ಪಾಟ್ನಾ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ ಮಾಡುತ್ತೇವೆ ಹಾಗೂ ಆಹಾರ ಸಂಸ್ಕರಣಾ ಉದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಬಿಹಾರ ರಾಜಧಾನಿ ಪಾಟ್ನಾದಲ್ಲಿ ನಡೆದ ಜನ್ ಆಕಾಂಕ್ಷ ಬೃಹತ್ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಅವರು, ರೈತರು ಶ್ರಮವಹಿಸಿ ದುಡಿದ ಹಣವನ್ನು ಕೇಂದ್ರ ಸರ್ಕಾರದ ಬೆಳೆ ವಿಮೆ ಯೋಜನೆ ಮೂಲಕ ಸಂಗ್ರಹಿಸಲಾಗುವುದು. ಬಳಿಕ ಅದನ್ನು ದೊಡ್ಡ ಉದ್ಯಮಿಗಳ ಜೇಬು ತುಂಬಲಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.
Advertisement
Congress President at #JanAakanshaRally in Patna, Bihar: Tejashwi ji yuva neta hain, kaam karke dikhate hain, jhooth nahi bolte hain aur hum sab milkar izzat se, pyaar se, ek saath Lok Sabha mein aur uske ekdum baad Vidhan Sabha mein gathbandhan ki sarkar banane ja rahe hain. pic.twitter.com/cYurLD537v
— ANI (@ANI) February 3, 2019
Advertisement
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಕಷ್ಟ ಮತ್ತು ನಿರುದ್ಯೋಗದ ಸಮಸ್ಯೆ ನಿವಾರಿಸಲು ಹಲವು ಕ್ರಮಗಳನ್ನು ಕೈಗೊಳ್ಳುತ್ತದೆ. ನಮ್ಮ ಪಕ್ಷವು ರಾಜಸ್ಥಾನ, ಮಧ್ಯ ಪ್ರದೇಶ ಹಾಗೂ ಛತ್ತೀಸ್‍ಗಢದಲ್ಲಿ ಅಧಿಕಾರಕ್ಕೆ ಬಂದ ಕೆಲ ದಿನಗಳಲ್ಲಿ ಸಾಲಮನ್ನಾ ಮಾಡಿದೆ ಎಂದು ತಿಳಿಸಿದರು.
Advertisement
ಚೌಕಿದಾರ್ ಹಿ ಚೋರ್ ಹೈ (ಕಾವಲುಗಾರ ಕಳ್ಳ) ಎನ್ನುವುದು ಎಲ್ಲರಿಗೂ ಗೊತ್ತಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಹುಲ್ ಗಾಂಧಿ ಗುಡುಗಿದರು.
Advertisement
#WATCH: Congress President Rahul Gandhi speaks on #Budget2019 at #JanAakanshaRally in Patna, Bihar. pic.twitter.com/l1OjEBnx1b
— ANI (@ANI) February 3, 2019
ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್‍ಗಢ ರಾಜ್ಯಗಳಲ್ಲಿ ಎರಡನೇ ಹಸಿರು ಕ್ರಾಂತಿ ಆರಂಭಿಸುವಂತೆ ಅಲ್ಲಿನ ಮುಖ್ಯಮಂತ್ರಿಗೆ ತಿಳಿಸಿದ್ದೇನೆ. ಈ ಮೂರು ರಾಜ್ಯಗಳ ರೈತರಿಗೆ ಪರಿಹಾರ ಹಾಗೂ ಯುವಕರಿಗೆ ಉದ್ಯೋಗ ಒದಗಿಸುತ್ತಿದ್ದೇವೆ. ಮತ್ತೇ ಕೇಂದ್ರದಲ್ಲಿ ಅಧಿಕಾರ ಹಿಡಿದರೆ ದೇಶವ್ಯಾಪಿ ನಾವು ಗೆಲುವು ಸಾಧಿಸುತ್ತೇವೆ ಎಂದು ಹೇಳಿದರು.
ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಹೀಗಾಗಿ ಮೈತ್ರಿಕೂಟದ ಪಕ್ಷಗಳ ನೆರವಿನೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಬಿಹಾರದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಮೈತ್ರಿ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದರು.
#WATCH: Congress President Rahul Gandhi speaks on #RafaleDeal at #JanAakanshaRally in Patna, Bihar. pic.twitter.com/AETBwi5zXi
— ANI (@ANI) February 3, 2019
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv