ಬೆಳಗಾವಿ: ಉಕ್ರೇನಿನಲ್ಲಿರುವ ವಿದ್ಯಾರ್ಥಿಗಳನ್ನು ದೇಶಕ್ಕೆ ಕರೆತರಲು ಸರ್ವಪ್ರಯತ್ನ ಮಾಡಲಾಗುತ್ತಿದೆ ಎಂದು ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.
Advertisement
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಕ್ರೇನ್‍ನಲ್ಲಿರುವ ವಿದ್ಯಾರ್ಥಿಗಳನ್ನ ಸುರಕ್ಷಿತವಾಗಿ ಕರೆಸುವ ಪ್ರಯತ್ನ ಸರ್ಕಾರ ಮಾಡ್ತಿದೆ. ಬೆಳಗಾವಿ ಇಬ್ಬರು, ವಿಜಯಪುರದ ಒಬ್ಬ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿದ್ದಾರೆ. ಸರ್ಕಾರ ಹೆಚ್ಚಿನ ಪ್ರಯತ್ನ ಮಾಡಿ ವಿದ್ಯಾರ್ಥಿಗಳನ್ನ ಮರಳಿ ಸುರಕ್ಷಿತವಾಗಿ ಕರೆತಲಾಗುತ್ತದೆ ಎಂದರು. ಇದನ್ನೂ ಓದಿ: ಉಕ್ರೇನ್‍ನಲ್ಲಿ ಸಿಲುಕಿದ್ದಾರೆ 10 ಮಂದಿ ಕರ್ನಾಟಕ ವಿದ್ಯಾರ್ಥಿಗಳು!
Advertisement
Advertisement
ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಬಗ್ಗೆ ಸಿಎಂ ಬೊಮ್ಮಾಯಿ ಗಮನಕ್ಕೆ ತರಲಾಗಿದೆ. ಈಗಾಗಲೇ ಎಲ್ಲ ಜಿಲ್ಲಾಧಿಕಾರಿ ಸೂಚನೆ ಕೊಡಲಾಗಿದ್ದು, ವಿದ್ಯಾರ್ಥಿಗಳ ನೆರವಿಗೆ ಧಾವಿಸುವಂತೆ ತಿಳಿಸಲಾಗಿದೆ. ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳು ಪೋಷಕರ ಜೊತೆಗೆ ಸಂಪರ್ಕದಲ್ಲಿ ಇದ್ದಾರೆ. ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು ಮಾಹಿತಿ ನೀಡಿದರು.