ರಾಂಚಿ: ಮಾಟಗಾತಿ ಎಂದು ತಿಳಿದು ಗ್ರಾಮಸ್ಥರು ಮಹಿಳೆಯ ಬಟ್ಟೆ ಬಿಚ್ಚಿಸಿ ಬೆತ್ತಲೆ ಮಾಡಿ ಮೆರವಣಿಗೆ ಮಾಡಿಸಿದ ಅಮಾನವೀಯ ಘಟನೆ ಜಾರ್ಖಂಡ್‍ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದೆ.
50 ವರ್ಷದ ಮಹಿಳೆ ಮಾಟಗಾತಿ ಎಂದು ಆರೋಪಿಸಿ ಮಹೇಶ್ ಲಿತಿ ಗ್ರಾಮದ ನಿವಾಸಿಗಳು ಆಕೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು 7 ಜನರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.
ಸೋನಲಾಲ್ ಕಿಶ್ಕು ಎನ್ನುವರು ಭಾನುವಾರ ಬೆಳಗ್ಗೆ ರಾಜಕೀಯದ ರ್ಯಾಲಿಯಲ್ಲಿ ಭಾಗವಹಿಸಿದ್ದರು. ರ್ಯಾಲಿ ಮುಗಿಸಿ ಹಿಂದಿರುಗುವಾಗ ಸೋನಲಾಲ್ ಬಸ್ಸಿನ ಸೀಟ್‍ನಲ್ಲೇ ಪ್ರಾಣ ಬಿಟ್ಟಿದ್ದಾನೆ. ಸೋನಲಾಲ್ ಕಾಯಿಲೆಯಿಂದ ಮೃತಪಟ್ಟಿದ್ದನು. ಆದರೆ ಆತ ಮಾಟಮಂತ್ರದಿಂದ ಮೃತಪಟ್ಟಿದ್ದಾನೆ. ಮೃತನ ಹಿರಿಯ ಸಹೋದರನ ಪತ್ನಿ ಮಾಟಮಂತ್ರ ಮಾಡಿ ಈ ಕೆಲಸ ಮಾಡಿದ್ದಾಳೆಂದು ಗ್ರಾಮಸ್ಥರು ಆರೋಪಿಸಿ ಆಕೆಯ ಮಗಳು ಹಾಗೂ ಸೊಸೆಯ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಎಸ್‍ಐ ಸಂತೋಷ್ ಕುಮಾರ್ ಹೇಳಿದ್ದಾರೆ.
ಹಲ್ಲೆ ಮಾಡಿದ ಬಳಿಕ ಗ್ರಾಮಸ್ಥರು ಮಹಿಳೆಯನ್ನು ಬೆತ್ತಲೆಗೊಳಿಸಿ ಊರು ತುಂಬಾ ಮೆರವಣಿಗೆ ಮಾಡಿಸಿದ್ದಾರೆ. ಬಳಿಕ ಮಹಿಳೆ ಹಾಗೂ ಆಕೆಯ ಮಗಳನ್ನು ಕೋಣೆಯೊಂದರಲ್ಲಿ ಕೂಡಿ ಹಾಕಿದ್ದಾರೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಿಳೆಯನ್ನು ರಕ್ಷಿಸಿದ್ದಾರೆ. ಈ ಪ್ರಕರಣದ ಬಗ್ಗೆ ಪೊಲೀಸರು ಏಳು ಜನರ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿದ್ದು ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ಆರಂಭಗೊಂಡಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv