ನವದೆಹಲಿ: ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ವೋಟ್ ಚೋರಿಯನ್ನು ಖಂಡಿಸಿ ನಡೆಯಲಿರುವ ಬೃಹತ್ ‘ಚಲೋ ದಿಲ್ಲಿ’ (Chalo Delhi)ಪ್ರತಿಭಟನಾ ಮೆರವಣಿಗೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi)ಕರೆ ನೀಡಿದ್ದಾರೆ.
ಚುನಾವಣಾ ಅಕ್ರಮಗಳ ವಿರುದ್ಧ ಮತ್ತು ಸಂವಿಧಾನವನ್ನು ರಕ್ಷಿಸಲು ವಿದ್ಯಾರ್ಥಿಗಳು ಮತ್ತು ನಾಗರಿಕರು ರಾಜಕೀಯ ಪಕ್ಷಗಳ ಹೊರತಾಗಿ ಪ್ರತಿಭಟನೆಯಲ್ಲಿ ಸೇರಬೇಕೆಂದು ವಿನಂತಿಸಿದ್ದಾರೆ.
X ನಲ್ಲಿ ಪೋಸ್ಟ್ ಮೂಲಕ ಪ್ರತಿಭಟನಾ ಮೆರವಣಿಗೆಗೆ ಕರೆ ನೀಡಿರುವ ಅವರು, ಈ ಹೋರಾಟವು ಯಾವುದೇ ಒಂದು ರಾಜಕೀಯ ಪಕ್ಷಕ್ಕೆ ಸೀಮಿತವಾಗಿಲ್ಲ, ಬದಲಿಗೆ ಇದು ದೇಶದ ಸಂವಿಧಾನವನ್ನು ಉಳಿಸುವ ಹೋರಾಟವಾಗಿದೆ ಎಂದು ತಿಳಿಸಿದ್ದಾರೆ.
ಪ್ರತಿಭಟನೆಯ ಸಂದರ್ಭದಲ್ಲಿ ಎದುರಾಗಬಹುದಾದ ಪೊಲೀಸರ ಕ್ರಮ ಅಥವಾ ಲಾಠಿಚಾರ್ಜ್ಗೆ ಯಾರು ಕೂಡ ಹೆದರಬಾರದು. ದೇಶದ ಎಲ್ಲಾ ವಿದ್ಯಾರ್ಥಿ ಸಂಘಟನೆಗಳು ಮುಂಚೂಣಿಯಲ್ಲಿ ನಿಂತು ಈ ರ್ಯಾಲಿಯಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದ್ದಾರೆ.
ನವೆಂಬರ್ 1 ರಂದು ರಾಮಲೀಲಾ ಮೈದಾನದಲ್ಲಿ ನಡೆಯುವ ಈ ರ್ಯಾಲಿಯಲ್ಲಿ ಚುನಾವಣಾ ಅಕ್ರಮಗಳು ಮತ್ತು ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಕಾಂಗ್ರೆಸ್ ಹೋರಾಡಲಿದೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.ಇದನ್ನೂ ಓದಿ: UGC NET ಪರೀಕ್ಷೆಗೆ 8.78 ಲಕ್ಷಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ
ಎಸ್ಐಆರ್ ಮೂಲಕ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ವಿರೋಧ ಪಕ್ಷ ಆರೋಪಿಸಿದೆ. ಚುನಾವಣಾ ಅಕ್ರಮ ತಡೆ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ರಾಹುಲ್ ಗಾಂಧಿ ಈ ಬೃಹತ್ ಪ್ರತಿಭಟನಾ ಮೆರವಣಿಗೆಗೆ ಕರೆ ನೀಡಿದ್ದಾರೆ. ಮೆರವಣಿಗೆಯಲ್ಲಿ ಸುಮಾರು 10 ಲಕ್ಷಕ್ಕೂ ಹೆಚ್ಚು ಜನ ಭಾಗಿಯಾಗುವ ನಿರೀಕ್ಷೆ ಇದೆ.ಇದನ್ನೂ ಓದಿ: ಅಪಘಾತದಲ್ಲಿ ಗಂಭಿರವಾಗಿ ಗಾಯಗೊಂಡಿದ್ದ ಹೆಡ್ ಕಾನ್ಸ್ಟೇಬಲ್ ಸಾವು
नमस्कार,
चलो दिल्ली रामलीला मार्च, लोकतंत्र को बचाने का, वोट चोरी को रोकने का, संविधान को बचाने का मार्च है।
यह किसी एक राजनीतिक पार्टी का मार्च नहीं – यह हिंदुस्तान की आत्मा का मार्च है।
सब लोग जो नरेंद्र मोदी, अमित शाह, ज्ञानेश कुमार से तंग हैं। सब लोग जो लोकतंत्र को बचाना चाहते हैं, संविधान की रक्षा करना चाहते हैं, आप सब आइए।
एक ही protest है – देश का protest है।
Don’t worry about the police, don’t worry about lathis – the BJP will not have the guts to try any of their antics.
Come march with us – we will walk together to protect the Constitution, to protect the Indian nation.
घबराने की जरूरत नहीं है।
I urge all student groups, regardless of your political affiliation – if you feel that India is under attack, if you feel you are under attack, your expression, your ideas, your way of thinking is under attack, come and join us.
It will be a fantastic march, and it’s a march for the soul of this country.
Looking forward to seeing all of you there.
🗓️ 1 नवंबर
📍 रामलीला मैदान, नई दिल्ली#ChaloDilli
— Rahul Gandhi (@RahulGandhi) October 29, 2026
