ಬೆಂಗಳೂರು: ಕುಡಿದ ನಶೆಯಲ್ಲಿ ಕ್ಲುಲ್ಲಕ ಕಾರಣಕ್ಕೆ ಮಹಿಳೆ ಮತ್ತ ಯುವತಿಯನ್ನು ಎಳೆದಾಡಿ ಪುಂಡರು ಹಲ್ಲೆ ನಡೆಸಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ನಡೆದಿದೆ.
ತಲಗಟ್ಟಪುರ ಠಾಣಾ ವ್ಯಾಪ್ತಿಯ ಆವಲಹಳ್ಳಿಯಲ್ಲಿ ಭಾನುವಾರ ಸಂಜೆ 6 ಗಂಟೆ ವೇಳೆಗೆ ಘಟನೆ ನಡೆದಿದೆ. ಬಾಲಾಜಿ ಮತ್ತು ಯೋಗಿ ಮತ್ತು ಮೂವರ ಗ್ಯಾಂಗ್ ನಿಂದ ಈ ಕೃತ್ಯ ಎಸೆಯಲಾಗಿದೆ. ಇದನ್ನೂ ಓದಿ: ಇಂದು ಪ್ರಜ್ವಲ್ ರೇವಣ್ಣ ಎಸ್‍ಐಟಿ ಕಸ್ಟಡಿ ಅಂತ್ಯ
ಮಹಿಳೆ ಮತ್ತು ಯುವತಿ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿದ್ದಲ್ಲದೇ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ. ಬಳಿಕ ನೆರೆಹೊರೆಯವರ ಸಹಾಯದಿಂದ ಯುವತಿ ಮತ್ತು ಮಹಿಳೆ ಕೂದಲೆಳೆ ಅಂತರದಲ್ಲಿ ಬಚಾವಾಗಿದ್ದಾರೆ.
ರಸ್ತೆಯಲ್ಲಿ ಮಗ ಮಕ್ಕಳೊಂದಿಗೆ ಆಟವಾಡಿದ್ದನು. ಈ ವೇಳೆ ಮನೆ ಬಳಿ ಬಂದ ಗ್ಯಾಂಗ್ ನಿಂದಿಸಿದೆ. ಇದನ್ನು ಪ್ರಶ್ನಿಸಿದ್ದಕ್ಕೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಪುಂಡರು ಯುವತಿಯ ಕೂದಲು ಹಿಡಿದೆಳೆದು ಅಟ್ಟಾಡಿಸುವ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್‍ಗಳಲ್ಲಿ ಸೆರೆಹಿಡಿದಿದ್ದಾರೆ.
ಸದ್ಯ ಆರೋಪಿಗಳಾದ ಬಾಲಾಜಿ ಮತ್ತು ಯೋಗಿ ಇತರರ ವಿರುದ್ಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದು, ಐಪಿಸಿ ಸೆಕ್ಷನ್ 506 (ಬೆದರಿಕೆ), 34, 504 (ಶಾಂತಿ ಕದಡುವ ಪ್ರಯತ್ನ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 354 (ಮಹಿಳೆಯ ಮೇಲೆ ದೌರ್ಜನ್ಯ) ಅಡಿ ಕೇಸ್ ದಾಖಲಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.