ಕೋಲಾರ: ಪತಿಯ ಕುಟುಂಬಸ್ಥರಿಂದ ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ (Kolar) ಮಾಲೂರು ತಾಲೂಕಿನ ಕಾಡದೇನಹಳ್ಳಿಯಲ್ಲಿ ನಡೆದಿದೆ.
ರಶ್ಮಿ(25) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ರಶ್ಮಿ, ಪತಿ ಮನೆಯಲ್ಲೇ ಡೆತ್‌ನೋಟ್ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿನೇಶ್ ಹಾಗೂ ರಶ್ಮಿ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. 1 ವರ್ಷದ ಹಿಂದೆ ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು. ಇದನ್ನೂ ಓದಿ: ಒಬ್ಬ ಪಾಕಿಸ್ತಾನಿ ಪ್ರಜೆಯೂ ಭಾರತದಲ್ಲಿ ಉಳಿಯಬಾರದು – ರಾಜ್ಯಗಳಿಗೆ ಅಮಿತ್ ಶಾ ನಿರ್ದೇಶನ
ರಶ್ಮಿ ಡೆತ್‌ನೋಟ್‌ನಲ್ಲಿ ʻರೀ ಸಾರಿ ನಿಮ್ಮ ಅಮ್ಮ, ದೊಡ್ಡಮ್ಮನ ಕಾಟ ತಡೆಯೋಕೆ ಆಗುತ್ತಿಲ್ಲ. ಮದುವೆಯಾಗಿ ಬಂದಾಗಿನಿಂದ ನೆಮ್ಮದಿಯೇ ಇಲ್ಲ. ನನ್ನಿಂದ ಸಹಿಸಿಕೊಳ್ಳೋಕೆ ಆಗುತ್ತಿಲ್ಲ. ನನ್ನ ಗಂಡ ಒಳ್ಳೆಯವನೇ, ಆದರೆ ಮನೆಯವರು ಒಳ್ಳೆಯವರಲ್ಲ. ಅದಕ್ಕೆ ನೀವು ಬರುವಷ್ಟರಲ್ಲೇ ಸಾಯುತ್ತಿದ್ದೇನೆ, ಬೈʼ ಎಂದು ಬರೆದಿದ್ದಾರೆ. ಇದನ್ನೂ ಓದಿ: ಅನಧಿಕೃತ, ಅಕ್ರಮ ಬಡಾವಣೆ ನಿರ್ಮಾಣ ಮಾಡಿದ್ರೆ ಸರ್ಕಾರದಿಂದಲೇ ಮುಟ್ಟುಗೋಲು – ಕೃಷ್ಣಬೈರೇಗೌಡ
ಇತ್ತ ತಂದೆ ತಾಯಿಗೂ ಸಾರಿ ಕೇಳಿರುವ ರಶ್ಮಿ, ಅಮ್ಮ ಇಷ್ಟು ದಿನ ಇಲ್ಲಿನ ಕಷ್ಟ ಸಹಿಸಿಕೊಂಡೆ. ಇಲ್ಲಿಯವರು ಒಳ್ಳೆಯವರಲ್ಲ. ವರದಕ್ಷಿಣೆ ತಂದಿಲ್ಲ ಎಂದು ಹೊಡೆಯುತ್ತಾರೆ ಎಂದು ಬರೆದು ಪತಿ ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ 3 ತಿಂಗಳ ಹಿಂದೆ ರಶ್ಮಿಗೆ ಗರ್ಭಪಾತವಾಗಿದ್ದು, ವರದಕ್ಷಿಣೆ ನೀಡಿಲ್ಲ. ಮಗು ಆಗಿಲ್ಲ ಎಂದು ಮಾನಸಿಕ ಹಿಂಸೆ ನೀಡುತ್ತಿದ್ದರು ಎನ್ನಲಾಗಿದೆ. ಇದನ್ನೂ ಓದಿ: ನಾವು ಭಯೋತ್ಪಾದನೆಯನ್ನು ಬೆಂಬಲಿಸಿದ್ದೇವೆ – ಒಪ್ಪಿಕೊಂಡ ಪಾಕಿಸ್ತಾನ
ಪ್ರಕರಣದ ಆರೋಪಿಗಳಾದ ಪತಿ ದಿನೇಶ್ ಗೌಡ, ಮಾವ ಅಪ್ಪಾಜಿ ಗೌಡ, ಅತ್ತೆ ಸರೋಜಮ್ಮ, ದೊಡ್ಡತ್ತೆ ರತ್ನಮ್ಮರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.