಸಿಯೇಷನ್‌ನ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಭಾರತದ ಯಾವುದೇ ಹೈಕೋರ್ಟ್ನಲ್ಲಿ ಇಲ್ಲಿಯವರೆಗೆ ಇಷ್ಟೊಂದು ಬಾರಿ ಆಯ್ಕೆಯಾದವರೇ ಇಲ್ಲ.
ಇದೀಗ ಪಂಜಾಬ್‌ನ ನೂತನ ಅಡ್ವೋಕೇಟ್ ಜನರಲ್ ಆಗಿ ಅನ್ಮೋಲ್ ರತ್ತನ್ ಸಿಧು ಶನಿವಾರ ಅಧಿಕಾರ ವಹಿಸಿಕೊಂಡಿದ್ದಾರೆ.