ಬೆಳಗಾವಿ: ಚಳಿಗಾಲದ ಅಧಿವೇಶನ (Winter Session) ಆರಂಭಗೊಳ್ಳುವ ಸಂದರ್ಭದಲ್ಲೇ ಮಹಾರಾಷ್ಟ್ರದ ಮಾಜಿ ಸಿಎಂ ಉದ್ದವ್ ಠಾಕ್ರೆ (Uddhav Thackeray) ಪುತ್ರ ಆದಿತ್ಯ ಠಾಕ್ರೆ ಉದ್ಧಟತನದ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಮಹಾ ವಿಕಾಸ ಅಘಾಡಿ ಒಕ್ಕೂಟ ಮಾಡಿಕೊಂಡಿರುವ ಶಿವಸೇನೆ ಶಾಸಕ ಆದಿತ್ಯ ಠಾಕ್ರೆ (Aditya Thackeray) ಗಡಿ ವಿವಾದವನ್ನು ಕೆದಕಿದ್ದಾರೆ. ಬೆಳಗಾವಿ ಗಡಿ ವಿವಾದದಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.
ಗಡಿ ವಿವಾದ ಇತ್ಯರ್ಥ ಆಗುವವರೆಗೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಎಸ್‌ಪಿ ಬಿಜೆಪಿಯ ಬಿ ಟೀಂ – ಆದಿತ್ಯ ಠಾಕ್ರೆ ಆಕ್ರೋಶ
ಉದ್ದವ್ ಠಾಕ್ರೆ ನೇತೃತ್ವದ ಬಣ ಗಡಿ ವಿಚಾರವನ್ನು ಕೆದಕುವುದು ಹೊಸದೆನಲ್ಲ. ಇಲ್ಲಿಯವರೆಗೆ ಭಾಷಾ ವಿಷ ಬೀಜ ಬಿತ್ತುತ್ತಿದ್ದ ಉದ್ಧವ ಠಾಕ್ರೆ ಈಗ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂದು ಹೇಳುವ ಮೂಲಕ ಮತ್ತೆ ಕ್ಯಾತೆ ತೆಗೆದಿದ್ದಾರೆ.