ಚಾಮರಾಜನಗರ: ಕಾವೇರಿ ನದಿಗೆ (Cauvery River) ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ರಶ್ಮಿ (39) ಎಂದು ಗುರುತಿಸಲಾಗಿದೆ. ಈಕೆ ಪತಿ ಲೋಕೇಶ್ ಹಾಗೂ ಮಕ್ಕಳ ಜೊತೆ ಬೆಂಗಳೂರಿನಲ್ಲಿ (Bengaluru ) ನೆಲೆಸಿದ್ದಳು. ಸಂಸಾರದ ವಿಚಾರದಲ್ಲಿ ಬೇಸತ್ತು ವೆಸ್ಲಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಇದನ್ನೂ ಓದಿ: ಮನೆಯೊಳಗಿಟ್ಟಿದ್ದ ಪೆಟ್ರೋಲ್‌ನಿಂದ ಅಗ್ನಿ ಅವಘಡ – ಮಾಜಿ ಯೋಧ ಸಜೀವ ದಹನ
ಶವವನ್ನು ನದಿಯಿಂದ ಪೊಲೀಸರು ಮೇಲೆತ್ತಿದ್ದಾರೆ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕುರಿ ಶೆಡ್‌ಗೆ ಆಕಸ್ಮಿಕ ಬೆಂಕಿ – 30 ಕುರಿಗಳು ಸಜೀವ ದಹನ

