ನವದೆಹಲಿ: 1990ರ ದಶಕದಿಂದೀಚೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಭಯೋತ್ಪಾದನೆಗೆ (Terrorism) 42,000 ಜನರು ಬಲಿಯಾಗಿದ್ದಾರೆ. ನಾವೇಕೆ ಪಾಕಿಸ್ತಾನದೊಂದಿಗೆ (Pakistan) ಮಾತುಕತೆ ನಡೆಸಬೇಕು? ಜಮ್ಮು ಮತ್ತು ಕಾಶ್ಮೀರದಿಂದ ಭಯೋತ್ಪಾದನೆಯನ್ನು ನಿರ್ನಾಮ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಇಂದು ಪ್ರತಿಜ್ಞೆ ಮಾಡಿದರು.
Advertisement
ಬುಧವಾರ ಬಾರಾಮುಲ್ಲಾದಲ್ಲಿ (Baramullah) ನಡೆದ ಬೃಹತ್ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಶಾ, 70 ವರ್ಷಗಳ ಕಾಲ ಆಡಳಿತ ನಡೆಸಿದವರು ಇಂದು ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಲು ಒತ್ತಾಯಿಸುತ್ತಿದ್ದಾರೆ. ನಾವೇಕೆ ಪಾಕಿಸ್ತಾನದೊಂದಿಗೆ ಮಾತನಾಡಬೇಕು? ನಾವು ಮಾತನಾಡುವುದಿಲ್ಲ. ಬದಲಿಗೆ ಬಾರಾಮುಲ್ಲಾದ ಜನರೊಂದಿಗೆ, ಕಾಶ್ಮೀರದ ಜನರೊಂದಿಗೆ ಮಾತನಾಡುತ್ತೇವೆ. ಆ ಪ್ರದೇಶವನ್ನು ದೇಶದ ಅತ್ಯಂತ ಶಾಂತಿಯುತ ಪ್ರದೇಶವನ್ನಾಗಿ ಮಾಡಲು ನಾವು ಬಯಸುತ್ತೇವೆ ಎಂದು ನುಡಿದರು. ಇದನ್ನೂ ಓದಿ: ದಸರಾ ಜಂಬೂಸವಾರಿಗೆ ಚಾಲನೆ – ರಾಜಗಾಂಭಿರ್ಯದಿಂದ ಹೆಜ್ಜೆ ಹಾಕುತ್ತಿದ್ದಾನೆ ಅಭಿಮನ್ಯು
Advertisement
Chaired a meeting to review the security situation of J&K in Srinagar.
People of J&K is witnessing a new era of peace, progress and prosperity under the leadership of PM @narendramodi Ji.
I applaud the relentless & coordinated efforts of our security forces to curb terrorism. pic.twitter.com/RJbc8dw3ow
— Amit Shah (@AmitShah) October 5, 2022
Advertisement
ನಾವು ಜಮ್ಮು ಮತ್ತು ಕಾಶ್ಮೀರದಲ್ಲಿ 2014ರಿಂದ ಇಲ್ಲಿಯವರೆಗೆ 9 ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಿದ್ದೇವೆ. 1 ಲಕ್ಷ ಮನೆಗಳನ್ನು ಕಟ್ಟಿಸಿದ್ದೇವೆ. ಪಾಕ್ ಆಕ್ರಮಿತ ಕಾಶ್ಮಿರ ಸೇರಿದಂತೆ ಕಾಶ್ಮೀರದ ಎಲ್ಲಾ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕವನ್ನೂ ಕಲ್ಪಿಸಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಕೊಡಚಾದ್ರಿ ಸೇರಿದಂತೆ ದೇಶದ 18 ಕಡೆ ರೋಪ್‌ವೇ ನಿರ್ಮಿಸಲು ಕೇಂದ್ರ ಯೋಜನೆ