ನವದೆಹಲಿ: 22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಿಷೇಧಿತ ಸಂಘಟನೆ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾದ ಉಗ್ರನನ್ನು ದೆಹಲಿ ಪೊಲೀಸರು (Delhi Police) ಬಂಧಿಸಿದ್ದಾರೆ. ಈತ ಕರ್ನಾಟಕ, ಕೆರಳ ಸೇರಿದಂತೆ ದೇಶದ ವಿವಿಧ ಭಾಗಗಳ ಯುವಕರನ್ನು ಭಯೋತ್ಪಾದನಾ ಸಂಘಟನೆಗೆ ಸೇರಲು ಕುಮ್ಮಕ್ಕು ಕೊಡುತ್ತಿದ್ದ ಎಂದು ತಿಳಿದುಬಂದಿದೆ.
ಬಂಧಿತ ಉಗ್ರನನ್ನು ಹನೀಫ್ ಶೇಖ್ (47) ಎಂದು ಗರುತಿಸಲಾಗಿದೆ. ಈತ ಸಿಮಿ ಮೂವ್ಮೆಂಟ್‍ನ ನಿಕಯತಕಾಲಿಕೆಯಲ್ಲಿ ಸಂಪಾದಕ ಸಹ ಆಗಿದ್ದ. ಇದರಲ್ಲಿ ಹನೀಫ್ ಹುದೈ ಎಂಬ ಹೆಸರಿನಲ್ಲಿ ಬರೆಯುತ್ತಿದ್ದ. ಈ ಹೆಸರೇ ಈತನನ್ನು ಗುರುತಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ ಎಂದು ತಿಳಿದು ಬಂದಿದೆ. ಈತನನ್ನು 2002ರಲ್ಲಿ ಉಗ್ರ ಎಂದು ಘೋಷಿಸಲಾಗಿತ್ತು.
Advertisement
ಆರೋಪಿ ವಿರುದ್ಧ 2001 ರಲ್ಲಿ ದೆಹಲಿಯ ನ್ಯೂ ಫ್ರೆಂಡ್ಸ್ ಕಾಲೋನಿ ಪೊಲೀಸ್ ಠಾಣೆಯಲ್ಲಿ ದೇಶದ್ರೋಹದ ಆರೋಪ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಇಷ್ಟಾದರೂ ಆತನ ಗುರುತು ಪತ್ತೆ ಹಚ್ಚಲು ಪೊಲೀಸರಿಗೆ ಸಾಧ್ಯವಾಗಿರಲಿಲ್ಲ. ಪೊಲೀಸರಿಗೆ ಏಕೈಕ ಸುಳಿವು ಎಂದರೆ ಪತ್ರಿಕೆಯಲ್ಲಿ ಮುದ್ರಿಸಲಾದ `ಹನೀಫ್ ಹುದೈ’ ಎಂಬ ಹೆಸರು ಎಂದು ತಿಳಿದು ಬಂದಿದೆ.
Advertisement
Advertisement
ಬಂಧಿತ ಹನೀಫ್ ಶೇಖ್ ಮಹಾರಾಷ್ಟ್ರ, ಮಧ್ಯಪ್ರದೇಶ, ದೆಹಲಿ, ಕರ್ನಾಟಕ ಮತ್ತು ಕೇರಳದಲ್ಲಿ ಸಿಮಿ ಸಭೆಗಳಲ್ಲಿ ಪಾಲ್ಗೊಂಡಿದ್ದ. ಶೇಖ್ ನನ್ನು ಬಂಧಿಸಲು ದೆಹಲಿ ಪೊಲೀಸರು ವಿವಿಧ ರಾಜ್ಯಗಳಿಂದ ಆತನ ಬಗ್ಗೆ ಮಾಹಿತಿ ಸಂಗ್ರಹಿಸಲು ಆರಂಭಿಸಿದ್ದರು. ಶೇಖ್ ಮತ್ತು ಆತನ ಸಹಚರರನ್ನು ಪತ್ತೆಹಚ್ಚಲು ಪೊಲೀಸರ ತಂಡ ಮಾಹಿತಿದಾರರನ್ನು ಏಳು ರಾಜ್ಯಗಳಲ್ಲಿ ನಿಯೋಜಿಸಿತ್ತು.
Advertisement
ಶೇಖ್ ತನ್ನ ಗುರುತನ್ನು ಬದಲಾಯಿಸಿಕೊಂಡು ಮಹಾರಾಷ್ಟ್ರದ (Maharashtra) ಭುಸಾವಾಲ್‍ನಲ್ಲಿರುವ ಉರ್ದು ಶಾಲೆಯಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ಮಾಹಿತಿದಾರರೊಬ್ಬರು ಪೊಲೀಸರಿಗೆ ತಿಳಿಸಿದ್ದರು. ಬಳಿಕ ಆತನನನ್ನು ಪೊಲೀಸರು ಗುರುತಿಸಿದ್ದಾರೆ. ಬಂಧನದ ವೇಳೆ ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದ, ಆದರೆ ಆತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.