Tuesday, 23rd July 2019

ವಿವಾಹಿತ ಮಹಿಳೆ, ಯುವಕನ ಮೃತದೇಹ ಪತ್ತೆ – ಪತಿ ಪೊಲೀಸರ ವಶಕ್ಕೆ

ಭುವನೇಶ್ವರ: ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ವಿವಾಹಿತ ಮಹಿಳೆ ಮತ್ತು ಯುವಕನ ಮೃತದೇಹ ಪತ್ತೆಯಾಗಿದ್ದು, ಅನೈತಿಕ ಸಂಬಂಧಕ್ಕೆ ಕೊಲೆಯಾಗಿರಬೇಕು ಎಂದು ಪೊಲೀಸರು ಶಂಕಿಸಿದ್ದಾರೆ.

ಈ ಘಟನೆ ರಾಣಿಪಟ್ನಾ ಬ್ಯಾಂಕ್ ಕಾಲೋನಿಯಲ್ಲಿ ನಡೆದಿದ್ದು, ಮನೆಯೊಳಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಸ್ಥಿತಿಯಲ್ಲಿ ಮಹಿಳೆ ಮತ್ತು ಯುವಕನ ಮೃತದೇಹ ಕಂಡು ಬಂದಿದೆ. ತಕ್ಷಣ ಈ ಬಗ್ಗೆ ಸ್ಥಳಿಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಮಾಹಿತಿ ತಿಳಿದು ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದು, ಮೃತ ಮಹಿಳಾ ಪತಿ ಕೈಲಾಶ್ ಸಾಹುನನ್ನು ವಶಕ್ಕೆ ಪಡೆದುಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಘಟನೆಯ ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಕೈಲಾಶ್ ಇಬ್ಬರನ್ನು ಕೊಂದಿರಬಹುದು ಎಂದು ಶಂಕಿಸಲಾಗಿದೆ. ಸದ್ಯಕ್ಕೆ ಈ ಕುರಿತು ತನಿಖೆ ನಡೆಯುತ್ತಿದೆ. ಹೆಚ್ಚಿನ ವಿವರಗಳಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply

Your email address will not be published. Required fields are marked *