ಬೆಂಗಳೂರು: ಚಿನ್ನದಂಗಡಿ ಮಾಲೀಕರಿಗೆ ಮಹಿಳೆಯಿಂದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವರ್ತೂರ್ ಪ್ರಕಾಶ್ (Varthur Prakash) ಇಂದು ಪೊಲೀಸರ ವಿಚಾರಣೆಗೆ ಹಾಜರಾಗಲಿದ್ದಾರೆ.
ಕಮರ್ಷಿಯಲ್ ಸ್ಟ್ರೀಟ್ ಪೊಲೀಸರಿಂದ (Commercial Street Police) ವರ್ತೂರ್ ಪ್ರಕಾಶ್ ವಿಚಾರಣೆ ನಡೆಯಲಿದೆ. ಪೊಲೀಸರು ಈಗಾಗಲೇ ವರ್ತೂರ್ ಪ್ರಕಾಶ್‌ಗೆ ನೋಟಿಸ್ ನೀಡಿದ್ದು, ಶ್ವೇತಾ ಎಂಬ ಮಹಿಳೆಯನ್ನು ಬಂಧಿಸಿದ್ದಾರೆ. ಮಹಿಳೆ ವರ್ತೂರ್ ಪ್ರಕಾಶ್ ಹೆಸರೇಳಿ ಚಿನ್ನದ ವರ್ತಕರ ಬಳಿ ಚಿನ್ನ ಪಡೆದಿದ್ದಳು. ಸುಮಾರು ಎರಡೂವರೆ ಕೋಟಿ ರೂ. ಚಿನ್ನವನ್ನು ಮಹಿಳೆ ಖರೀದಿಸಿದ್ದು, ಚಿನ್ನ ಪಡೆಯುವಾಗ ವರ್ತೂರ್ ಪ್ರಕಾಶ್ ಹೆಸರು ಹೇಳಿರೋದು ಬಯಲಾಗಿದೆ. ಜೊತೆಗೆ ವರ್ತೂರ್ ಪ್ರಕಾಶ್ ಮನೆಯ ವಿಳಾಸ ಕೂಡ ನೀಡಿದ್ದಳು. ಚಿನ್ನದ ಹಣವನ್ನು ವರ್ತೂರ್ ಪ್ರಕಾಶ್ ಕೊಡುವುದಾಗಿ ಮಹಿಳೆ ಚಿನ್ನ ಪಡೆದಿದ್ದಳು. ಅಡ್ರಸ್ ತೆಗೆದುಕೊಂಡು ಅಂಗಡಿ ಮಾಲೀಕರು ಮನೆಗೆ ಹೋದಾಗ ವಂಚನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ತವರು ಜಿಲ್ಲೆಯಲ್ಲಿ ಟೆಂಪಲ್ ರನ್ – ರೇವಣ್ಣ ಜೊತೆಗೂಡಿ ಮನೆದೇವರ ದರ್ಶನ ಪಡೆದ ಕುಮಾರಸ್ವಾಮಿ
ತನಗೂ ವ್ಯವಹಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ವರ್ತೂರ್ ಪ್ರಕಾಶ್ ಹೇಳಿದ್ದರು. ಹೀಗಾಗಿ ಕಮರ್ಷಿಯಲ್ ಸ್ಟ್ರೀಟ್ ಠಾಣೆಗೆ ಅಂಗಡಿ ಮಾಲೀಕರು ದೂರು ನೀಡಿದ್ದರು. ಈ ಹಿನ್ನಲೆ ಇಂದು ವರ್ತೂರು ಪ್ರಕಾಶ್ ವಿಚಾರಣೆಗೆ ಹಾಜರಾಗಲು ನೊಟೀಸ್ ನೀಡಲಾಗಿದೆ. ಇದನ್ನೂ ಓದಿ: ಸುವರ್ಣಸೌಧದಲ್ಲಿ ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನ ಪ್ರಕರಣ – ಹೆಬ್ಬಾಳ್ಕರ್ ಆಪ್ತ ಸೇರಿ 10 ಜನರ ವಿರುದ್ಧ FIR
ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಆರೋಪಿ ಶ್ವೇತಾ ಗೌಡಳನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಫ್ರೇಜರ್ ಟೌನ್ ಎಸಿಪಿ ಗೀತಾ ನೇತೃತ್ವದ ತಂಡದಿಂದ ವಿಚಾರಣೆ ನಡೆಸಲಾಗುತ್ತಿದೆ. ವಿಚಾರಣೆ ವೇಳೆ ವರ್ತೂರ್ ಪ್ರಕಾಶ್ ಹಾಗೂ ಆರೋಪಿ ಪೋನ್‌ನಲ್ಲಿ ಸತತ ಕಾಂಟಾಕ್ಟ್‌ನಲ್ಲಿ ಇರೋದು ಪತ್ತೆಯಾಗಿದೆ. ಅಲ್ಲದೇ ವರ್ತೂರ್ ಪ್ರಕಾಶ್ ಜೊತೆ ಆರೋಪಿತೆ ಇರುವ ಸಿಸಿಟಿವಿ ಪೂಟೇಜ್, ಕಾಲ್ ಸಿಡಿಆರ್ ಕೂಡ ಪೊಲೀಸರು ಕಲೆ ಹಾಕಿದ್ದಾರೆ. ಇದನ್ನೂ ಓದಿ: Brazil | ಮನೆ, ಮಳಿಗೆಗಳಿಗೆ ಅಪ್ಪಳಿಸಿದ ಲಘು ವಿಮಾನ – ಎಲ್ಲಾ 10 ಮಂದಿ ಪ್ರಯಾಣಿಕರು ದುರ್ಮರಣ
