ಭುವನೇಶ್ವರ: ಪತ್ನಿಯೊಬ್ಬಳು ತನ್ನ ಪತಿ ನಿದ್ದೆ ಮಾಡುತ್ತಿದ್ದಾಗ ಆತನ ಮರ್ಮಾಂಗ ಕತ್ತರಿಸಿದ ಘಟನೆ ಭಾನುವಾರ ಒಡಿಶಾದ ನಬರಾಂಗಪುರ ಜಿಲ್ಲೆಯಲ್ಲಿ ನಡೆದಿದೆ.
ಪತ್ನಿ ತನ್ನ ಪತಿಗೆ ಅಕ್ರಮ ಸಂಬಂಧ ಇದೆ ಎಂದು ಅನುಮಾನಪಟ್ಟಿದ್ದಳು. ಹೀಗಾಗಿ ಆತ ಗಾಢ ನಿದ್ರೆಯಲ್ಲಿದ್ದಾಗ ಪತ್ನಿ ಆತನ ಮರ್ಮಾಂಗವನ್ನು ಕತ್ತರಿಸಿದ್ದಾಳೆ. ಈ ಘಟನೆ ನಂತರ ಪತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆತನ ಸ್ಥಿತಿ ಗಂಭೀರವಾಗಿದೆ.
ಮಹಿಳೆ ಮಧ್ಯರಾತ್ರಿ ಚೂಪಾದ ಕತ್ತಿಯಿಂದ ತನ್ನ ಪತಿಯ ಮರ್ಮಾಂಗವನ್ನು ಕತ್ತರಿಸಿದ್ದಳು. ನೋವನ್ನು ತಾಳಲಾರದೇ ಪತಿ ಜೋರಾಗಿ ಕಿರುಚಲು ಶುರು ಮಾಡಿದ್ದನು. ಆಗ ಅಕ್ಕಪಕ್ಕದ ಮನೆಯವರು ಬಂದು ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಹಿಳೆಯನ್ನು ಬಂಧಿಸಿದ್ದಾರೆ. ತಮಿಳುನಾಡಿನಲ್ಲಿ ಕೆಲಸ ಮಾಡುತ್ತಿದ್ದ ಪತಿ ಮೂರು ತಿಂಗಳ ಹಿಂದೆ ಮನೆಗೆ ಬಂದಿದ್ದ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv