Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Search

Archives

  • October 2026
  • September 2026
  • August 2026
  • July 2026
  • June 2026
  • May 2026
  • April 2026
  • March 2026
  • February 2026
  • January 2026
  • December 2025
  • November 2025
  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022
  • October 2022
  • September 2022
  • August 2022
  • July 2022
  • June 2022
  • May 2022
  • April 2022
  • March 2022
  • February 2022
  • January 2022
  • December 2021
  • November 2021
  • October 2021
  • September 2021
  • August 2021
  • July 2021
  • June 2021
  • May 2021
  • April 2021
  • March 2021
  • February 2021
  • January 2021
  • December 2020
  • November 2020
  • October 2020
  • September 2020
  • August 2020
  • July 2020
  • June 2020
  • May 2020
  • April 2020
  • March 2020
  • February 2020
  • January 2020
  • December 2019
  • November 2019
  • October 2019
  • September 2019
  • August 2019
  • July 2019
  • June 2019
  • May 2019
  • April 2019
  • March 2019
  • February 2019
  • January 2019
  • December 2018
  • November 2018
  • October 2018
  • September 2018
  • August 2018
  • July 2018
  • June 2018
  • May 2018
  • April 2018
  • March 2018
  • February 2018
  • January 2018
  • December 2017
  • November 2017
  • October 2017
  • September 2017
  • August 2017
  • July 2017
  • June 2017
  • May 2017
  • April 2017
  • March 2017
  • February 2017

Categories

  • 31 Districts
  • Advertisement
  • Astrology
  • Automobile
  • Ayodhya Ram Mandir
  • Ayodhya Updates
  • Bagalkot
  • BELAKU
  • Belgaum
  • Bellary
  • Bengaluru City
  • Bengaluru Rural
  • Bidar
  • Big Bulletin
  • Bollywood
  • Chamarajanagar
  • Chikkaballapur
  • Chikkamagaluru
  • Chitradurga
  • Cinema
  • Column
  • Corona
  • Court
  • Cricket
  • Crime
  • Dakshina Kannada
  • Davanagere
  • Delhi Election 2025
  • Dharwad
  • Dina Bhavishya
  • Districts
  • Education
  • Election News
  • Entertainment Videos
  • Explainer
  • Fashion
  • Featured
  • Food
  • Gadag
  • Hassan
  • Haveri
  • Health
  • Kalaburagi
  • Karnataka
  • Karnataka Budget 2022
  • Karnataka Budget 2023
  • Karnataka Budget 2024
  • Karnataka Election
  • Karnataka Election 2023
  • Kodagu
  • Kolar
  • Koppal
  • Latest
  • Main Post
  • Mandya
  • Monsoon
  • Most Shared
  • Mysuru
  • National
  • News Videos
  • Non Veg
  • Other Sports
  • Out of the box
  • Photos
  • Political News
  • Public Hero
  • Raichur
  • Ramanagara
  • Rameshwaram Cafe
  • Sandalwood
  • Shivamogga
  • Smartphones
  • South cinema
  • Special
  • Sports
  • States
  • Stories
  • Tech
  • Telangana
  • Telecom
  • Top Stories
  • Travel
  • Tumakuru
  • TV Shows
  • Udupi
  • Uncategorized
  • Uttara Kannada
  • Veg
  • Videos
  • Vijayapura
  • World
  • Yadgir
  • ಆತ್ಮಹತ್ಯೆ
  • ಟ್ರೆಂಡಿಂಗ್ ನ್ಯೂಸ್ ( Trending News )
  • Privacy Policy
  • CSR-Policy
  • Terms of Service
  • POSH POLICY
  • Complaints Redressal
  • Terms and Conditions
  • Contact
© Public TV. Design Company Knowtable. All Rights Reserved.
Reading: 4 ಪರಿಷತ್ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವಿಗೆ ಶ್ರಮ: ಬಿ.ವೈ. ವಿಜಯೇಂದ್ರ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • POSH POLICY
  • Complaints Redressal
  • Terms and Conditions
  • Contact
© Public TV. Design Company Knowtable. All Rights Reserved.

