ರಾಮನಗರ: ರೈತರಿಗೆ ಏನೂ ಅನುಕೂಲ ಮಾಡದೇ ಮಣ್ಣಿನ ಮಕ್ಕಳು ಅಂತಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಕೇಂದ್ರ ಸಚಿವ ಹೆಚ್ಡಿಕೆ ವಿರುದ್ಧ ವಾಗ್ದಾಳಿ ನಡೆಸಿದರು.
ಮಾಗಡಿ (Magadi) ಪಟ್ಟಣದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಹಾಲಿನ ಬೆಲೆ ಏರಿಕೆ ಸಂಬಂಧಪಟ್ಟಂತೆ ಬಿಜೆಪಿ-ಜೆಡಿಎಸ್ (BJP-JDS) ಆರೋಪಿಸಿರುವ ಕುರಿತು ಮಾತನಾಡಿದರು. ಹಾಲಿಗೆ 5 ರೂ.ಗಳ ಪ್ರೋತ್ಸಾಹಧನ ಘೋಷಿಸಿದ್ದು ನಮ್ಮ ಸರ್ಕಾರ. ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದು ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ. ರೈತರಿಗೆ ಹಣ ಸೇರಬೇಡವೇ? ರೈತರಿಗೆ ಇದನ್ನು ಪ್ರಶ್ನಿಸಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದ್ದಾರೆ.ಇದನ್ನೂ ಓದಿ: ದೆಹಲಿಯಲ್ಲಿ ಮುಂದುವರಿದ ಮಳೆ – ಹಲವು ಪ್ರದೇಶಗಳು ಜಲಾವೃತ
ಕೆಲವರು ಏನೂ ಮಾಡದೇ ರೈತರ ಮಕ್ಕಳು, ಮಣ್ಣಿನ ಮಕ್ಕಳು ಎನ್ನುತ್ತಾರೆ. ದೇಶದ ಸ್ವಾತಂತ್ರ‍್ಯಕ್ಕೆ ದುಡಿದ ನೆಹರೂರವರು ಹಾಗೂ ಇಂದಿರಾಗಾಂಧಿ ಸೇರಿದಂತೆ ಹಲವು ನಾಯಕರು ದೇಶಕ್ಕಾಗಿ ದುಡಿದಿದ್ದಾರೆ. ನರೇಂದ್ರ ಮೋದಿ ಸುಳ್ಳು ಹೇಳುತ್ತಾರೆ ಎಂದು ಈ ಬಾರಿ ಮೋದಿಯವರಿಗೆ ವೋಟು ನೀಡಲಾಗಿದೆಯೇ? ಭಾರತದ ಮೇಲಿನ ಸಾಲ 182 ಲಕ್ಷ ಕೋಟಿಯನ್ನು ಮೀರುತ್ತಿದೆ ಎಂದು ಟೀಕಿಸಿದ್ದಾರೆ.
ಹಿಂದೆ ಸಾಲದ ಮೊತ್ತ 53.11 ಲಕ್ಷ ಕೋಟಿ ರೂ.ಯಿದ್ದದ್ದು ಈಗ ಕಳೆದ 10 ವರ್ಷದಲ್ಲಿ 182 ಲಕ್ಷ ಕೋಟಿ ರೂ.ಗೆ ತಲುಪಿದೆ. ಗರೀಬಿ ಹಠಾವೋ, ಆಹಾರ ಸ್ವಾವಲಂಬನೆಯಂತ ಜನಪರ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪಕ್ಷ ದೇಶಕ್ಕೆ ಕೊಟ್ಟಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರ ಅನುದಾನವನ್ನು ಬೇರೆಯವರಿಗೆ ನೀಡಲಾಗಿದೆ ಎಂದು ಸುಳ್ಳು ಅರೋಪ ಮಾಡಲಾಗುತ್ತಿದೆ. ಆದರೆ 89.62 ಕೋಟಿ ರೂ. ಮೊತ್ತದ ಅವ್ಯವಹಾರವಾಗಿದ್ದು, ಅದರಲ್ಲಿ 56 ಕೋಟಿ ರೂ. ವಸೂಲು ಮಾಡಲಾಗಿದೆ. ಆದರೂ ಅಭಿವೃದ್ಧಿ ನಿಗಮಕ್ಕೆ ಈ ಮುಂಚೆ ನಿಗದಿಪಡಿಸಿರುವಂತೆ ಅನುದಾನವನ್ನು ನೀಡಿ, ಸಮುದಾಯದ ಅಭಿವೃದ್ಧಿಗೆ ಬಳಸಲಾಗುವುದು. ಎಸ್‌ಸಿ ಎಸ್‌ಪಿ/ಟಿಎಸ್‌ಪಿ ಕಾನೂನನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ. ಈ ರೀತಿಯ ಜನಪರ ಕಾನೂನು ಬಿಜೆಪಿ ಆಡಳಿತದಲ್ಲಿರುವ ಯಾವುದೇ ರಾಜ್ಯದಲ್ಲಿ ಜಾರಿಯಾಗಿಲ್ಲ. ಬಿಜೆಪಿಯವರಿಗೆ ಕಾಂಗ್ರೆಸ್ ಸರ್ಕಾರವನ್ನು ಮೂದಲಿಸಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.ಇದನ್ನೂ ಓದಿ: ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯನ ಖಾಸಗಿ ಅಂಗಕ್ಕೆ ಬ್ಲೇಡ್ ಹಾಕಿ ಪಾರಾದ ನರ್ಸ್!