ನವದೆಹಲಿ: ಖಾಸಗಿ ಕ್ರಿಪ್ಟೋ ಕರೆನ್ಸಿಗಳನ್ನು ಸಂಪೂರ್ಣವಾಗಿ ದೇಶದಲ್ಲಿ ನಿಷೇಧ ಮಾಡುವ ಮಸೂದೆಯನ್ನು ಈ ಬಾರಿ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ವರದಿಯಾಗಿದೆ.
Advertisement
ಖಾಸಗಿ ಕ್ರಿಪ್ಟೋ ಕರೆನ್ಸಿ ಸೇರಿ ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ 29 ಮಸೂದೆಯನ್ನು ಮಂಡನೆ ಮಾಡಲು ಮುಂದಾಗಿದೆ. ಅದರಲ್ಲಿ 26 ಮಸೂದೆಗಳು ನೂತನವಾಗಿ ಸೇರಿಕೊಂಡಿದೆ. ಆರ್‌ಬಿಐ ಅಧಿಕೃತವಾಗಿ ಡಿಜಿಟಲ್ ಕರೆನ್ಸಿ ಬಿಡುಗಡೆ ಮಾಡುವ ಮೂಲಕ ಭಾರತದಲ್ಲಿ ಹರಿದಾಡುತ್ತಿರುವ ಎಲ್ಲಾ ಖಾಸಗಿ ಕ್ರಿಪ್ಟೋ ಕರೆನ್ಸಿಗಳನ್ನು ನಿಷೇಧಿಸುವ ‘ಕ್ರಿಪ್ಟೋ ಕರೆನ್ಸಿ ಮತ್ತು ಅಧಿಕೃತ ಡಿಜಿಟಲ್ ಕರೆನ್ಸಿ ನಿಯಂತ್ರಣ ಮಸೂದೆ 2021’ ನ್ನು ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲು ಮೋದಿ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ ಎಂದು ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ಕ್ರಿಪ್ಟೋ ಕರೆನ್ಸಿ ನಿಷೇಧದ ಬದಲು ನಿಯಂತ್ರಣ
Advertisement
Advertisement
ನವೆಂಬರ್ 29 ಮುಂದಿನ ಸೋಮವಾರದಿಂದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ. ಈ ಅಧಿವೇಶನದಲ್ಲಿ ಪ್ರಮುಖವಾಗಿ ಕೃಷಿ ಮಸೂದೆಯ ರದ್ದು ಸೇರಿದಂತೆ ರೈತರು ವಿರೋಧಿಸುತ್ತಿರುವ ವಿದ್ಯುಚ್ಚಕ್ತಿ ತಿದ್ದುಪಡಿ ಮಸೂದೆ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಯಲಿದೆ. ಇದನ್ನೂ ಓದಿ: ಕ್ರಿಪ್ಟೋಕರೆನ್ಸಿ ವಿಚಾರದಲ್ಲಿ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡಬೇಕು: ಮೋದಿ ಕರೆ