Connect with us

Dharwad

ಪ್ರಿಯಕರನೊಂದಿಗೆ ಸೇರಿ ಪತಿಯನ್ನೆ ಕೊಂದ ಪತ್ನಿ!

Published

on

ಧಾರವಾಡ: ಪ್ರಿಯಕರನೊಂದಿಗೆ ಸೇರಿ ಪತಿಯನ್ನೆ ಕೊಂದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕಲಘಟಗಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ತುಳಸಾ ಅಜ್ಜಪ್ಪ ಕನಕಾತ್ರಿ(28) ಹಾಗೂ ಆಕೆಯ ಪ್ರಿಯಕರ ಯಲ್ಲಪ್ಪ(32) ಬಂಧಿತ ಆರೋಪಿಗಳು. ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಗಂಡನನ್ನೇ ಪತ್ನಿ ತುಳಸಾ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಸೆಪ್ಟೆಂಬರ್ 29ರಂದು ತುಳಸಾ ತನ್ನ ಪ್ರಿಯಕರನ ಜೊತೆ ಸೇರಿ ಪತಿ ಅಜ್ಜಪ್ಪನ್ನ ಉಸಿರುಗಟ್ಟಿಸಿ ಕೊಲೆ ಮಾಡಿ ನೇಣು ಹಾಕಿದ್ದಳು. ಬಳಿಕ ಕಲಘಟಗಿ ಪೊಲೀಸ್ ಠಾಣೆಯಲ್ಲಿ ತನ್ನ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ದೂರು ದಾಖಲಿಸಿದ್ದಳು.

ಈ ಕುರಿತು ಪೊಲೀಸರು ತನಿಖೆ ನಡೆಸಿದ ವೇಳೆ ಹೆಂಡತಿಯೇ ಗಂಡನನ್ನ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ್ದಕೆ ಪತ್ನಿ ತುಳಸಾ ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.

Click to comment

Leave a Reply

Your email address will not be published. Required fields are marked *

www.publictv.in