ಮುಂಬೈ: ಅನಾರೋಗ್ಯದಿಂದ ಬಳಲುತ್ತಿದ್ದ 20 ದಿನದ ಹೆಣ್ಣು ಮಗುವನ್ನು ತಾಯಿಯೇ ಕೊಂದಿರುವ ಘಟನೆ ಮಹಾರಾಷ್ಟ್ರದ (Maharashtra) ಅಕೋಲಾ (Akola) ಜಿಲ್ಲೆಯಲ್ಲಿ ನಡೆದಿದೆ.
ವಾಡಿ ಆದಂಪುರ (Wadi Adampur) ಗ್ರಾಮದ ನಿವಾಸಿಯಾಗಿರುವ 26 ವರ್ಷದ ಮಹಿಳೆ ತನ್ನ ಚಿಕ್ಕಪ್ಪನೊಂದಿಗೆ ಕಳೆದ ತಿಂಗಳು ಮಗುವನ್ನು ಚಿಕಿತ್ಸೆಗಾಗಿ ತೆಲ್ಹಾರ ಗ್ರಾಮೀಣ ಆಸ್ಪತ್ರೆಗೆ ಕರೆದೊಯ್ದಿದ್ದರು. ನಂತರ ಮಗುವಿನ ಆರೋಗ್ಯ ತಪಾಸಣೆ ನಡೆಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಅಕೋಲಾದ ಜಿಲ್ಲಾ ಜನರಲ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆದರೆ ಜಿಲ್ಲಾಸ್ಪತ್ರೆಯಲ್ಲಿ ಮಗು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಹೆಣ್ಣುಮಕ್ಕಳು ಸ್ವಾಮಿಗಳ ಬಳಿ ಹೋಗಲಾರದಂತ ಸ್ಥಿತಿ ನಿರ್ಮಾಣ: ಶಾಮನೂರು ಶಿವಶಂಕರಪ್ಪ
Advertisement
Advertisement
ನಂತರ ಮರಣೋತ್ತರ ಪರೀಕ್ಷೆ ವೇಳೆ ನವಜಾತ ಶಿಶುವನ್ನು ಕತ್ತು ಹಿಸುಕಿ ಸಾಯಿಸಿರುವ ವಿಚಾರ ಬೆಳಕಿಗೆ ಬಂದಿದ್ದು, ವಿಚಾರಣೆ ವೇಳೆ ತಾಯಿಯೇ ಮಗುವನ್ನು ಕೊಂದಿದ್ದಾಳೆ ಎಂದು ತಿಳಿದುಬಂದಿದೆ. ಆದರೆ ಹತ್ಯೆಗೈಯ್ಯಲು ಕಾರಣವೇನೆಂಬುವುದು ಸದ್ಯಕ್ಕೆ ತಿಳಿದುಬಂದಿಲ್ಲ. ಇದೀಗ ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Advertisement
Advertisement
ಮಂಗಳವಾರ ಮಹಿಳೆಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆಕೆಯನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಸಹಾಯಕ ಪೊಲೀಸ್ ಇನ್ಸ್‍ಪೆಕ್ಟರ್ ದ್ಯಾನೋಬಾ ಫಾಡ್ ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್-ಕಿವೀಸ್ ಸೆಮಿಫೈನಲ್ – T20 ವಿಶ್ವಕಪ್ ಕ್ರಿಕೆಟ್‌ನಲ್ಲಿಂದು ಬಿಗ್ ಫೈಟ್