ಕೆಲ ದಿನಗಳ ಹಿಂದೆ ಕಮರ್ಷಿಯಲ್ ಮುಖ್ಯರಸ್ತೆಯ ನವರತ್ನ ಜ್ಯುವೆಲ್ಸ್ ಮಾಲೀಕ ಸಂಜಯ್ ಭಾಷ್ನಾ ಅವರನ್ನು ಶ್ವೇತಾಗೌಡ ಭೇಟಿಯಾಗಿದ್ದಳು. ತಾನು ಚಿನ್ನಾಭರಣ ವ್ಯಾಪಾರ ಆರಂಭಿಸುತ್ತಿದ್ದು, ನಿಮ್ಮಿಂದಲೇ ಆಭರಣ ಖರೀದಿಸುತ್ತೇನೆ ಎಂದಿದ್ದಳು. ಇದಕ್ಕೆ ಸಂಜಯ್ ಸಹ ಸಮ್ಮಿತಿಸಿದ್ದರು. ಆಕೆಯ ಮಾತು ನಂಬಿ ಆರಂಭದಲ್ಲಿ ಎರಡು ಮೂರು ಬಾರಿ ಶ್ವೇತಾ ನೀಡಿದ್ದ ಮನೆ ವಿಳಾಸಕ್ಕೆ ಚಿನ್ನಾಭರಣ ಕಳುಹಿಸಿದ್ದರು. ಇದನ್ನೂ ಓದಿ: ರಸ್ತೆಯಲ್ಲಿ ಆಟವಾಡ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ಅಟ್ಯಾಕ್
ಹೀಗೆ ವಿಶ್ವಾಸಗಳಿಸಿದ ಶ್ವೇತಾ, ಕೊನೆಗೆ ನವರತ್ನ ಜ್ಯುವೆಲರ್ಸ್‌ನಲ್ಲಿ 2.42 ಕೋಟಿ ರೂ. ಮೌಲ್ಯದ 2.945 ಕೆಜಿ ಚಿನ್ನ ಹಾಗೂ ವಜ್ರಾಭರಣ ಖರೀದಿಸಿ ವಂಚಿಸಿದ್ದಳು. ಅಲ್ಲದೆ ಚಿನ್ನ ಮರಳಿಸಿ ಇಲ್ಲ ಹಣ ಪಾವತಿಸುವಂತೆ ಕೇಳಿದ್ದ ಚಿನ್ನದ ವ್ಯಾಪಾರಿಗೆ ಆಕೆ ಧಮ್ಕಿ ಹಾಕಿದ್ದಳು. ಇದನ್ನೂ ಓದಿ: ಹಣಕಾಸಿನ ವಂಚನೆ ತಡೆಗೆ ಆರ್‌ಬಿಐ ಅಭಿವೃದ್ಧಿಪಡಿಸಲಿದೆ AI ತಂತ್ರಜ್ಞಾನ! ಇದು ಹೇಗೆ ಕಾರ್ಯನಿರ್ವಹಿಸುತ್ತದೆ?
ಈ ಬಗ್ಗೆ ಜ್ಯುವೆಲರ್ಸ್‌ನ ಮಾಲಿಕ ಸಂಜಯ್ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಬಳಿಕ ಪುಲಿಕೇಶಿನಗರ ಉಪವಿಭಾಗದ ಎಸಿಪಿ ಗೀತಾ ಅವರು ತನಿಖೆ ಕೈಗೆತ್ತಿಕೊಂಡಿದ್ದರು. ಇದನ್ನು ತಿಳಿದ ಆರೋಪಿ ಕೂಡಲೇ ನಗರದಿಂದ ಪರಾರಿಯಾಗಿದ್ದಳು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ತಂಡವು, ತಾಂತ್ರಿಕ ಮಾಹಿತಿ ಆಧರಿಸಿ ಮೈಸೂರಿನಲ್ಲಿ ಆಕೆಯನ್ನು ಬಂಧಿಸಲಾಯಿತು. ಜೊತೆಗೆ ಆರೋಪಿಯಿಂದ ಚಿನ್ನ, ಕಾರು ಸೇರಿದಂತೆ ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ: ತಮಿಳುನಾಡು ಅರಣ್ಯ ಪ್ರದೇಶದಿಂದ ರಾಜ್ಯಕ್ಕೆ ಕಾಡಾನೆಗಳು ಎಂಟ್ರಿ – ರೈತರು, ಕಾಫಿ ಬೆಳೆಗಾರರು ಹೈರಾಣು