ಚಿಕ್ಕಬಳ್ಳಾಪುರ/ಬೆಂಗಳೂರು: ಮನೆ ಮಾಲೀಕರು ಮತ್ತು ಪೊಲೀಸರ ಕಿರುಕುಳದಿಂದ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ.
ಮಂಜುಳಾ (35) ನೇಣಿಗೆ ಶರಣಾದ ಮಹಿಳೆ. ದೇವನಹಳ್ಳಿ ಪಟ್ಟಣದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾಗುವ ಮೊದಲು ಮಂಜುಳಾ ಮೊಬೈಲ್‍ನಲ್ಲಿ ಸೆಲ್ಫಿ ವಿಡಿಯೋ ಮಾಡಿದ್ದಾರೆ.
Advertisement
Advertisement
ಬಾಡಿಗೆ ಮನೆ ವಿಚಾರವಾಗಿ ಮಾಲೀಕರು ಮತ್ತು ಮಂಜುಳಾ ನಡುವೆ ಜಗಳ ನಡೆದಿತ್ತು. ಜಗಳದ ಹಿನ್ನೆಲೆಯಲ್ಲಿ ಮಾಲೀಕರು ಮತ್ತು ಮೃತಳ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟೆಲೇರಿದ್ದರು. ಈ ವೇಳೆ ಮನೆ ಮಾಲೀಕ ಸೋಮಶೇಖರ್, ಗೀತಾ ಮತ್ತು ಬಿಂದು ಪೊಲೀಸರ ಮುಂದೆಯೇ ಮಂಜುಳಾ ಮತ್ತು ಪತಿ ಸುಬ್ರಮಣಿಗೆ ಹಲ್ಲೆ ಮಾಡಿದ್ದರು. ಇದರಿಂದ ಮನನೊಂದ ಮಂಜುಳಾ, ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
Advertisement
Advertisement
ವಿಡಿಯೋದಲ್ಲಿ ಏನಿದೆ?
ದೂರು ಕೊಡಲು ಪೊಲೀಸ್ ಠಾಣೆಗೆ ಹೋದಾಗ ನನ್ನ ಮಾಂಗಲ್ಯವನ್ನು ಕಿತ್ತುಕೊಂಡು ತುಂಬಾನೇ ಹಿಂಸೆ ಕೊಟ್ಟಿದ್ದಾರೆ. ಅಷ್ಟೇ ಅಲ್ಲದೆ ಸೋಮಶೇಖರ್, ಗೀತಾ ಮತ್ತು ಬಿಂದು ಮೂವರೂ ನನಗೆ ಮತ್ತು ಪತಿಗೆ ಚೆನ್ನಾಗಿ ಹೊಡೆದಿದ್ದಾರೆ. ಆದರೆ ಪೊಲೀಸರು ಯಾಕೆ ಹೊಡೆಯುತ್ತಿದ್ದೀರಿ ಎಂದು ಕೂಡ ಕೇಳಿಲ್ಲ. ನಾನು ಪತಿಯನ್ನು ಆಸ್ಪತ್ರೆಗೆ ಕಳುಹಿಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ಈ ಮೂವರು ಕಾರಣರಾಗಿದ್ದು ಅವರನ್ನು ಬಿಡಬೇಡಿ. ಬಡವರಿಗೆ ನ್ಯಾಯ ಕೊಡಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.