Home | Districts | Bengaluru City | 4 ಪರಿಷತ್ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವಿಗೆ ಶ್ರಮ: ಬಿ.ವೈ. ವಿಜಯೇಂದ್ರ

Bengaluru City

4 ಪರಿಷತ್ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವಿಗೆ ಶ್ರಮ: ಬಿ.ವೈ. ವಿಜಯೇಂದ್ರ

Last updated: October 18, 2026 5:59 pm
By
Public TV
Share
7 Min Read
BY Vijayendra

– ಸಂಕನೂರು ಅವರಿಗೆ ಹ್ಯಾಟ್ರಿಕ್ ಗೆಲುವಿನ ಅವಕಾಶ
– ಕಬ್ಬು ಬೆಳೆಗಾರರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಕೇಂದ್ರ ಸರ್ಕಾರ ಗಂಭೀರ ಚಿಂತನೆ
– ರೈತರಿಗೆ 2,500 ರೂ. ಪರಿಹಾರ ಘೋಷಿಸಿರುವುದು ಸರ್ಕಾರದ ರೈತಪರ ಕಾಳಜಿಯೇ?

ಬೆಂಗಳೂರು: ಅಕ್ಟೋಬರ್ 23ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ(Vidhan Parishad Election) ಬಿಜೆಪಿ-ಜೆಡಿಎಸ್ ನೇತೃತ್ವದ ಎನ್‌ಡಿಎ ಅಭ್ಯರ್ಥಿಗಳ ಪರವಾಗಿ ಮತದಾರರು ಬೆಂಬಲ ನೀಡಲಿದ್ದು, ನಾಲ್ಕೂ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಗೆಲುವಿಗಾಗಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸಂಘಟಿತವಾಗಿ ಶ್ರಮಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ(BY Vijayendra) ವಿಶ್ವಾಸ ವ್ಯಕ್ತಪಡಿಸಿದರು.

ಹಾಲಿ ವಿಧಾನ ಪರಿಷತ್ ಸದಸ್ಯ ಶಂಕರನೂರು ಅವರು ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಜನರ ಧ್ವನಿಯಾಗಿ ಸೇವೆ ಸಲ್ಲಿಸಿದ್ದಾರೆ. ಸಜ್ಜನ ರಾಜಕಾರಣಿಯಾಗಿರುವ ಅವರಿಗೆ ಮತ್ತೊಮ್ಮೆ ಗೆಲುವು ಸಾಧಿಸಿ ಹ್ಯಾಟ್ರಿಕ್ ದಾಖಲಿಸಲು ಉತ್ತಮ ಅವಕಾಶವಿದೆ. ಅವರನ್ನು ಗೆಲ್ಲಿಸಲು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಾವೂ ಮತದಾರರನ್ನು ಭೇಟಿ ಮಾಡಿ ಮತಯಾಚನೆ ಮಾಡುತ್ತಿರುವುದಾಗಿ ತಿಳಿಸಿದರು.

ನಾಲ್ಕು ವಿಧಾನ ಪರಿಷತ್ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳ ಪರವಾಗಿ ಕಾರ್ಯಕರ್ತರು ಪ್ರಚಾರ ನಡೆಸುತ್ತಿದ್ದಾರೆ. ಶಂಕರನೂರು, ಕೆ.ಎಂ. ಸುರೇಶ್, ನಮೋಶ್ ಹಾಗೂ ಬೆಂಗಳೂರಿನ ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ ಸೇರಿದಂತೆ ಎಲ್ಲ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಲಾಗುತ್ತಿದೆ ಎಂದು ಹೇಳಿದರು.

More Read

Bihar Man Arrested in Bengaluru for Sharing AI Generated Video Showing Bomb Blast at Vidhana Soudha
ವಿಧಾನಸೌಧವನ್ನು ಬಾಂಬ್ ಇಟ್ಟು ಉಡಾಯಿಸಿದಂತೆ ಎಐ ವಿಡಿಯೋ – ಬಿಹಾರದ ಯುವಕ ಅರೆಸ್ಟ್‌
k s eshwarappa receives yediyurappas blessings in shivamogga dasara
ಬಿಎಸ್‌ವೈಗೆ ಬನ್ನಿ ನೀಡಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಈಶ್ವರಪ್ಪ
Tumakuru Dasara 2026 1
ವೈಭವದ ತುಮಕೂರು ದಸರಾಗೆ ಅದ್ಧೂರಿ ತೆರೆ

ಶಾಶ್ವತ ಪರಿಹಾರ ಕಲ್ಪಿಸಲಿ
ಕಬ್ಬು ಬೆಳೆಗಾರರ(Sugarcane) ಸಮಸ್ಯೆಯ ಕುರಿತು ಮಾತನಾಡಿದ ವಿಜಯೇಂದ್ರ ಅವರು, ಪ್ರಧಾನಿ ನರೇಂದ್ರ ಮೋದಿ(Narendra Modi) ನೇತೃತ್ವದ ಕೇಂದ್ರ ಸರ್ಕಾರ ರೈತರ ಹಿತದೃಷ್ಟಿಯಿಂದ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಕಬ್ಬಿಗೆ ನ್ಯಾಯಸಮ್ಮತ ಮತ್ತು ಖಾತರಿಯ ಬೆಲೆ ದೊರೆಯುವಂತೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್‌ಆರ್‌ಪಿ) ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಎಥೆನಾಲ್ ನೀತಿಯಿಂದ ಸಕ್ಕರೆ ಕಾರ್ಖಾನೆಗಳಿಗೂ ಅನುಕೂಲವಾಗಿದ್ದು, ರೈತರಿಗೆ ಕಬ್ಬಿನ ಬಾಕಿ ಪಾವತಿಸುವ ಪ್ರಕ್ರಿಯೆಗೂ ನೆರವಾಗಿದೆ ಎಂದರು.

ಹಲವು ದಶಕಗಳಿಂದ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಗಳಿಂದ ಹಣ ಪಾವತಿಯಾಗುವಲ್ಲಿ ವಿಳಂಬ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ನೀತಿಗಳು ಈ ಸಮಸ್ಯೆಗಳನ್ನು ಬಗೆಹರಿಸಲು ನೆರವಾಗಿವೆ. ಆದರೂ ಪ್ರಸ್ತುತ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಭೀಕರ ಬರಗಾಲವಿದ್ದು, ರೈತರು ಸಂಕಷ್ಟದಲ್ಲಿದ್ದಾರೆ ಎಂಬುದನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೂ ಗಮನಿಸಬೇಕು. ಆದರೆ, ಕಬ್ಬು ಬೆಳೆಗಾರರ ಸಮಸ್ಯೆಯನ್ನು ಕೇಂದ್ರ ಸರ್ಕಾರ, ಬ್ಯಾಂಕುಗಳು ಮತ್ತು ಸಕ್ಕರೆ ಕಾರ್ಖಾನೆಗಳೇ ಬಗೆಹರಿಸಬೇಕು ಎಂಬ ರೀತಿಯಲ್ಲಿ ಮಾತನಾಡುವುದು ರಾಜ್ಯ ಸರ್ಕಾರದ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನವಾಗಿದೆ ಎಂದು ಟೀಕಿಸಿದರು.

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಕಬ್ಬು ಬೆಳೆಗಾರರ ಸಮಸ್ಯೆಯ ಬಗ್ಗೆ ಗಂಭೀರವಾಗಿ ಗಮನಹರಿಸಿದ್ದಾರೆ. ಈ ಸಂಬಂಧ ಸಮಿತಿ ರಚನೆಯಾಗಿದ್ದು, ದಸರಾ ನಂತರ ಸಮಸ್ಯೆಗಳ ಪರಿಶೀಲನೆ ನಡೆಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬ ಮಾಹಿತಿ ದೊರೆತಿದೆ. ಕಬ್ಬು ಬೆಳೆಗಾರರಿಗೆ ಶಾಶ್ವತ ಪರಿಹಾರ ಕಲ್ಪಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಿದರು.

ರೈತರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುವುದರಲ್ಲಿ ತಪ್ಪಿಲ್ಲ. ಕಬ್ಬು ಬೆಳೆಗಾರರು ನ್ಯಾಯಕ್ಕಾಗಿ ಹೋರಾಡುವುದನ್ನು ನಾವು ವಿರೋಧಿಸುವುದಿಲ್ಲ. ಆದರೆ, ಹೋರಾಟದ ಸಂದರ್ಭದಲ್ಲಿ ವೈಯಕ್ತಿಕ ಟೀಕೆಗಳನ್ನು ಮಾಡುವುದು ಹಾಗೂ ವ್ಯಕ್ತಿಗಳ ತೇಜೋವಧೆಗೆ ಮುಂದಾಗುವುದು ಸರಿಯಲ್ಲ. ರೈತ ಮುಖಂಡರು ಸಂಯಮದಿಂದ ವರ್ತಿಸಬೇಕು ಎಂದು ಮನವಿ ಮಾಡಿದರು.

ಕಬ್ಬಿಗೆ ಹೆಚ್ಚುವರಿ ಬೆಂಬಲ ಬೆಲೆ ನೀಡಿ
ಹರಿಯಾಣ, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕಬ್ಬು ಬೆಳೆಗಾರರಿಗೆ ರಾಜ್ಯ ಸರ್ಕಾರಗಳು ಹೆಚ್ಚುವರಿ ಬೆಂಬಲ ಬೆಲೆ ನೀಡುತ್ತಿವೆ. ಕೆಲವು ರಾಜ್ಯಗಳಲ್ಲಿ ಪ್ರತಿ ಟನ್‌ಗೆ ₹500ರಷ್ಟು ಹೆಚ್ಚುವರಿ ಬೆಂಬಲ ಬೆಲೆ ನೀಡುವ ಮಾದರಿಯೂ ಇದೆ. ಸಕ್ಕರೆ ಕಾರ್ಖಾನೆಗಳಿಂದ ರಾಜ್ಯ ಸರ್ಕಾರಕ್ಕೆ ಗಮನಾರ್ಹ ಆದಾಯ ಬರುತ್ತಿರುವಾಗ ಕರ್ನಾಟಕ ಸರ್ಕಾರ ರೈತರ ನೆರವಿಗೆ ಏಕೆ ಮುಂದಾಗಬಾರದು ಎಂದು ವಿಜಯೇಂದ್ರ ಪ್ರಶ್ನಿಸಿದರು.

ರಾಜ್ಯ ಸರ್ಕಾರವು ಕಬ್ಬಿಗೆ ರಾಜ್ಯ ಸಲಹಾ ಬೆಲೆ (ಎಸ್‌ಎಪಿ) ನಿಗದಿಪಡಿಸುವ ಸಾಧ್ಯತೆಯನ್ನು ಪರಿಶೀಲಿಸಬೇಕು. ಕೇಂದ್ರ ಸರ್ಕಾರದ ಪ್ರಯತ್ನಗಳ ಜೊತೆಗೆ ರಾಜ್ಯ ಸರ್ಕಾರವೂ ತನ್ನ ಜವಾಬ್ದಾರಿಯನ್ನು ನಿಭಾಯಿಸಬೇಕು. ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ, ಅವರ ಸಂಕಷ್ಟಕ್ಕೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.

ಬರಗಾಲದ ಹಿನ್ನೆಲೆಯಲ್ಲಿ ರೈತ ಕುಟುಂಬಗಳಿಗೆ 2,500 ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಘೋಷಿಸಿರುವುದು ಸಮರ್ಪಕ ಪರಿಹಾರವೇ? ರೈತರ ಸಂಕಷ್ಟಕ್ಕೆ ಇಷ್ಟೇ ಪರಿಹಾರ ಸಾಕೇ? ಎಂದು ಪ್ರಶ್ನಿಸಿದರು.

ರೈತರ ಸಂಕಷ್ಟದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಹೆಚ್ಚು ಪರಿಣಾಮಕಾರಿಯಾದ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ರಿಯಲ್ ಎಸ್ಟೇಟ್ ಕುರಿತ ಚಿಂತನೆಗಳನ್ನು ಬದಿಗಿಟ್ಟು ರೈತರ ಬದುಕಿನ ಬಗ್ಗೆ ಗಂಭೀರವಾಗಿ ಯೋಚಿಸಬೇಕು. ಹೆಲಿಕಾಪ್ಟರ್‌ನಲ್ಲಿ ಬಂದು ರೈತರನ್ನು ಭೇಟಿ ಮಾಡಿ ಭಾವನಾತ್ಮಕ ಹೇಳಿಕೆ ನೀಡುವುದರಿಂದ ಮಾತ್ರ ಸಮಸ್ಯೆಗಳು ಬಗೆಹರಿಯುವುದಿಲ್ಲ. ಕಬ್ಬು ಬೆಳೆಗಾರರು ಸೇರಿದಂತೆ ರಾಜ್ಯದ ರೈತರಿಗೆ ಪರಿಣಾಮಕಾರಿ ನೆರವು ನೀಡುವ ನಿರ್ಧಾರಗಳನ್ನು ಸರ್ಕಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಆತ್ಮಾವಲೋಕನ ಮಾಡಿಕೊಳ್ಳಲಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ಹಿನ್ನಡೆಗಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯನ್ನು ಎದುರಿಸಲಾಗದೆ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದರು.

ಸಂವಿಧಾನ, ಚುನಾವಣಾ ಆಯೋಗ ಮತ್ತು ಸುಪ್ರೀಂ ಕೋರ್ಟ್‌ನಂತಹ ಸಾಂವಿಧಾನಿಕ ಸಂಸ್ಥೆಗಳ ಬಗ್ಗೆ ಕಾಂಗ್ರೆಸ್ ನಾಯಕರು ಅನುಮಾನ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ. ಕಾಂಗ್ರೆಸ್ ಪಕ್ಷದ ಬಗ್ಗೆ ಜನರು ಏಕೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ ಎಂಬುದನ್ನು ರಾಹುಲ್ ಗಾಂಧಿ ಆತ್ಮಾವಲೋಕನ ಮಾಡಿಕೊಳ್ಳಬೇಕು. ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿರುವುದು ಜನರ ಬೆಂಬಲಕ್ಕೆ ಸಾಕ್ಷಿಯಾಗಿದೆ ಎಂದರು.

ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು, ಸಂಘಟನೆಗಳ ಚಟುವಟಿಕೆಗಳು ಮತ್ತು ಅವುಗಳ ಹಿನ್ನೆಲೆಯ ಬಗ್ಗೆ ಸೂಕ್ತ ತನಿಖೆ ನಡೆಯಬೇಕು. ಯಾವುದೇ ಸಂಘಟನೆಗೆ ಕಾನೂನುಬಾಹಿರ ಹಣಕಾಸಿನ ನೆರವು ನೀಡಿರುವ ಆರೋಪಗಳಿದ್ದರೆ ಅವುಗಳ ಸತ್ಯಾಸತ್ಯತೆ ಹೊರಬರಬೇಕು ಎಂದು ಹೇಳಿದರು.

ಗುಜರಾತ್‌ನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಸೇರಿದಂತೆ ವಿವಿಧ ಚುನಾವಣೆಗಳಲ್ಲಿ ಬಿಜೆಪಿ ಸಾಧಿಸಿರುವ ಗೆಲುವುಗಳು ಪಕ್ಷದ ಜನಪ್ರಿಯತೆಯನ್ನು ತೋರಿಸುತ್ತವೆ. ದೇಶದ ಜನರ ವಿಶ್ವಾಸವನ್ನು ಮರಳಿ ಗಳಿಸಲು ಕಾಂಗ್ರೆಸ್ ತನ್ನ ವೈಫಲ್ಯಗಳ ಬಗ್ಗೆ ಚಿಂತಿಸಬೇಕೇ ಹೊರತು ಇತರರ ಮೇಲೆ ಆರೋಪಗಳನ್ನು ಮಾಡುವುದರಿಂದ ಪ್ರಯೋಜನವಿಲ್ಲ ಎಂದು ಟೀಕಿಸಿದರು.

