ಬೆಂಗಳೂರು: ಸೆಲ್ಫಿ ವಿಡಿಯೋ ಮಾಡಿ ನಂತರ 22 ವರ್ಷದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಶ್ರೀನಿವಾಗಿಲುನಲ್ಲಿ ನಡೆದಿದೆ.
22 ವರ್ಷ ಅಂಕಿತ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಅಂಕಿತಾ ತನ್ನ ಮೊಬೈಲಿನಲ್ಲಿ ವಿಡಿಯೋ ಮಾಡಿ ಮನೆಯಲ್ಲಿ ಮರದ ಪಟ್ಟಿಗೆ ತಮ್ಮ ದುಪ್ಪಟ್ಟದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ಅಂಕಿತ ಮೊದಲನೇ ಗಂಡನನ್ನ ಬಿಟ್ಟು ಮತ್ತೊಬ್ಬನೊಂದಿಗೆ ಮದುವೆ ಆಗಿದ್ದರು. ಆದರೆ ಅಂಕಿತ ಎರಡನೇ ಮದುವೆ ಕೊಡ ಬ್ರೇಕಪ್ ಆಗಿತ್ತು. ಕೊನೆಗೆ ಮೊದಲನೇ ಗಂಡನ ಕೈಬಿಟ್ಟು ತಪ್ಪು ಮಾಡಿದೆ ಎಂದು ನೊಂದು ಅಂಕಿತಾ ನೇಣಿಗೆ ಶರಣಾಗಿದ್ದಾರೆ. ವಿಡಿಯೋದಲ್ಲಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನನ್ನು ಕ್ಷಮಿಸಿ ಎಂದು ಕುಟುಂಬದವರ ಬಳಿ ಅಳುತ್ತಾ ಕ್ಷಮೆಯಾಚಿಸಿದ್ದಾರೆ.
ಈ ಘಟನೆ ಸಂಬಂಧ ವಿವೇಕ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv