ಚಿಕ್ಕಮಗಳೂರು: ಹೊಸ ವರ್ಷದಂದು ಮನೆಗೆ ನುಗ್ಗಿ ದಲಿತ ಮಹಿಳೆಯ ಮೇಲೆ ಬಿಜೆಪಿ ಕಾರ್ಯಕರ್ತನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ವಿದ್ಯಾರಣ್ಯಪುರ ಗ್ರಾಮದಲ್ಲಿ ನಡೆದಿದೆ.
Advertisement
ಬಿಜಿಪಿ ಕಾರ್ಯಕರ್ತ, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ನರೇಂದ್ರ ಹೆಗ್ಗಡೆ ವಿರುದ್ಧ ದಲಿತ ಮಹಿಳೆ ದೂರು ನೀಡಿದ್ದು, ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಪ್ರಕರಣ ಡಿಸೆಂಬರ್ 31 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
Advertisement
Advertisement
ನರೇಂದ್ರ ಹೆಗ್ಗಡೆ ವಿದ್ಯಾರಣ್ಯಪುರ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷನಾಗಿದ್ದು, ಶೃಂಗೇರಿ ಕ್ಷೇತ್ರದಲ್ಲಿ ಸಕ್ರೀಯವಾಗಿ ಬಿಜೆಪಿ ಕಾರ್ಯಕರ್ತನಾಗಿದ್ದನು. ಡಿಸೆಂಬರ್ 31ರಂದು ನಾನು ಒಬ್ಬಳೇ ಇರುವುದನ್ನು ತಿಳಿದುಕೊಂಡು ಮನೆಗೆ ನುಗ್ಗಿ ಕುಡಿದ ಮತ್ತಿನಲ್ಲಿ ಏಕಾಏಕಿ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ಮಂಗಳವಾರ ಶೃಂಗೇರಿ ಪೊಲೀಸರಿಗೆ ಲಿಖಿತ ದೂರು ನೀಡಿದ್ದಾರೆ.
Advertisement
ಶೃಂಗೇರಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ನರೇಂದ್ರ ಹೆಗ್ಗಡೆ ನಾಪತ್ತೆಯಾಗಿದ್ದು, ಪೊಲೀಸರು ಆತನಿಗಾಗಿ ಶೋಧ ನಡೆಸುತ್ತಿದ್ದಾರೆ.