ಹಾಸನ: ಅಂಗೈಯಲ್ಲಿ ಕಾರಣ ತಿಳಿಸಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಗ್ರಾಮದಲ್ಲಿ ನಡೆದಿದೆ.
ಜೀಕನಹಳ್ಳಿಯ ವೀಣಾ(42) ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾರೆ. ವೀಣಾ ಅವರು ವಂಚನೆಯಿಂದ ಆಸ್ತಿ ಲಪಟಾಯಿಸಿದ್ದಾರೆ ಎಂದು ಲೋಕೇಶ್ ವಿರುದ್ಧ ಆರೋಪ ಮಾಡಿದ್ದಾರೆ.
ವೀಣಾ ಅವರು ತಮ್ಮದೇ ಗ್ರಾಮದ ಲೋಕೇಶ್ ವಿರುದ್ಧ ಕೈಮೇಲೆ ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ.
ಕುಟುಂಬಕ್ಕೆ ಮೋಸ ಮಾಡಿ ಎರಡು ಎಕರೆ ಭೂಮಿಯನ್ನ ತನ್ನ ಹೆಸರಿಗೆ ಬರೆಸಿಕೊಂಡಿದ್ದಾರೆ ಎಂದು ಲೋಕೇಶ್ ವಿರುದ್ಧ ಆರೋಪಿಸಿ ವೀಣಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲೋಕೇಶ್ ತಾನು ಪತ್ರಕರ್ತ ತನಗೆ ಏನೂ ಮಾಡಲು ಆಗಲ್ಲ ಎಂದು ಬೆದರಿಸುತ್ತಿದ್ದನು ಎಂದು ವೀಣಾ ಆರೋಪಿಸಿದ್ದಾರೆ. ಅಲ್ಲದೆ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಬರೆದಿಟ್ಟು ಮಹಿಳೆ ಸಾವಿಗೆ ಶರಣಾಗಿದ್ದಾರೆ.
ಗಂಡಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.