LatestMain PostNational

ಹೆತ್ತ ಮಕ್ಕಳ ಮುಂದೆಯೇ ಮಹಿಳೆಗೆ ಚಾಕುವಿನಿಂದ ಇರಿದ ದುಷ್ಕರ್ಮಿ

ನವದೆಹಲಿ: ಹೆತ್ತ ಮಕ್ಕಳ ಮುಂದೆಯೇ ಮಹಿಳೆಯೊಬ್ಬಳನ್ನು ವ್ಯಕ್ತಿಯೋರ್ವ ಚಾಕುವಿನಿಂದ ಇರಿದು ಕೊಂದಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ಘಟನೆ ಕುರಿತಂತೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸಾಗರ್ ಪುರ್ ಪೊಲೀಸ್ ಠಾಣೆಗೆ ಕರೆಬಂದಿದ್ದು, ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ತಲುಪಿ, ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಸುಪ್ರಭಾತ ಸೇವೆಗೆ ಅನುಮತಿ ನೀಡಿ- ಹಿಂದೂ ಮುಖಂಡರಿಂದ ಮತ್ತೊಂದು ಬೇಡಿಕೆ

ಸದ್ಯ ಘಟನೆ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಹಿಳೆ ತನ್ನ ಮಕ್ಕಳೊಂದಿಗೆ ಮನೆಗೆ ಹೋಗುತ್ತಿದ್ದ ವೇಳೆ ಆರೋಪಿ ಆಕೆಯನ್ನು ಹಿಂಬಾಲಿಸಿದ್ದಾನೆ. ನಂತರ ಮಹಿಳೆಗೆ ಚಾಕುವಿನಿಂದ ಇರಿದು ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಚಾರ್ಮಾಡಿ ಘಾಟ್‌ನ ದೇಗುಲದಲ್ಲಿ ಹುಂಡಿ ಹಣ ಕಳವು ಮಾಡುತ್ತಿದ್ದವನಿಗೆ ಸ್ಥಳೀಯರಿಂದ ಧರ್ಮದೇಟು

crime

ಈ ಕುರಿತಂತೆ ತನಿಖೆ ವೇಳೆ ಮಹಿಳೆ ಮತ್ತು ಆರೋಪಿ ಈ ಹಿಂದೆ ನೆರೆಹೊರೆಯವರಾಗಿದ್ದರು. ಆದರೆ ಕೊಲೆ ಮಾಡಲು ಕಾರಣವೇನು ಎಂಬುವುದರ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಆರೋಪಿ ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದು, ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

Leave a Reply

Your email address will not be published.

Back to top button