ಹಾಸನ: ಹೆಲ್ಮೆಟ್ ಧರಿಸದೆ ಬೈಕ್ ಚಾಲನೆ ಮಾಡುತ್ತಿದ್ದ ಮಹಿಳೆಗೆ ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ್ದಾರೆ. ಆದರೆ ಇದರಿಂದ ಕೋಪಗೊಂಡ ಮಹಿಳೆ ಪೊಲೀಸರ ವಿರುದ್ಧವೇ ಗರಂ ಆಗಿ ಪೊಲೀಸ್ ವಾಕಿಟಾಕಿ ಮುರಿದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಹಾಸನದ ಸಾಲಗಾಮೆ ರಸ್ತೆಯಲ್ಲಿ ನಡೆದಿದೆ.
ಸಾಲಗಾಮೆ ರಸ್ತೆಯಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಮಹಿಳೆ ಹೆಲ್ಮೆಟ್ ಧರಿಸದೇ ಬೈಕ್ ಚಾಲನೆ ಮಾಡುತ್ತಾ ಬಂದಿದ್ದಾರೆ. ಟ್ರಾಫಿಕ್ ಪೊಲೀಸರು ಅವರನ್ನು ತಡೆದು ದಂಡ ವಿಧಿಸಿದ್ದಾರೆ. ಆಗ ಮಹಿಳೆ ನಮ್ಮ ಒಬ್ಬರಿಗೆ ಏಕೆ ದಂಡ ಹಾಕಿದ್ದೀರಿ ಎಂದು ಪ್ರಶ್ನೆ ಮಾಡಿದ್ದು, ಕೋಪಗೊಂಡ ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾಳೆ. ಅಷ್ಟೇ ಅಲ್ಲದೇ ಪೊಲೀಸ್ ವಾಕಿಟಾಕಿ ಮುರಿದು ಆಕ್ರೋಶ ವ್ಯಕ್ತಪಡಿಸಿದ್ದಾಳೆ.
Advertisement
Advertisement
ಮಹಿಳೆ ದಂಡ ಕಟ್ಟಿದ ನಂತರ ತನ್ನ ಮೊಬೈಲ್ ನಲ್ಲಿ ಚಿತ್ರೀಕರಣ ಮಾಡುತ್ತಿದ್ದಳು. ಇದರಿಂದ ಕೋಪಗೊಂಡ ಪೊಲೀಸರು ಮಹಿಳೆ ಹಾಗೂ ಆಕೆಯ ಸ್ಕೂಟಿಯನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗುವ ಯತ್ನ ಮಾಡಿದ್ದಾರೆ. ಆಗ ದಂಡ ಕಟ್ಟಿದರು ಬೈಕ್ ಬಿಡದಿದ್ದಕ್ಕೆ ಪೊಲೀಸರ ವಿರುದ್ಧ ಮಹಿಳೆ ಸಿಡಿಮಿಡಿಗೊಂಡಿದ್ದಾಳೆ. ಬಳಿಕ ಪೊಲೀಸರು ಹಾಗೂ ಮಹಿಳೆ ನಡುವೆ ಜಟಾಪಟಿ, ಕಿತ್ತಾಟ ನಡೆದಿದ್ದು, ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
Advertisement
ಕೊನೆಗೂ ಪೊಲೀಸರು ಪೊಲೀಸ್ ಠಾಣೆಗೆ ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಪೊಲೀಸರು ನನ್ನ ಮೇಲೆ ಹಲ್ಲೆ ಮಾಡಿದ್ದು, ಕೈಗೆ ಪೆಟ್ಟಾಗಿದೆ ಎಂದು ಮಹಿಳೆ ಆರೋಪಿಸಿದ್ದಾಳೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv