ಡಿಸ್ಪೂರ್: ಬಾಂಗ್ಲಾ ಮೂಲದ ಉಗ್ರ ಸಂಘಟನೆ ‘ಅನ್ಸಾರುಲ್ ಇಸ್ಲಾಂ’ ಜೊತೆ ಸಂಪರ್ಕ ಹೊಂದಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಜಹೂರಾ ಖಾತುನ್ ಅವರ ಪತಿ ಅಬು ತಲ್ಲಾಹ್ ನನ್ನು ಕೂಡ ನೇರಲಾಗ ಭಾಗ ಗ್ರಾಮದಿಂದ ಬಂಧಿಸಿಲಾಗಿದೆ. ಆರೋಪಿಗಳು ಅನ್ಸಾರುಲ್ ಇಸ್ಲಾಂನೊಂದಿಗೆ ಸಂಬಂಧ ಹೊಂದಿರುವವರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಲಾಸಿಪಾರಾ ಉಪವಿಭಾಗದ ಪೊಲೀಸ್ ಅಧಿಕಾರಿ ಬಿರಿಂಚಿ ಬೋರಾ ತಿಳಿಸಿದ್ದಾರೆ. ಇದನ್ನೂ ಓದಿ: ಜೆಡಿಯು, ಬಿಜೆಪಿಯಲ್ಲಿ ಭಿನ್ನಮತ – ಮೈತ್ರಿ ಸರ್ಕಾರ ಉರುಳುವ ಸಾಧ್ಯತೆ
Advertisement
Advertisement
ಮಹಿಳೆ ಬಳಿಯಿದ್ದ ಎರಡು ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವುಗಳಲ್ಲಿ ಒಂದನ್ನು ಸುಟ್ಟುಹಾಕಲಾಗಿದೆ. ನಾವು ಸುಟ್ಟ ಫೋನ್‍ನಿಂದ ಡೇಟಾವನ್ನು ಹಿಂಪಡೆಯಲು ಪ್ರಯತ್ನಿಸುತ್ತಿದ್ದೇವೆ. ಸದ್ಯಕ್ಕೆ ನಾವು ಆಕೆಯ ವಿಚಾರಣೆ ನಡೆಸುತ್ತಿದ್ದೇವೆ ಮತ್ತು ಆಕೆ ಫೋನ್ ಮೂಲಕ ಉಗ್ರ ಸಂಘಟನೆ ‘ಅನ್ಸಾರುಲ್ ಇಸ್ಲಾಂ’ ಜೊತೆ ಸಂಪರ್ಕ ಹೊಂದಿದ್ದಳು ಎಂಬುವುದಕ್ಕೆ ಸಾಕಷ್ಟು ಪುರಾವೆಗಳನ್ನು ಸಂಗ್ರಹಿಸಿದ್ದೇವೆ ಎಂದಿದ್ದಾರೆ.
Advertisement
ಜಹೂರಾ ಖಾತುನ್ ಅನ್ನು ಭಾನುವಾರ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಆಕೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೇವು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗ್ರಾಮಕ್ಕೆ ರಸ್ತೆ, ವಿದ್ಯುತ್ ಸಂಪರ್ಕ ಕಲ್ಪಿಸಿ – ಡಿಸಿಗೆ ಮನವಿ ಮಾಡಿದ ಪುಟ್ಟ ಬಾಲಕಿ
Advertisement
ಕಳೆದ ಐದು ತಿಂಗಳಲ್ಲಿ ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಐದು ಘಟಕಗಳನ್ನು ಭೇದಿಸಿದ ನಂತರ ಅಸ್ಸಾಂ ಜಿಹಾದಿ ಚಟುವಟಿಕೆಗಳ ಕೇಂದ್ರವಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಇತ್ತೀಚೆಗೆ ಹೇಳಿದ್ದಾರೆ.