ಹೈದರಾಬಾದ್: ಊಟದ ವೇಳೆ ಬೇಯಿಸಿದ ಮೊಟ್ಟೆ ತಿನ್ನುವಾಗ ಗಂಟಲಿನಲ್ಲಿ ಸಿಲುಕಿಕೊಂಡು ಉಸಿರುಗಟ್ಟಿ ಮಹಿಳೆ ಮೃತಪಟ್ಟಿರುವ ಘಟನೆ ತೆಲಂಗಾಣದ ನೇರಳಪಲ್ಲಿಯಲ್ಲಿ ನಡೆದಿದೆ.
Advertisement
ನೀಲಮ್ಮ ಮೃತಳು. ಬೇಯಿಸಿದ ಮೊಟ್ಟೆಯನ್ನು ತಿನ್ನಲು ಹೋಗಿ ಅದು ಗಂಟಲಿನಲ್ಲಿ ಸಿಲುಕಿ ಈಕೆ ಸಾವನ್ನಪ್ಪಿದ್ದಾಳೆ. ಒಂದು ಮೊಟ್ಟೆ ಮಹಿಳೆಯ ಜೀವವನ್ನು ತೆಗೆದಿದೆ. ಇದನ್ನೂ ಓದಿ: ಸೋನಿಯಾ ಗಾಂಧಿ ನಾಯಕತ್ವದಲ್ಲಿ ಸಂಪೂರ್ಣ ನಂಬಿಕೆ ಇದೆ: ಸಿಧು
Advertisement
Advertisement
ನೀಲಮ್ಮ ಊಟ ಮಾಡುತ್ತಿದ್ದಳು. ಈ ವೇಳೆ ಬೇಯಿಸಿದ ಮೊಟ್ಟೆಯನ್ನು ಕತ್ತರಿಸದೇ, ಹಾಗೇ ದೊಡ್ಡ ಮೊಟ್ಟೆಯನ್ನು ಬಾಯಿಯೊಳಗೆ ಹಾಕಿಕೊಂಡಿದ್ದಾಳೆ. ಈ ವೇಳೆ ಮೊಟ್ಟೆ ನೇರವಾಗಿ ಗಂಟಲಿಗೆ ಹೋಗಿದೆ. ಗಂಟಲಲ್ಲಿ ಮೊಟ್ಟೆ ಸಿಲುಕಿಕೊಂಡಿದೆ. ಆಗ ಮೊಟ್ಟೆ ಗಂಟಲಿನಿಂದ ಕೆಳಗೆ ಜಾರದೇ, ಹೊರಗೆ ಬಾರದೇ ನೀಲಮ್ಮನಿಗೆ ಉಸಿರಾಡಲು ಕಷ್ಟವಾಗಿದೆ. ಈ ಪರಿಣಾಮ ಆಕೆ ಸಾವನ್ನಪ್ಪಿದ್ದಾಳೆ. ಕುಟುಂಬಸ್ಥರು ಆಕೆಯ ಸಾವಿನ ಬಳಿಕ ಮೊಟ್ಟೆಯನ್ನು ಕತ್ತರಿಸಿ ತಿಂದಿದ್ದರೆ ಈ ಅನಾಹುತ ಆಗುತ್ತಿರಲಿಲ್ಲ ಎಂದು ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ: ಮತ್ತೆ ಸರ್ಜಿಕಲ್ ಸ್ಟ್ರೈಕ್? – ಪಾಕಿಸ್ತಾನಕ್ಕೆ ಅಮಿತ್ ಶಾ ಎಚ್ಚರಿಕೆ