ಚಂಡೀಗಢ: ಪಂಜಾಬ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರದೊಂದಿಗೆ ಕೆಲಸ ಮಾಡಲಿದೆ ಎಂದು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಇತ್ತೀಚೆಗೆ ಪಂಜಾಬ್‌ನಲ್ಲಿ ನಡೆದ ಪ್ರಧಾನಿಗಳ ಭದ್ರತೆ ವೈಫಲ್ಯ ಪ್ರಕರಣದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪಂಜಾಬ್‌ನ ಚರಣ್‌ಜಿತ್ ಸಿಂಗ್ ಚನ್ನಿ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ:
Advertisement
Advertisement
ಪಂಜಾಬ್‌ನಲ್ಲಿ ಅಧಿಕಾರಕ್ಕೆ ಬಂದರೆ, ರಾಜ್ಯ ಮತ್ತು ದೇಶದ ಭದ್ರತೆಯ ವಿಷಯದಲ್ಲಿ ಕೇಂದ್ರದೊಂದಿಗೆ ಒಟ್ಟಾಗಿ ಕೆಲಸ ಮಾಡುತ್ತೇವೆ. ಪ್ರಧಾನಿ ಭದ್ರತೆ ವಿಚಾರದಲ್ಲಿ ರಾಜಕೀಯ ಮಾಡಬಾರದು. ಆದರೆ ಎರಡೂ ಕಡೆಯಿಂದ ರಾಜಕೀಯ ಮಾಡಲಾಗಿದೆ ಎಂದು ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಚಾಟಿ ಬೀಸಿದ್ದಾರೆ.
Advertisement
ಅಮಿತ್ ಶಾ, ಚನ್ನಿ, ಪ್ರಿಯಾಂಕಾ ಗಾಂಧಿ, ಅಕಾಲಿದಳ ನಾಯಕರು ಒಟ್ಟಾಗಿ ನನ್ನ ಮತ್ತು ಭಗವಂತ್ ಮಾನ್ ವಿರುದ್ಧ ನಿಂದನೆ ಮಾಡುತ್ತಿದ್ದಾರೆ. ಅವರು ಒಬ್ಬರಿಗೊಬ್ಬರು ಏನನ್ನೂ ಹೇಳುವುದಿಲ್ಲ. ಅವರು ಪಡೆಗಳನ್ನು ಸೇರಿಕೊಂಡಿದ್ದಾರೆ. ಪಂಜಾಬ್‌ನಲ್ಲಿ ಎಎಪಿ ಸರ್ಕಾರ ರಚಿಸಲು ಬಯಸುವುದಿಲ್ಲ. ನಾವು ಅಧಿಕಾರಕ್ಕೆ ಬಂದರೆ ತಮ್ಮ ಲೂಟಿ ಶಾಶ್ವತವಾಗಿ ನಿಲ್ಲುತ್ತದೆ ಎಂಬ ಭಯ ಅವರಿಗಿದೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಪಂಜಾಬ್ ಹಾಲಿ ಸಿಎಂ ವಿರುದ್ಧ ಆಪ್ ಸಿಎಂ ಅಭ್ಯರ್ಥಿಯಿಂದ ಓಪನ್ ಚಾಲೆಂಜ್
Advertisement
ಶಾಲೆ, ಆಸ್ಪತ್ರೆಗಳನ್ನು ನಿರ್ಮಿಸುತ್ತೇವೆ. ವಿದ್ಯುತ್ ಸೌಲಭ್ಯ ಒದಗಿಸುತ್ತೇವೆ. ಕಾನೂನು ಸುವ್ಯವಸ್ಥೆ ಸಮಸ್ಯೆ ಬಗೆಹರಿಸುತ್ತೇವೆ ಎಂದು ಹೇಳಿದ್ದೇವೆ. ಇದರಲ್ಲಿ ತಪ್ಪೇನಿದೆ? ನಮ್ಮದು ಪ್ರಾಮಾಣಿಕ ಪಕ್ಷ. ನಾವು ಪ್ರಾಮಾಣಿಕ ಸರ್ಕಾರವನ್ನು ರಚಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಂಜಾಬ್ ಹಾಲಿ ಸಿಎಂ ವಿರುದ್ಧ ಆಪ್ ಸಿಎಂ ಅಭ್ಯರ್ಥಿಯಿಂದ ಓಪನ್ ಚಾಲೆಂಜ್