ರಾಜ್ಯ ಕಾಂಗ್ರೆಸ್‌ನಲ್ಲಿನ ಆಂತರಿಕ ಸಂಘರ್ಷದ ಕುರಿತು ಮಾತನಾಡಿದ ವಿಜಯೇಂದ್ರ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದ ವಿಚಾರವಾಗಿ ಕಾಂಗ್ರೆಸ್‌ನಲ್ಲಿಯೇ ಅಸಮಾಧಾನವಿದೆ. ಪಕ್ಷದ ಹಿರಿಯ ನಾಯಕರ ನಡುವೆ ಪರಸ್ಪರ ವಿಶ್ವಾಸದ ಕೊರತೆ ಉಂಟಾಗಿದೆ ಎಂಬ ಚರ್ಚೆಗಳು ನಡೆಯುತ್ತಿವೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾಂಗ್ರೆಸ್ ಪಕ್ಷದೊಳಗೇ ತೇಜೋವಧೆ ಮಾಡುವ ಪ್ರಯತ್ನಗಳು ನಡೆದಿವೆ ಎಂಬ ಆರೋಪಗಳಿವೆ. ಇತ್ತೀಚಿನ ಸ್ಟಿಂಗ್ ಆಪರೇಷನ್ ವಿಚಾರವೂ ಕಾಂಗ್ರೆಸ್‌ನ ಆಂತರಿಕ ರಾಜಕೀಯಕ್ಕೆ ಸಂಬಂಧಿಸಿದೆ ಎಂಬ ಅನುಮಾನಗಳಿವೆ. ಈ ಸ್ಟಿಂಗ್ ಆಪರೇಷನ್‌ಗಳ ಹಿಂದೆ ಯಾರು ಇದ್ದಾರೆ, ಯಾರನ್ನು ಗುರಿಯಾಗಿಸಲಾಗಿದೆ ಮತ್ತು ಇದರ ಉದ್ದೇಶವೇನು ಎಂಬುದು ಮುಂದಿನ ದಿನಗಳಲ್ಲಿ ಬಹಿರಂಗವಾಗಲಿದೆ ಎಂದು ಹೇಳಿದರು.

ವಿಧಾನ ಪರಿಷತ್ ಚುನಾವಣೆಯ ಫಲಿತಾಂಶದ ನಂತರ ಕಾಂಗ್ರೆಸ್‌ನ ಆಂತರಿಕ ಬೆಳವಣಿಗೆಗಳು ಮತ್ತಷ್ಟು ಸ್ಪಷ್ಟವಾಗಲಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದ ಬಗ್ಗೆ ಕಾಂಗ್ರೆಸ್‌ನಲ್ಲೇ ಅಸಮಾಧಾನವಿದೆ ಎಂಬುದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. ಅಧಿಕಾರ ಉಳಿಸಿಕೊಳ್ಳಲು ನಡೆಯುತ್ತಿರುವ ಪ್ರಯತ್ನಗಳು ಬಹಳ ದಿನ ಮುಂದುವರಿಯುವುದಿಲ್ಲ ಎಂದು ವಿಜಯೇಂದ್ರ ಹೇಳಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ತಾವು ಹಿಂದೆಯೂ ಹೇಳಿದ್ದೆ. ಆಗ ತಮ್ಮ ಹೇಳಿಕೆಯನ್ನು ಕಾಂಗ್ರೆಸ್ ನಾಯಕರು ಲಘುವಾಗಿ ಪರಿಗಣಿಸಿದ್ದರು. ಆದರೆ, ರಾಜ್ಯ ಕಾಂಗ್ರೆಸ್‌ನಲ್ಲಿ ನಡೆದ ಬೆಳವಣಿಗೆಗಳು ಆಂತರಿಕ ಸಂಘರ್ಷದ ಕುರಿತು ತಾವು ವ್ಯಕ್ತಪಡಿಸಿದ್ದ ಅಭಿಪ್ರಾಯಗಳ ಹಿನ್ನೆಲೆಯನ್ನು ತೋರಿಸಿವೆ ಎಂದು ಹೇಳಿದರು.

ಕಾಂಗ್ರೆಸ್‌ನ ಆಂತರಿಕ ರಾಜಕೀಯದಲ್ಲಿ ಯಾರು ಯಾರ ವಿರುದ್ಧ ತಂತ್ರ ರೂಪಿಸುತ್ತಿದ್ದಾರೆ ಎಂಬುದು ಆ ಪಕ್ಷದ ನಾಯಕರಿಗೇ ತಿಳಿದಿದೆ. ಮುಂದಿನ ದಿನಗಳಲ್ಲಿ ಈ ವಿಚಾರಗಳು ಮತ್ತಷ್ಟು ಬಹಿರಂಗವಾಗಲಿವೆ ಎಂದು ತಿಳಿಸಿದರು.

