ಚಂಡೀಗಢ: ಚಲಿಸುತ್ತಿರುವ ಕಾರಿನಲ್ಲಿ ಮಹಿಳೆ ಮೇಲೆ ಮೂವರು ಕಾಮುಕರು ಗ್ಯಾಂಗ್ ರೇಪ್ ಎಸಗಿ ಕಾರಿನಿಂದ ರಸ್ತೆಗೆಸೆದ ಆರೋಪವೊಂದು ಕೇಳಿಬಂದಿದೆ.
ಈ ಘಟನೆ ಉತ್ತರಪ್ರದೇಶದ ನೊಯ್ಡಾದಲ್ಲಿ ಸೋಮವಾರ ರಾತ್ರಿ ನಡೆದಿದೆ. ಮಹಿಳೆ ಮೂಲತಃ ರಾಜಸ್ತಾನದ ಭರತ್‍ಪುರದವರಾಗಿದ್ದು, ಸಂಬಂಧಿಕರ ಮನೆಗೆ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
Advertisement
ಏನಿದು ಪ್ರಕರಣ?: ರಾಜಸ್ಥಾನ ಮೂಲದ ಮಹಿಳೆ ಉತ್ತರಪ್ರದೇಶದ ಸೋಹ್ನಾ ಪ್ರದೇಶದಲ್ಲಿರುವ ತನ್ನ ಸಂಬಂಧಿಕ ಮನೆಗೆ ಕಳೆದ ವಾರ ಬಂದಿದ್ದರು. ಅಂತೆಯೇ ಮಹಿಳೆ ಕಳೆದ ರಾತ್ರಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಸುಮಾರು 8.30ರ ವೇಳೆಗೆ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಬಂದ ಕಾಮುಕರು ಚಲಿಸುತ್ತಿದ್ದ ಕಾರಿನಲ್ಲೇ ಗ್ಯಾಂಗ್ ರೇಪ್ ಎಸಗಿದ್ದಾರೆ. ಬಳಿಕ ನೊಯ್ಡಾ ಬಳಿ ಕಾರಿನಿಂದ ರಸ್ತೆಗೆಸೆದು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.
Advertisement
Advertisement
ಮಹಿಳೆ ರಸ್ತೆ ಬದಿಯಲ್ಲಿ ಬಿದ್ದಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲದೇ ಸ್ಥಳೀಯ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಆದ್ರೆ ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.
Advertisement
ಪ್ರಕರಣ ಸಂಬಂಧ ಯುವತಿಯ ವೈದ್ಯಕೀಯ ಪರೀಕ್ಷೆ ಈಗಾಗಲೇ ನಡೆದಿದ್ದು, ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ವರದಿ ಪೊಲಿಸರ ಕೈ ಸೇರಿದ ಬಳಿಕ ಆರೋಪಿಗಳ ಪತ್ತೆಗೆ ಬಲೆ ಬೀಸಲಿದ್ದಾರೆ ಎಂದು ವರದಿಯಾಗಿದೆ.
ಚಲಿಸುತ್ತಿರುವ ಕಾರಿನಲ್ಲಿ ಗ್ಯಾಂಗ್ ರೇಪ್ ಮಾಡಿರುವುದು ಇದು ಮೊದಲ ಬಾರಿಯೇನಲ್ಲ. ಕಳೆದ ತಿಂಗಳು ತಾಯಿ ಮತ್ತು ಮಗಳು ಮನೆಗೆ ಆಟೋ ರಿಕ್ಷಾದಲ್ಲಿ ಮನೆಗೆ ತೆರಳುತ್ತಿದ್ದರು. ಮೂರು ಜನ ಕಾಮುಕರು ರಿಕ್ಷಾವನ್ನು ತಡೆದು ಮಗುವನ್ನು ಹೊರಗೆ ಎಸೆದು ಮಹಿಳೆಯ ಮೇಲೆ ಗ್ಯಾಂಗ್ ರೇಪ್ ನಡೆಸಲಾಗಿತ್ತು. ಹಾಗೂ ಕೆಲ ದಿನಗಳ ಹಿಂದೆ ಗುರ್‍ಗಾಂವ್‍ನಲ್ಲಿ 22 ವರ್ಷದ ಯುವತಿಯನ್ನು ಚಲಿಸುತ್ತಿರುವ ಕಾರಿನಲ್ಲಿ ಅತ್ಯಾಚಾರ ಮಾಡಿ ಮನೆಯ ಎದುರು ಎಸೆದು ಹೋಗಿರುವ ಘಟನೆ ನಡೆದಿತ್ತು.