ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್‌ಗೆ (Darshan) ಸಂಕಷ್ಟ ಎದುರಾಗುವ ಕಾಲ ಸನ್ನಿಹಿತವಾದಂತಿದೆ. ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ನುಡಿಯಲು ಕೋರ್ಟ್ ಕೊನೆಗೂ ಮುಹೂರ್ತ ಫಿಕ್ಸ್ ಮಾಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಸಾಕ್ಷ್ಯ ನೀಡುವಂತೆ 59ನೇ ಸಿಸಿಹೆಚ್ ಕೋರ್ಟ್ ಪ್ರದೋಷ್‌ಗೆ ವಿಟ್ನೆಸ್ ಸಮನ್ಸ್ ಜಾರಿಗೊಳಿಸಿದೆ. ಇದನ್ನೂ ಓದಿ: ದರ್ಶನ್‌ಗೆ ಅತಿದೊಡ್ಡ ಸಂಕಷ್ಟ; ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ
ಪ್ರಕರಣದ ವಿಚಾರಣೆ ವೇಳೆ ವಿಶೇಷ ಸರ್ಕಾರಿ ಅಭಿಯೋಜಕ (SPP) ಪ್ರಸನ್ನ ಕುಮಾರ್, ಪ್ರದೋಷ್‌ಗೆ ವಿಟ್ನೆಸ್ ಸಮನ್ಸ್ ಜಾರಿಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಮನವಿಯನ್ನ ಪರಿಗಣಿಸಿದ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಲು ಆದೇಶಿಸಿದೆ.

ಪ್ರದೋಷ್‌ಗೆ ಸಮನ್ಸ್ ಜಾರಿಗೊಳಿಸಿ, ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಜೈಲು ಅಧಿಕಾರಿಗಳಿಗೆ 59ನೇ ಸಿಸಿಹೆಚ್ ನ್ಯಾಯಾಲಯ ಸೂಚನೆ ನೀಡಿದೆ. 59ನೇ ಸಿಸಿಹೆಚ್ ನ್ಯಾಯಾಧೀಶೆ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ಈ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಆದೇಶ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿಯನ್ನ ಕೋರ್ಟ್ ಇತ್ತೀಚೆಗಷ್ಟೇ ಅಂಗೀಕರಿಸಿತು. ಪ್ರದೋಷ್ ಮಾಫಿ ಸಾಕ್ಷಿಗೆ ಒಪ್ಪಿಗೆ ನೀಡಿ ಸಿಸಿಹೆಚ್ 42 ಕೋರ್ಟ್ ನ್ಯಾಯಾಧೀಶರು ಆದೇಶ ಹೊರಿಡಿಸಿದ್ರು. ಗೊತ್ತಿರುವ ಎಲ್ಲಾ ಸತ್ಯವನ್ನು ಕೋರ್ಟ್ ಮುಂದೆ ಹೇಳಬೇಕು. ಸುಳ್ಳು ನುಡಿದರೆ ಪ್ರಾಸಿಕ್ಯೂಷನ್ ತೀರ್ಮಾನ ತೆಗೆದುಕೊಳ್ಳುವ ಅವಕಾಶ ಇದೆ.
ಪ್ರಕರಣದ 14ನೇ ಆರೋಪಿಯಾಗಿದ್ದ ಪ್ರದೋಷ್ ಅಪ್ರೂವರ್ ಆಗಿ ಸಾಕ್ಷಿಯಾದ ಹಿನ್ನೆಲೆ ಪ್ರಕರಣದ ಉಳಿದ 16 ಮಂದಿಗೆ ಸಂಕಷ್ಟ ಎದುರಾಗಿದೆ. ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ಪ್ರದೋಷ್ ಸಾಕ್ಷ್ಯ ನುಡಿಯಲಿದ್ದಾರೆ.