ಕಾಂಗ್ರೆಸ್ ನಾಯಕರ ವೈಯಕ್ತಿಕ ಹೇಳಿಕೆಗಳಿಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ಪಕ್ಷದೊಳಗಿನ ಭಿನ್ನಾಭಿಪ್ರಾಯಗಳು ಮತ್ತು ನಾಯಕತ್ವದ ವಿಚಾರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳೇ ಆ ಪಕ್ಷದ ಸ್ಥಿತಿಯನ್ನು ತೋರಿಸುತ್ತಿವೆ ಎಂದು ಹೇಳಿದರು.

ನಿಷ್ಪಕ್ಷಪಾತ ತನಿಖೆಯಾಗಲಿ
ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆಯುತ್ತಿರುವ ಅಕ್ರಮಗಳು ಮತ್ತು ವಿಳಂಬಗಳ ಬಗ್ಗೆ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.

ಕೆಪಿಎಸ್‌ಸಿಯನ್ನು ರದ್ದುಗೊಳಿಸುವುದು ಅಥವಾ ಮುಚ್ಚುವುದು ಸಮಸ್ಯೆಗೆ ಪರಿಹಾರವಲ್ಲ. ನೇಮಕಾತಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸುವುದು ಮುಖ್ಯ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಕ್ರಮಗಳು ನಡೆದಿದ್ದರೆ ಅವುಗಳನ್ನೂ ನಿಷ್ಪಕ್ಷಪಾತವಾಗಿ ತನಿಖೆ ಮಾಡಲಿ. ತಪ್ಪಿತಸ್ಥರು ಯಾರೇ ಆಗಿರಲಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಕೆಪಿಎಸ್‌ಸಿ ನೇಮಕಾತಿ ವಿಚಾರವಾಗಿ ಹುಬ್ಬಳ್ಳಿ-ಧಾರವಾಡ ಸೇರಿದಂತೆ ವಿವಿಧ ಭಾಗಗಳಲ್ಲಿ ಯುವಕರು ಪ್ರತಿಭಟನೆ ನಡೆಸಿದ್ದಾರೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಅವಕಾಶ ಸಿಗದೆ ಅಭ್ಯರ್ಥಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಉದ್ಯೋಗಕ್ಕಾಗಿ ವರ್ಷಗಟ್ಟಲೆ ಓದಿ ಸಿದ್ಧತೆ ನಡೆಸುತ್ತಿರುವ ಯುವಕರ ಭವಿಷ್ಯದ ಬಗ್ಗೆ ಸರ್ಕಾರಕ್ಕೆ ಜವಾಬ್ದಾರಿ ಇರಬೇಕು ಎಂದರು.

ಪರೀಕ್ಷೆಗಳ ದಿನಾಂಕ ಪ್ರಕಟವಾಗುವುದಿಲ್ಲ, ಪರೀಕ್ಷೆಗಳು ನಡೆದರೂ ಸಂದರ್ಶನದ ದಿನಾಂಕ ನಿಗದಿಯಾಗುವುದಿಲ್ಲ, ಸಂದರ್ಶನ ನಡೆದರೂ ಫಲಿತಾಂಶ ಪ್ರಕಟಿಸಲು ವಿಳಂಬವಾಗುತ್ತದೆ. ಇಂತಹ ಅನಿಶ್ಚಿತತೆಯಿಂದ ಲಕ್ಷಾಂತರ ಯುವಕರಿಗೆ ತೊಂದರೆಯಾಗುತ್ತಿದೆ. ಅವರ ಜೀವನದ ಜೊತೆ ಸರ್ಕಾರ ಚೆಲ್ಲಾಟವಾಡಬಾರದು ಎಂದು ಹೇಳಿದರು.

