ಬೆಂಗಳೂರು: ಮಹಿಳೆಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ.
ಮರಿಯಮ್ಮ ಸಾವನ್ನಪ್ಪಿದ ಮಹಿಳೆ. ಬುಧವಾರ ಮದ್ಯಾಹ್ನ ಕೋರಮಂಗಲದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಅತ್ತೆ ಮನೆಯವರೇ ಕೊಂದು ಹಾಕಿದ್ದಾರೆ ಎಂದು ಸಂಬಂಧಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಮರಿಯಮ್ಮಗೆ ಒಂದು ವರ್ಷದ ಹಿಂದೆ ಇಝ್ರೇಲ್ ಎಂಬಾತನ ಜೊತೆ ಮದುವೆಯಾಗಿತ್ತು. ಬುಧವಾರವಷ್ಟೆ ವಿವಾಹ ವಾರ್ಷಿಕೋತ್ಸವ ಇತ್ತು. ಆದರೆ ಇದ್ದಕ್ಕಿದ್ದಂತೆ ಮರಿಯಮ್ಮ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ನೇಣು ಬಿಗಿದು ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ.
ಮೃತ ಮರಿಯಮ್ಮ ಅವರ ಕುಟುಂಬದವರು ಪತಿಯ ಬಗ್ಗೆ ಯಾವುದೇ ರೀತಿಯ ಅನುಮಾನ ವ್ಯಕ್ತಪಡಿಸಿಲ್ಲ. ಬದಲಿಗೆ ಅವರ ಕುಟುಂಬಸ್ಥರ ಮೇಲೆ ಆರೋಪ ಮಾಡುತ್ತಿದ್ದಾರೆ. ಸದ್ಯಕ್ಕೆ ಮೃತದೇಹವನ್ನು ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಮರಿಯಮ್ಮ ಆತ್ಮಹತ್ಯೆ ಮಾಡಿಕೊಂಡರೋ ಅಥವಾ ಕೊಲೆ ಮಾಡಿದ್ದಾರೋ ಎಂಬುದು ಪೊಲೀಸರ ತನಿಖೆಯಿಂದ ತಿಳಿಯಬೇಕಿದೆ.
ಈ ಕುರಿತು ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv