ಗಾಂಧಿನಗರ: ಹುಟ್ಟಿದ ಎರಡೇ ಗಂಟೆಯ ಅವಧಿಯಲ್ಲಿ ಗುಜರಾತ್ ದಂಪತಿ ತಮ್ಮ ಹೆಣ್ಣುಮಗುವಿನ ಹೆಸರನ್ನು ಎಲ್ಲಾ ಅಧಿಕೃತ ದಾಖಲೆಗಳಿಗೆ ನೊಂದಣಿ ಮಾಡಿಸಿ ದಾಖಲೆ ನಿರ್ಮಿಸಿದ್ದಾರೆ.
ಹುಟ್ಟಿದ ಎರಡೇ ಗಂಟೆಯಲ್ಲಿ ಎಲ್ಲಾ ಅಧಿಕೃತ ದಾಖಲೆಗಳಿಗೆ ನೊಂದಣಿಯಾಗಿರುವ ಭಾರತದ ಮೊದಲ ಮಗು ಎಂಬ ಹೆಗ್ಗಳಿಕೆಗೆ ಈಗ ಈ ಮಗು ಪಾತ್ರವಾಗಿದೆ.
Advertisement
ಅಂಕಿತ್ ನಾಗರಾಣಿ ಹಾಗೂ ತಾಯಿ ಭೂಮಿ ನಾಗರಾಣಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿ. ಹೀಗಾಗಿ ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಅಭಿಯಾನದಲ್ಲಿ ತಮ್ಮ ಮಗುವಿನ ಹೆಸರನ್ನು ನೊಂದಣಿ ಮಾಡಿಸಲು ಕಾತುರದಿಂದ ಕಾಯುತ್ತಿದ್ದರು. ಅಲ್ಲದೆ ಅವರ ಮಗಳು ಹುಟ್ಟಿದ ಸ್ಥಳದಲ್ಲೇ ಎಲ್ಲಾ ಅಧಿಕೃತ ದಾಖಲೆಗಳನ್ನು ಹೊಂದಿರುವ ಮೊದಲ ಮಗು ಎಂಬ ಹೆಗ್ಗಳಿಕೆ ಪಡೆಯಬೇಕು ಎಂದು ಅಂಕಿತ್ ಕನಸು ಕಂಡಿದ್ದರು.
Advertisement
ಆದರಿಂದ ಮಗು ಹುಟ್ಟುವ ಮೊದಲೇ ದಾಖಲೆಗಳಿಗೆ ನೊಂದಣಿಯಾಗಲು ಫಾರಂಗಳನ್ನು ತುಂಬಿಸಿಟ್ಟಿದ್ದರು. ಡಿಸೆಂಬರ್ 12 ರಂದು ಮಗಳು ಜನಿಸಿದ ಎರಡೇ ಗಂಟೆಯಲ್ಲಿ ಯಶಸ್ವಿಯಾಗಿ ಆಧಾರ್, ರೇಶನ್ ಕಾರ್ಡ್ ಹಾಗೂ ಪಾಸ್ರ್ಪೋಟ್ ಸೇರಿದಂತೆ ಎಲ್ಲಾ ದಾಖಲೆಗಳಿಗೆ ಮಗುವಿನ ಹೆಸರಾದ ರಮಿಯಾಳನ್ನು ನೊಂದಣಿ ಮಾಡಿಸಿ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ.
Advertisement
ಈ ಹಿಂದೆ ಎಪ್ರೀಲ್ನಲ್ಲಿ ಮಹಾರಾಷ್ಟ್ರದಲ್ಲಿ ಹುಟ್ಟಿದ 1.48 ನಿಮಿಷದಲ್ಲೇ ಹೆಣ್ಣು ಮಗುವಿನ ಹೆಸರನ್ನು ಪೋಷಕರು ಆಧಾರ್ಗೆ ನೊಂದಣಿ ಮಾಡಿದ್ದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com