ರಾಜ್ಯದಲ್ಲಿ ಖಾಲಿ ಇರುವ ಸುಮಾರು ಎರಡೂವರೆ ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಕಾಂಗ್ರೆಸ್ ಚುನಾವಣೆಗೂ ಮುನ್ನ ಭರವಸೆ ನೀಡಿತ್ತು. ಅಧಿಕಾರಕ್ಕೆ ಬಂದ ಬಳಿಕ ಎಷ್ಟು ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ಮೊದಲು ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ, ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆ ತಂದು, ಅಕ್ರಮಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಕೆಪಿಎಸ್‌ಸಿ ವ್ಯವಸ್ಥೆಯಲ್ಲಿ ವಿಶ್ವಾಸ ಮೂಡಿಸುವುದು ಮತ್ತು ಯುವಕರಿಗೆ ನ್ಯಾಯ ಒದಗಿಸುವುದು ಸರ್ಕಾರದ ಆದ್ಯತೆಯಾಗಬೇಕು. ಯಾವುದೇ ಪಕ್ಷದ ಅವಧಿಯಲ್ಲಿ ಅಕ್ರಮಗಳು ನಡೆದಿದ್ದರೂ ಅವುಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಬೇಕು ಎಂದು ಬಿ.ವೈ. ವಿಜಯೇಂದ್ರ ಹೇಳಿದರು.

Share This Article
Facebook Whatsapp Whatsapp Telegram Copy Link
Cinema News
Navarasans Directorial Aadi Rudra Release in Five Languages 2
ಐದು ಭಾಷೆಗಳಲ್ಲಿ ಬರಲಿದೆ ನವರಸನ್ ನಿರ್ದೇಶನದ ಆದಿ ರುದ್ರ
YASH RAVANA
ರಾಕಿಂಗ್ ಸ್ಟಾರ್ ಯಶ್ ‘ರಾವಣ ತಾಂಡವ’ ಅನಾವರಣ: ಮುಂಗಡ ಟಿಕೆಟ್ ಬುಕ್ಕಿಂಗ್ ‌ಆರಂಭ
Kempe Gowda Movie copy
ವಿಜಯ ದಶಮಿಗೆ ಕೆಂಪೇಗೌಡರ ನ್ಯೂ ಲುಕ್ ರಿಲೀಸ್
Sara Ali Khan Golden Temple
ದಸರಾ ಹಬ್ಬ; ಅಮೃತಸರದ ಗೋಲ್ಡನ್‌ ಟೆಂಪಲ್‌ನಲ್ಲಿ ಬಿಕ್ಕಿ ಬಿಕ್ಕಿ ಅತ್ತ ಸಾರಾ ಅಲಿ ಖಾನ್

You Might Also Like

Tragedy in Ballari Father Drowns Trying to Save 10 Year Old Son in Historic Fort Pond

ಬಳ್ಳಾರಿ ಐತಿಹಾಸಿಕ ಕೋಟೆಯ ಬೆಟ್ಟದ ಹೊಂಡದಲ್ಲಿ ಬಿದ್ದು ತಂದೆ-ಮಗ ದಾರುಣ ಸಾವು

6 hours ago
youth dies after jumping into lake during ganesha immersion

ಗಣೇಶ ವಿಸರ್ಜನೆ ವೇಳೆ ಕಂಠಪೂರ್ತಿ ಕುಡಿದು ಕೆರೆಗೆ ಹಾರಿ ವ್ಯಕ್ತಿ ಸಾವು

7 hours ago
Hardeep Singh Puri Epstein

ಜೆಫ್ರಿ ಎಪ್‌ಸ್ಟೀನ್ ಜೊತೆ ಹರ್ದೀಪ್ ಸಿಂಗ್ ಪುರಿ ಫೋಟೋ – ಕೇಂದ್ರದ ವಿರುದ್ಧ ಮುಗಿಬಿದ್ದ ವಿಪಕ್ಷಗಳು

7 hours ago
DK Shivakumar Mysuru Dasara

ವಿಶ್ವಪ್ರಸಿದ್ಧ ಮೈಸೂರು ಜಂಬೂ ಸವಾರಿ ಸಂಪನ್ನ – ಮೊದಲಬಾರಿಗೆ ಅಂಬಾರಿ ಹೊತ್ತ ಪ್ರಶಾಂತ

8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
© Public TV. Design Company Knowtable. All Rights Reserved.
  • Privacy Policy
  • CSR-Policy
  • Terms of Service
  • POSH POLICY
  • Complaints Redressal
  • Terms and Conditions
  • Contact